Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ರಾಮ್​ ಚರಣ್​ ಜೊತೆ ಕೈ ಜೋಡಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕ; ಇಲ್ಲಿದೆ ಹೊಸ ಸಮಾಚಾರ

Abhishek Agarwal: ಟಾಲಿವುಡ್​ ನಟ ರಾಮ್​ ಚರಣ್​ ಜೊತೆ ಅಭಿಷೇಕ್​ ಅಗರ್​ವಾಲ್​ ಅವರು ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿಬರಲಿದೆ.

Ram Charan: ರಾಮ್​ ಚರಣ್​ ಜೊತೆ ಕೈ ಜೋಡಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕ; ಇಲ್ಲಿದೆ ಹೊಸ ಸಮಾಚಾರ
ಅಭಿಷೇಕ್​ ಅಗರ್​ವಾಲ್​, ರಾಮ್​ ಚರಣ್​
Follow us
ಮದನ್​ ಕುಮಾರ್​
|

Updated on: May 27, 2023 | 3:12 PM

2022ರಲ್ಲಿ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಜನರು ಈಗಲೂ ಚರ್ಚೆ ಮಾಡುತ್ತಲೇ ಇದ್ದಾರೆ. ಅಂಥ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ (Abhishek Agarwal) ಅವರು ಈಗ ಬೇರೆ ಬೇರೆ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಸೌತ್​ ಸಿನಿಮಾ ಇಂಡಸ್ಟ್ರಿ ಜೊತೆಗೂ ಅವರು ನಂಟು ಹೊಂದಿದ್ದಾರೆ. ತೆಲುಗಿನ ‘ಕಾರ್ತಿಕೇಯ 2’ ಸಿನಿಮಾವನ್ನು ಅವರು ನಿರ್ಮಿಸಿದ್ದರು. ಈಗ ಟಾಲಿವುಡ್​ ನಟ ರಾಮ್​ ಚರಣ್​ ಜೊತೆ ಅಭಿಷೇಕ್​ ಅಗರ್​ವಾಲ್​ ಅವರು ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿಬರಲಿದೆ. ಹಾಗಂತ ಈ ಸಿನಿಮಾದಲ್ಲಿ ರಾಮ್​ ಚರಣ್​ (Ram Charan) ಅವರು ಹೀರೋ ಆಗಿ ನಟಿಸುವುದಿಲ್ಲ. ಬದಲಿಗೆ ಅವರು ಕೂಡ ನಿರ್ಮಾಪಕನ ಜವಾಬ್ದಾರಿ ನಿಭಾಯಿಸಲಿದ್ದಾರೆ. ಹೌದು, ರಾಮ್​ ಚರಣ್​ ಮತ್ತು ಅಭಿಷೇಕ್​ ಅಗರ್​ವಾಲ್​ ಅವರು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂಬುದು ಲೇಟೆಸ್ಟ್​ ನ್ಯೂಸ್​.

ರಾಮ್ ಚರಣ್ ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ವಿ ಮೆಗಾ ಪಿಕ್ಚರ್ಸ್’ ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿರುವ ಅವರಿಗೆ ಸ್ನೇಹಿತ ‘ಯುವಿ ಕ್ರಿಯೇಷನ್’ನ ವಿಕ್ರಮ್​ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಅವರ ಜೊತೆ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್​’ ಬ್ಯಾನರ್ ಕೂಡ ಕೈ ಜೋಡಿಸುತ್ತಿದೆ. ಈ ಬ್ಯಾನರ್​ ಮತ್ತು ‘ವಿ ಮೆಗಾ ಪಿಕ್ಚರ್ಸ್’ ಜಂಟಿಯಾಗಿ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ಮಾಡಲು ತಯಾರಿ ನಡೆಯುತ್ತಿದೆ. ಈ ಕಾಂಬಿನೇಷನ್​ನಲ್ಲಿ ಬರಲಿರುವ ಚೊಚ್ಚಲ ಸಿನಿಮಾದಲ್ಲಿ ಯುವ ಹೀರೋ ಹಾಗೂ ಹೊಸ ನಿರ್ದೇಶಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಶೀಘ್ರದಲ್ಲಿ ಈ ಪ್ರಾಜೆಕ್ಟ್ ಅನೌನ್ಸ್ ಆಗಲಿದೆ. ವಿಭಿನ್ನ ಕಾಂಟೆಂಟ್ ಅನ್ನು ಪ್ರೇಕ್ಷಕರಿಗೆ ನೀಡಲು ಈ ಎರಡು ಸಂಸ್ಥೆಗಳು ತಯಾರಿ ಮಾಡಿಕೊಂಡಿವೆ.

ಇದನ್ನೂ ಓದಿ: Upasana Konidela: ರಾಮ್​ ಚರಣ್​ ಪತ್ನಿ ಉಪಾಸನಾ ಅದ್ದೂರಿ ಸೀಮಂತ ಸಂಭ್ರಮ; ಅಲ್ಲು ಅರ್ಜುನ್, ಸಾನಿಯಾ ಮಿರ್ಜಾ ಭಾಗಿ

ರಾಮ್​ ಚರಣ್​ ಅವರಿಗೆ ಸಿನಿಮಾ ನಿರ್ಮಾಣದ ಅನುಭವ ಹೊಸದೇನೂ ಅಲ್ಲ. ಈಗಾಗಲೇ ಅವರು ಟಾಲಿವುಡ್​ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಂಪೂರ್ಣ ಹೊಸ ಪ್ರತಿಭೆಗಳಿಗಾಗಿ ವೇದಿಕೆ ಒದಗಿಸಲು ಸಜ್ಜಾಗಿದ್ದಾರೆ. ಈ ಕಾರ್ಯದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಅಭಿಮಾನಿಗಳು ಮತ್ತು ಹಿತೈಷಿಗಳು ಹಾರೈಸುತ್ತಿದ್ದಾರೆ. ಇದರ ಜೊತೆಗೆ ತಮ್ಮದೇ ಸಿನಿಮಾದ ಕೆಲಸಗಳಲ್ಲಿ ರಾಮ್​ ಚರಣ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: Jr NTR: ರಾಮ್​ ಚರಣ್​ ಬರ್ತ್​ಡೇ ಪಾರ್ಟಿಗೆ ಜೂನಿಯರ್​ ಎನ್​ಟಿಆರ್​ ಯಾಕೆ ಬರಲಿಲ್ಲ? ಇಲ್ಲಿದೆ ಕಾರಣ..

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದರು. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದರು. ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ರಾಮ್ ಚರಣ್ ಪಕ್ಕಾ ಫ್ಯಾಮಿಲಿಮ್ಯಾನ್. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ. ಒಪ್ಪಿಕೊಂಡ ಚಿತ್ರದ ಕೆಲಸದ ಜೊತೆ ಕುಟುಂಬಕ್ಕೂ ಹೆಚ್ಚು ಸಮಯ ನೀಡುತ್ತಾರೆ. ಈಗ ಅವರು ತಂದೆ ಆಗುತ್ತಿರುವ ಖುಷಿಯಲ್ಲಿದ್ದಾರೆ. ಅವರ ಪತ್ನಿ ಉಪಾಸನಾ ಈಗ ತುಂಬು ಗರ್ಭಿಣಿ. ಅವರ ಕುಟುಂಬದಿಂದ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ