RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ

RRR Movie | Oscar Awards: ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಒಂದು ಕಾಲ್ಪನಿಕ ಕಥೆಯನ್ನು ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ ಹೇಳಿದ್ದಾರೆ. ಅದ್ದೂರಿ ಮೇಕಿಂಗ್​ನಿಂದಾಗಿ ಈ ಸಿನಿಮಾ ಗಮನ ಸೆಳೆದಿದೆ.

RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ
ಜ್ಯೂ. ಎನ್​ಟಿಆರ್
Follow us
TV9 Web
| Updated By: Digi Tech Desk

Updated on:Jul 19, 2022 | 9:55 AM

ತೆಲುಗಿನ ‘ಆರ್​ಆರ್​ಆರ್​’ (RRR Movie) ಸಿನಿಮಾವನ್ನು ಜನರು ಮೆಚ್ಚಿಕೊಂಡರು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಭರ್ಜರಿ ಕಮಾಯಿ ಆಯಿತು. ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್​ ವೃತ್ತಿಬದುಕಿಗೆ ದೊಡ್ಡ ಮೈಲೇಜ್​ ಸಿಕ್ಕಿತು. ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ಸೋಲಿಲ್ಲದ ಸರದಾರ ಎಂಬುದು ಮತ್ತೊಮ್ಮೆ ಸಾಬೀತಾಯಿತು. ಇಷ್ಟೆಲ್ಲ ಖ್ಯಾತಿ ಗಳಿಸಿದ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಈಗ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ (Oscar Awards) ಸಿಗುವ ಸಾಧ್ಯತೆ ಇದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹಾಲಿವುಡ್​ನ ಅನೇಕ ನಿರ್ದೇಶಕರು ‘ಆರ್​ಆರ್​ಆರ್’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಹಾಗಾಗಿ ಈ ಸಿನಿಮಾ ಆಸ್ಕರ್​ ಪ್ರಶಸ್ತಿ ಗೆಲ್ಲಲಿ ಎಂಬ ಹಂಬಲ ಫ್ಯಾನ್ಸ್​ ಮನದಲ್ಲಿ ಹುಟ್ಟಿಕೊಂಡಿದೆ.

ಇದುವರೆಗೂ ಭಾರತದ ಯಾವುದೇ ಸಿನಿಮಾ ಆಸ್ಕರ್​ ಪ್ರಶಸ್ತಿ ಗೆದ್ದಿಲ್ಲ. ಪ್ರತಿ ಬಾರಿಯೂ ಭಾರತದಿಂದ ಒಂದು ಚಿತ್ರವನ್ನು ಆಸ್ಕರ್​ ಪ್ರಶಸ್ತಿ ಕಣದ ‘ವಿದೇಶಿ ಭಾಷಾ ಚಿತ್ರ’ ವಿಭಾಗಕ್ಕೆ ಕಳಿಸಲಾಗುತ್ತದೆ. 2023ರ ಆಸ್ಕರ್​ ಸ್ಪರ್ಧೆಗೆ ಭಾರತದಿಂದ ‘ಆರ್​ಆರ್​ಆರ್​’ ಸಿನಿಮಾವನ್ನು ಕಳಿಸಿದರೆ ಖಂಡಿತವಾಗಿಯೂ ಪ್ರಶಸ್ತಿ ಒಲಿಯುತ್ತದೆ ಎಂಬುದು ಕೆಲವರ ಅಭಿಪ್ರಾಯ. ಈ ಕುರಿತು ಜಾಗತಿಕ ಮಟ್ಟದಲ್ಲಿ ಕೆಲವು ಮಾಧ್ಯಮಗಳು ಕೂಡ ಲೇಖನ ಪ್ರಕಟಿಸಿವೆ. ಆ ಬಳಿಕವೇ ಚರ್ಚೆ ಜೋರಾಗಿದೆ.

ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಒಂದು ಕಾಲ್ಪನಿಕ ಕಥೆಯನ್ನು ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ ಹೇಳಿದ್ದಾರೆ. ಕೊಮರಾಮ್​ ಭೀಮ್​ ಎಂಬ ಪಾತ್ರವನ್ನು ಜ್ಯೂ. ಎನ್​ಟಿಆರ್​ ಮಾಡಿದ್ದಾರೆ. ಅಲ್ಲುರಿ ಸೀತಾರಾಮಾ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಅವರಿಗೆ ಜೋಡಿಯಾಗಿ ಬಾಲಿವುಡ್​ ನಟಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಅಜಯ್​ ದೇವಗನ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದ್ದೂರಿ ಮೇಕಿಂಗ್​ನಿಂದಾಗಿ ಈ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಆಸ್ಕರ್​ ಪ್ರಶಸ್ತಿ ಗೆಲ್ಲಬೇಕು ಎಂದರೆ ಒಂದಷ್ಟು ನಿಯಮಗಳನ್ನು ಪಾಲಿಸಲೇಬೇಕಾಗುತ್ತದೆ. ಆ ನಿಯಮಗಳ ಅನುಸಾರ ತಯಾರಾದ ಚಿತ್ರವನ್ನು ಆಯ್ಕೆ ಮಾಡಿ ಭಾರತದಿಂದ ಒಂದು ಸಿನಿಮಾವನ್ನು ಕಳಿಸಲಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಸಮಿತಿ ಕೂಡ ರಚನೆ ಆಗುತ್ತದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕೂಡ ಹಲವು ಕಾರಣಗಳಿಗಾಗಿ ಗಮನ ಸೆಳೆದಿದೆ. ಈ ಚಿತ್ರಕ್ಕೂ ಆಸ್ಕರ್​ ಗೆಲ್ಲುವ ಸಾಮರ್ಥ್ಯ ಇದೆ ಎಂದು ಅಭಿಮಾನಿಗಳು ಹೇಳುತ್ತಿದ್ದರು.

Published On - 8:59 am, Tue, 19 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ