AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್

ರಾಮ್ ಚರಣ್ ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಈ ಸಂತಸದ ಸಂದರ್ಭದಲ್ಲಿ, ರಾಮ್ ಚರಣ್ ದಂಪತಿಗಳು ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ಕಳುಹಿಸುವ ಮೂಲಕ ಅಚ್ಚರಿ ಮೂಡಿಸಿದರು. ಈ ಸಿಹಿ ಹಂಚಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಚಿತ್ರದಲ್ಲಿ ನಟಿಸುತ್ತಿದ್ದು, ಜಾನ್ವಿ ಕಪೂರ್ ಮತ್ತು ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್
ರಾಮ್ ಚರಣ್ ದಂಪತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 04, 2026 | 10:33 AM

Share

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ.

ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್ ಚರಣ್ ದಂಪತಿಗಳು ಮೆಗಾ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು. ಈ ಸಂತೋಷದ ಸಮಯದಲ್ಲಿ, ಅವರು ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ಕಳುಹಿಸಿದರು. ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಉಡುಗೊರೆಯನ್ನು ಅನ್​ ಬಾಕ್​ ಮಾಡೋ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎರಡು ರೀತಿಯ ಸಿಹಿತಿಂಡಿಗಳಿವೆ.

ಇದನ್ನೂ ಓದಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ

‘ಈ ಉಡುಗೊರೆಗಾಗಿ ರಾಮ್ ಚರಣ್ ಮತ್ತು ಉಪಾಸನಾ ಅವರಿಗೆ ಅಭಿನಂದನೆಗಳು. ಈ ಉಡುಗೊರೆ ಅಪೊಲೊದಿಂದ ಬಂದಿದೆ’ ಎಂದು ಬರೆಯಲಾಗಿದೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ, ಎಲ್ಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಪೊಲೊ ಆಸ್ಪತ್ರೆಗೆ ತಲುಪಿ ಗದ್ದಲ ಸೃಷ್ಟಿಸಿದ್ದರು. ಈ ಸಂದರ್ಭದಲ್ಲಿಯೂ ರಾಮ್ ಚರಣ್ ಮತ್ತು ಅವರ ಪತ್ನಿ ತಮ್ಮ ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ನೀಡಿದ್ದಾರೆ ಎಂಬುದು ವಿಶೇಷ. ಇವರು ಅಭಿಮಾನಿಗಳನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಸಿನಿಮಾ ವಿಷಯಕ್ಕೆ ಬಂದರೆ, ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ಉಪ್ಪೇನಾ’ ಖ್ಯಾತಿಯ ಬುಚಿಬಾಬು ಸನಾ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಕನ್ನಡ ಸೂಪರ್‌ಸ್ಟಾರ್ ಶಿವರಾಜ್ ಕುಮಾರ್ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರೊಂದಿಗೆ ಮಿರ್ಜಾಪುರ ವೆಬ್ ಸರಣಿ ಖ್ಯಾತಿಯ ನಟ ದಿವ್ಯೇಂದು ತ್ರಿಪಾಠಿ, ಜಗಪತಿ ಬಾಬು, ಹಾಸ್ಯನಟ ಸತ್ಯ ಮತ್ತು ಇತರರು ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರದ ‘ಚಿಕಿರಿ..’ ಹಾಡು ಈಗಾಗಲೇ ಯೂಟ್ಯೂಬ್ ಅಲ್ಲಿ ಟ್ರೆಂಡ್ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ