AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾಮ್​ ಚರಣ್​ಗೆ ಗೌರವ ಡಾಕ್ಟರೇಟ್​; ಹಿರಿ ಹಿರಿ ಹಿಗ್ಗಿದ ಅಭಿಮಾನಿಗಳು

ನಟ ರಾಮ್​ ಚರಣ್​ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು 2007ರಲ್ಲಿ. ಅಂದಿನಿಂದ ಇಂದಿನವರೆಗೆ ಅವರ ಸಾಧನೆ ಅಪಾರ. ಈಗಾಗಲೇ ಅನೇಕ ಪ್ರಶಸ್ತಿಗಳು ಅವರಿಗೆ ಸಿಕ್ಕಿವೆ. ಈಗ ರಾಮ್​ ಚರಣ್​ ಅವರ ಮುಡಿಗೆ ಗೌರವ ಡಾಕ್ಟರೇಟ್​ ಮೂಲಕ ಹೊಸ ಗರಿ ಸೇರ್ಪಡೆಯಾಗುತ್ತಿದೆ. ಫ್ಯಾನ್ಸ್​ ಈಗ ಅವರನ್ನು ‘ಡಾ.​ ರಾಮ್​ ಚರಣ್​’ ಎಂದು ಕರೆಯಲು ಪ್ರಾರಂಭಿಸಿದ್ದಾರೆ.

ನಟ ರಾಮ್​ ಚರಣ್​ಗೆ ಗೌರವ ಡಾಕ್ಟರೇಟ್​; ಹಿರಿ ಹಿರಿ ಹಿಗ್ಗಿದ ಅಭಿಮಾನಿಗಳು
ರಾಮ್​ ಚರಣ್
ಮದನ್​ ಕುಮಾರ್​
|

Updated on: Apr 12, 2024 | 2:43 PM

Share

ಟಾಲಿವುಡ್​ ನಟ ರಾಮ್​ ಚರಣ್​ (Ram Charan) ಅವರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್​ ನೀಡಲಾಗುತ್ತಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಸಖತ್​ ಸಂತಸ ಆಗಿದೆ. ಏಪ್ರಿಲ್​ 13ರಂದು ಚೆನ್ನೈನ ವೇಲ್ಸ್​ ಯೂನಿವರ್ಸಿಟಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರಿಗೆ ಗೌರವ ಡಾಕ್ಟರೇಟ್​ (Honorary Doctorate) ಪ್ರದಾನ ಮಾಡಲಾಗುತ್ತಿದೆ. ಸೋಶಿಯಲ್​ ಮೀಡಿಯಾ ಮೂಲಕ ರಾಮ್​ ಚರಣ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ. ಅಭಿಮಾನಿಗಳಂತೂ ಈಗಲೇ ‘ಡಾಕ್ಟರ್​ ರಾಮ್​ ಚರಣ್​’ (Dr Ram Charan) ಎಂದು ಕರೆಯಲು ಆರಂಭಿಸಿದ್ದಾರೆ.

ರಾಮ್​ ಚರಣ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2007ರಲ್ಲಿ. ಅವರ ಮೊದಲ ಸಿನಿಮಾ ‘ಚಿರುತ’. ಅಂದಿನಿಂದ ಇಂದಿನ ತನಕ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈಗಾಗಲೇ ಹಲವು ಪ್ರಶಸ್ತಿಗಳು ಅವರಿಗೆ ಸಿಕ್ಕಿವೆ. ಆಂಧ್ರ ಸರ್ಕಾರದ ‘ನಂದಿ ಪ್ರಶಸ್ತಿ’, ಫಿಲ್ಮ್​ಫೇರ್​, ಸೈಮಾ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದುಕೊಂಡಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿನ ನಟನೆಗೆ ‘ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್​’ಗೆ ನಾಮಿನೇಟ್​ ಆಗಿದ್ದರು. ಈಗ ಅವರ ಮುಡಿಗೆ ಗೌರವ ಡಾಕ್ಟರೇಟ್​ ಮೂಲಕ ಹೊಸ ಗರಿ ಸೇರ್ಪಡೆ ಆಗುತ್ತಿದೆ.

ಇದನ್ನೂ ಓದಿ: ‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ

ಸದ್ಯ ರಾಮ್​ ಚರಣ್​ ಅವರು ‘ಗೇಮ್​ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಶಂಕರ್​ ನಿರ್ದೇಶನ ಮಾಡುತ್ತಿದ್ದಾರೆ. ಚುನಾವಣೆ ಕುರಿತ ಕಥಾವಸ್ತುವನ್ನು ಈ ಸಿನಿಮಾ ಹೊಂದಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ರಾಮ್​ ಚರಣ್​ ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಮೈಸೂರಿನಲ್ಲಿಯೂ ‘ಗೇಮ್​ ಚೇಂಜರ್​’ ಶೂಟಿಂಗ್​ ಆಗಿದೆ ಎಂಬುದು ವಿಶೇಷ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ರಾಮ್ ಚರಣ್​ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗಳ ಬಗ್ಗೆ ಎಗ್ಸೈಟಿಂಗ್​ ಸುದ್ದಿ ಈಗಾಗಲೇ ಸಿಕ್ಕಿದೆ. ‘ಪುಷ್ಪ 2’ ಸಿನಿಮಾದ ನಿರ್ದೇಶಕ ಸುಕುಮಾರ್​ ಅವರು ರಾಮ್​ ಚರಣ್​ ಜೊತೆ ಹೊಸ ಸಿನಿಮಾ ಮಾಡುವುದು ಖಚಿತವಾಗಿದೆ. ಈ ಮೊದಲು ರಾಮ್​ ಚರಣ್​ ಹಾಗೂ ಸುಕುಮಾರ್​ ಕಾಂಬಿನೇಷನ್​ನಲ್ಲಿ ‘ರಂಗಸ್ಥಲಂ’ ಸಿನಿಮಾ ಮೂಡಿಬಂದಿತ್ತು. ಈಗ ಅವರು ಮತ್ತೊಮ್ಮೆ ಒಂದಾಗುತ್ತಿರುವುದರಿಂದ ನಿರೀಕ್ಷೆ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ