AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​

Ram Charan: ಲಾಕ್​ಡೌನ್​ನಿಂದಾಗಿ ಆರ್​ಆರ್​ಆರ್​ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲಾಗಿತ್ತು. ಆದರೆ ಈಗ ಶೂಟಿಂಗ್​ ಸೆಟ್​ಗೆ ಹೋಗಿರುವ ರಾಮ್​ ಚರಣ್​ ಅವರು ಬಹಳ ಉತ್ಸಾಹದಿಂದ ತಮ್ಮ​ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ.

RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​
ಆರ್​ಆರ್​ಆರ್, ರಾಮ್​ ಚರಣ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Jun 21, 2021 | 4:14 PM

Share

ನಿರ್ದೇಶಕ ರಾಜಮೌಳಿ ಹೆಸರು ಕೇಳಿದರೆ ಸಾಕು, ಸಿನಿಪ್ರಿಯರ ಕಿವಿ ಚುರುಕಾಗುತ್ತದೆ. ‘ಬಾಹುಬಲಿ’ ರೀತಿಯ ದೈತ್ಯ ಸಿನಿಮಾ ಮಾಡಿದ ಬಳಿಕವಂತೂ ಅವರ ಮೇಲಿನ ಅಭಿಮಾನ ದುಪ್ಪಟ್ಟಾಯಿತು. ಈಗ ಅವರು ಆರ್​ಆರ್​ಆರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಲಾಕ್​ಡೌನ್​ ಕಾರಣದಿಂದ ಚಿತ್ರದ ಕೆಲಸಗಳು ತಡವಾಗುತ್ತಿತ್ತು. ಈ ಸಿನಿಮಾದ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದರು. ಆರ್​ಆರ್​ಆರ್​ ಚಿತ್ರದಲ್ಲಿ ನಟಿಸುತ್ತಿರುವ ರಾಮ್​ ಚರಣ್​ ಅವರು ಹೊಸ ಸುದ್ದಿ ನೀಡಿದ್ದಾರೆ.

ಹೊಸ ನ್ಯೂಸ್​ ಏನೆಂದರೆ, ಇಷ್ಟು ದಿನ ನಿಂತುಹೋಗಿದ್ದ ಶೂಟಿಂಗ್​ಗೆ ಈಗ ಮತ್ತೆ ಚಾಲನೆ ನೀಡಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗುತ್ತಿರುವುದರ ಹಿನ್ನೆಲೆಯಲ್ಲಿ ತೆಲಂಗಾಣ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹಾಗಾಗಿ ‘ಆರ್​ಆರ್​ಆರ್​’ ಸಿನಿಮಾ ಶೂಟಿಂಗ್​ ಕೂಡ ಪುನಾರಂಭ ಆಗಿದೆ.

ಬಹುದಿನಗಳ ಬಳಿಕ ಶೂಟಿಂಗ್​ ಸೆಟ್​ಗೆ ಹೋಗಿರುವ ರಾಮ್​ ಚರಣ್​ ಅವರು ಬಹಳ ಉತ್ಸಾಹದಿಂದ ತಮ್ಮ​ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಆ ಪಾತ್ರದ ಗೆಟಪ್​ನಲ್ಲಿ ಅವರ ತಮ್ಮ ಮೇಕಪ್​ ಮ್ಯಾನ್​ ಹಾಗೂ ಕೇಶವಿನ್ಯಾಸಕ ಆಲಿಮ್​ ಹಾಕಿಮ್​ ಜೊತೆ ಸೆಲ್ಫಿಗೆ ಪೋಸ್​ ನೀಡಿದ್ದಾರೆ. ‘ಲಾಕ್​ಡೌನ್​ 2.0 ಮುಗಿದ ಬಳಿಕ ಆರ್​ಆರ್​ಆರ್​ ಶುರುವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದೇ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​ ಅವರು ಕೊಮರಾಮ್​ ಭೀಮ್​ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಬಾಲಿವುಡ್​ ನಟಿ ಆಲಿಯಾ ಭಟ್​ ಅವರು ಇದೇ ಮೊದಲ ಬಾರಿಗೆ ‘ಆರ್​ಆರ್​ಆರ್​’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿರುವುದು ವಿಶೇಷ. ಅಲ್ಲದೆ, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಆರ್​ಆರ್​ಆರ್​ ಸಿನಿಮಾ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ಸಿನಿಮಾ ತೆರೆಕಾಣಿಸಬೇಕು ಎಂದು ನಿರ್ಮಾಪಕರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆದರೆ ಲಾಕ್​ಡೌನ್ ಕಾರಣದಿಂದ ಚಿತ್ರದ ಕೆಲಸಗಳು ಲೇಟ್​ ಆಗಿರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ
ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ