AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Box Office Collection: ಹಿಂದಿ ಮಾರುಕಟ್ಟೆಯಲ್ಲಿ ಐದೇ ದಿನಕ್ಕೆ 100 ಕೋಟಿ ರೂ. ಬಾಚಿದ ‘ಆರ್​ಆರ್​ಆರ್​’ ಸಿನಿಮಾ

RRR Movie Box Office Collection: ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮತ್ತು ರಾಜಮೌಳಿ ಅವರಿಗೆ ಉತ್ತರ ಭಾರತದಲ್ಲಿ ಅಪಾರ ಅಭಿಮಾನಿಗಳು ಇದ್ದಾರೆ. ಹಿಂದಿ ಪ್ರೇಕ್ಷಕರಿಂದ ‘ಆರ್​ಆರ್​ಆರ್​’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

RRR Box Office Collection: ಹಿಂದಿ ಮಾರುಕಟ್ಟೆಯಲ್ಲಿ ಐದೇ ದಿನಕ್ಕೆ 100 ಕೋಟಿ ರೂ. ಬಾಚಿದ ‘ಆರ್​ಆರ್​ಆರ್​’ ಸಿನಿಮಾ
ಆರ್​ಆರ್​ಆರ್
TV9 Web
| Edited By: |

Updated on: Mar 30, 2022 | 4:14 PM

Share

ಹಿಂದಿ ಭಾಷಿಕ ರಾಜ್ಯಗಳಲ್ಲಿ ಈಗ ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ ಜೋರಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗುವ ದಕ್ಷಿಣದ ಚಿತ್ರಗಳು ಹಿಂದಿಗೆ ಡಬ್​ ಆಗಿ ರಿಲೀಸ್​ ಆಗುತ್ತಿವೆ. ಉತ್ತರ ಭಾರತದ ಜನರು ಮುಗಿಬಿದ್ದು ಈ ಸಿನಿಮಾಗಳನ್ನು ನೋಡುತ್ತಿದ್ದಾರೆ. ಕಳೆದ ವರ್ಷದ ಕೊನೆಯಲ್ಲಿ ರಿಲೀಸ್​ ಆಗಿದ್ದ ‘ಪುಷ್ಪ’ ಸಿನಿಮಾದ ಹಿಂದಿ ಅವತರಣಿಕೆ ಮೋಡಿ ಮಾಡಿತ್ತು. ಈಗ ‘ಆರ್​ಆರ್​ಆರ್​’ ಸಿನಿಮಾ (RRR Movie) ಧೂಳೆಬ್ಬಿಸುತ್ತಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​ (Jr NTR), ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿರುವ ಈ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಹಿಂದಿ ಪ್ರೇಕ್ಷಕರಿಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಸಿನಿಮಾ ನೋಡುತ್ತಿದ್ದಾರೆ. ಬಾಲಿವುಡ್​ನ ಸ್ಟಾರ್​ ನಟರಿಗೂ ಅಚ್ಚರಿ ಆಗುವ ರೀತಿಯಲ್ಲಿ ದಕ್ಷಿಣದ ಸಿನಿಮಾಗಳು ಉತ್ತರ ಭಾರತದಲ್ಲಿ ಕಮಾಯಿ ಮಾಡುತ್ತಿವೆ. ‘ಆರ್​ಆರ್​ಆರ್​’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ (RRR Movie Box Office Collection) ಕಂಡು ಎಲ್ಲರೂ ಬೆರಗಾಗಿದ್ದಾರೆ. 5 ದಿನಕ್ಕೆ ಈ ಸಿನಿಮಾದ ಹಿಂದಿ ವರ್ಷನ್​ನಿಂದ ಬರೋಬ್ಬರಿ 107 ಕೋಟಿ ರೂಪಾಯಿ ಗಳಿಕೆ ಆಗಿದೆ. ಅದರಿಂದ ಇಡೀ ‘ಆರ್​ಆರ್​​ಆರ್​’ ತಂಡ ಫುಲ್​ ಖುಷ್​ ಆಗಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮತ್ತು ರಾಜಮೌಳಿ ಅವರು ಉತ್ತರ ಭಾರತದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ಆಲಿಯಾ ಭಟ್​ ಮತ್ತು ಅಜಯ್​ ದೇವಗನ್​ ಕೂಡ ನಟಿಸಿರುವುದರಿಂದ ಸಹಜವಾಗಿಯೇ ಹಿಂದಿ ಪ್ರೇಕ್ಷಕರು ಈ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲರೂ ಚಿತ್ರಮಂದಿರಕ್ಕೆ ಬಂದು ‘ಆರ್​ಆರ್​ಆರ್​’ ಸಿನಿಮಾದ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಪ್ರತಿ ದಿನವೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಿದೆ.

ಮೊದಲ ದಿನವಾದ ಶುಕ್ರವಾರ (ಮಾ.25) ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ‘ಆರ್​ಆರ್​ಆರ್​’ ಸಿನಿಮಾ 20.07 ಕೋಟಿ ರೂಪಾಯಿ ಗಳಿಸಿತು. ಎರಡನೇ ದಿನವಾದ ಶನಿವಾರ 24 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಮೂರನೇ ದಿನ 31.50 ಕೋಟಿ ರೂಪಾಯಿ ಆದಾಯ ಹರಿದುಬಂತು. ನಾಲ್ಕನೇ ದಿನ 17 ಕೋಟಿ ಹಾಗೂ 5ನೇ ದಿನ 15.02 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಹಿಂದಿ ವರ್ಷನ್​ನಿಂದ ಒಟ್ಟು 107.59 ಕೋಟಿ ರೂಪಾಯಿ ಗಳಿಕೆ ಆಗಿದೆ ಎಂದು ಟ್ರೇಡ್​ ಅನಾಲಿಸಿಸ್ಟ್​ ತರಣ್​ ಆದರ್ಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂದಿ ಮಾರುಕಟ್ಟೆಯಲ್ಲಿ ‘ಆರ್​ಆರ್​ಆರ್’ ಸಿನಿಮಾ ಶೀಘ್ರವೇ 200 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ ಎಂದು ತರಣ್ ಆದರ್ಶ್​ ಭವಿಷ್ಯ ನುಡಿದಿದ್ದಾರೆ. ಬರೀ ಹಿಂದಿ ವರ್ಷನ್​ ಮಾತ್ರವಲ್ಲದೇ ಇತರೆ ಭಾಷೆಗಳಲ್ಲೂ ಈ ಚಿತ್ರ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಇದರ ಬಾಕ್ಸ್​ ಆಫೀಸ್​ ಕಲೆಕ್ಷನ್​ 500 ಕೋಟಿ ರೂಪಾಯಿ ಮೀರಿದೆ.

ಮೂರು ದಿನಕ್ಕೆ 500 ಕೋಟಿ ರೂ. ಗಳಿಸಿದ ‘ಆರ್​ಆರ್​ಆರ್’

ರಾಜಮೌಳಿ ಸಿನಿಮಾ ಎಂದರೆ ಅಭಿಮಾನಿಗಳು ಸಹಜವಾಗಿಯೇ ಅದ್ದೂರಿತನ ಬಯಸುತ್ತಾರೆ. ಅದಕ್ಕೆ ತಕ್ಕಂತೆಯೇ ‘ಆರ್​ಆರ್​ಆರ್​’ ಸಿನಿಮಾ ಮೂಡಿಬಂದಿದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಅವರು ಸಖತ್​ ಆ್ಯಕ್ಷನ್​ ಮೆರೆದಿದ್ದಾರೆ. ಜೊತೆಗೆ ಸೆಂಟಿಮೆಂಟ್​ ಕೂಡ ಸಿನಿಮಾದಲ್ಲಿ ಹೈಲೈಟ್​ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಗಿದೆ. ಮೊದಲ ದಿನವೇ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ವ್ಯಕ್ತವಾಗಿದ್ದು ಚಿತ್ರತಂಡಕ್ಕೆ ಪ್ಲಸ್​ ಪಾಯಿಂಟ್​ ಆಯಿತು. ಮೊದಲ ದಿನವೇ ‘ಆರ್​ಆರ್​ಆರ್​’ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿತು. ಶುಕ್ರವಾರ (ಮಾ.25) ವಿಶ್ವಾದ್ಯಂತ 223 ಕೋಟಿ ರೂಪಾಯಿ ಕಮಾಯಿ ಆಗಿದೆ ಎಂದು ವರದಿ ಆಗಿತ್ತು. ಮೂರು ದಿನ ಕಳೆಯುವುದರೊಳಗೆ 500 ಕೋಟಿ ರೂಪಾಯಿ ಗಡಿ ಮುಟ್ಟಿರುವುದು ‘ಆರ್​ಆರ್​ಆರ್​’ ಸಿನಿಮಾದ ಹೆಚ್ಚುಗಾರಿಕೆ.

ಇದನ್ನೂ ಓದಿ:

ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್​ಆರ್​ಆರ್​’ ನಿರ್ದೇಶಕನ 5 ಸೂತ್ರಗಳು

Alia Bhatt: ‘ಆರ್​ಆರ್​ಆರ್​’ ಚಿತ್ರ ನೋಡಿ ನಿರಾಸೆಗೊಂಡ ಆಲಿಯಾ ಭಟ್​ ಫ್ಯಾನ್ಸ್

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು