AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ.

ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್
ಕ್ಯಾನ್ಸರ್​ಗೆ ತುತ್ತಾದ ಬಾಲಕನ ಭೇಟಿ ಮಾಡಿದ ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on:Feb 10, 2023 | 9:49 AM

Share

ಕೆಲ ಸ್ಟಾರ್​​ಗಳು ದೊಡ್ಡ ಪರದೆ ಮೇಲೆ ಮಾತ್ರ ಹೀರೋ ಎನಿಸಿಕೊಳ್ಳೋದಿಲ್ಲ. ಅವರು ನಿಜ ಜೀವನದಲ್ಲೂ ಹಿರೋ ಆಗಿ ಕಾಣಿಸಿಕೊಳ್ಳುತ್ತಾರೆ. ಸಾಮಾಜಿಕ ಕೆಲಸ ಮಾಡಿ ಎಲ್ಲರಿಂದ ಭೇಷ್ ಎನಿಸಿಕೊಳ್ಳುತ್ತಾರೆ. ಮೆಗಾ ಪವರ್​ಸ್ಟಾರ್ ರಾಮ್ ಚರಣ್ (Ram Charan) ಕೂಡ ಈಗ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಅವರು ಮಾಡಿದ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಕ್ಯಾನ್ಸರ್​ನಿಂದ  ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಅಭಿಮಾನಿಯನ್ನು ರಾಮ್ ಚರಣ್ ಭೇಟಿ ಮಾಡಿ ಆತನ ಕೊನೆಯ ಆಸೆಯನ್ನು ಈಡೇರಿಸಿದ್ದಾರೆ.

9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ. ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಬಾಲಕನನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ
Image
ನವ ದಂಪತಿ ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿರುವ ಸಾಧನೆಗಳನ್ನು ಸಂಭ್ರಮಿಸುತ್ತಿದ್ದಾರೆ. ಈ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲ ವಿದೇಶದಲ್ಲಿ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ.

ಇದನ್ನೂ ಓದಿ: Ram Charan: ‘ಆರ್​ಆರ್​ಆರ್​’ ಗೆದ್ದ ಬಳಿಕ ರಾಮ್​ ಚರಣ್​ ಸಖತ್​ ಬ್ಯುಸಿ; ಕೈಯಲ್ಲಿವೆ ಬಹುನಿರೀಕ್ಷಿತ​ ಚಿತ್ರಗಳು

‘ಆರ್​ಆರ್​ಆರ್​’ ಗೆಲುವಿನ ನಂತರ ರಾಮ್ ಚರಣ್ ಅವರು ‘ಆರ್​ಸಿ15’ ಹಾಗೂ ‘ಆರ್​ಸಿ16’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಮ್ ಚರಣ್ 15ನೇ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್ 27 ಅವರ ಜನ್ಮದಿನ. ಈ ವಿಶೇಷ ದಿನಕ್ಕೆ ಈ ಚಿತ್ರಗಳ ಪೋಸ್ಟರ್ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಚಿತ್ರದ ಶೀರ್ಷಿಕೆ ಅನಾವರಣಗೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇದಲ್ಲದೆ, ಸಲ್ಮಾನ್ ಖಾನ್ ಅಭಿನಯದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ರಾಮ್ ಚರಣ್ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:43 am, Fri, 10 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More