‘ಗೇಮ್ ಚೇಂಜರ್’ನ ಭೇಟಿ ಮಾಡಿದ ‘ಗೇಮ್ ಚೇಂಜರ್’; ಹೊಸ ಸಿನಿಮಾ ಬಗ್ಗೆ ಮಾತುಕತೆ?
‘ಧೋನಿ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆಯ ಮೂಲಕ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ‘ಲೆಟ್ಸ್ ಗೆಟ್ ಮ್ಯಾರೀಡ್’ ಹೆಸರಿನ ಚಿತ್ರವನ್ನೂ ಅವರು ನಿರ್ಮಾಣ ಮಾಡಿದ್ದಾರೆ. ಈಗ ಅವರು ರಾಮ್ ಚರಣ್ನ ಭೇಟಿ ಮಾಡಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ, ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಪ್ಟನ್ ಎಂಎಸ್ ಧೋನಿ (MS Dhoni) ಗೇಮ್ ಚೇಂಜರ್ ಎಂದೇ ಫೇಮಸ್. ಎಂತಹುದೇ ಕಷ್ಟದ ಪಂದ್ಯ ಇದ್ದರೂ ಆ ಆಟದ ದಿಕ್ಕನ್ನು ಬದಲಿಸುವ ಶಕ್ತಿಯನ್ನು ಅವರು ಹೊಂದಿದ್ದರು. ಇನ್ನು, ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಇಬ್ಬರೂ ಗೇಮ್ ಚೇಂಜರ್ಗಳು ಒಂದು ಕಡೆ ಸೇರಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಹೊಸ ಸಿನಿಮಾದ ಬಗ್ಗೆ ಮಾತುಕತೆ ಶುರುವಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಧೋನಿ ಅವರು ಚಿತ್ರರಂಗದ ಯಾರನ್ನೇ ಭೇಟಿ ಮಾಡಿದರೂ ಕುತೂಹಲ ಮೂಡುತ್ತದೆ. ಅದಕ್ಕೆ ಕಾರಣ ಅವರು ನಿರ್ಮಾಣ ಸಂಸ್ಥೆ ಹೊಂದಿರುವುದು. ‘ಧೋನಿ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆಯ ಮೂಲಕ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ‘ಲೆಟ್ಸ್ ಗೆಟ್ ಮ್ಯಾರೀಡ್’ ಹೆಸರಿನ ಚಿತ್ರವನ್ನೂ ಅವರು ನಿರ್ಮಾಣ ಮಾಡಿದ್ದಾರೆ. ಈಗ ಅವರು ರಾಮ್ ಚರಣ್ನ ಭೇಟಿ ಮಾಡಿದ್ದಾರೆ.
ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ಯಾರ ಜೊತೆ ಕೈ ಜೋಡಿಸುತ್ತಾರೆ ಎನ್ನುವ ಕುತೂಹಲ ಇದೆ. ರಾಮ್ ಚರಣ್ ಮುಂದಿನ ಚಿತ್ರಕ್ಕೆ ಧೋನಿ ನಿರ್ಮಾಣ ಮಾಡಲು ಆಸಕ್ತಿ ತೋರಿಸಿದ್ದಾರೋ ಅಥವಾ ಇದೊಂದು ಸಹಜ ಭೇಟಿಯೋ ಎನ್ನುವ ಬಗ್ಗೆ ಇವರ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ.
ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಪೋಸ್ಟ್ ಮಾಡಿರುವ ರಾಮ್ ಚರಣ್, ‘ಧೋನಿಯನ್ನುನ ಭೇಟಿ ಮಾಡಿದ್ದು ಖುಷಿ ಎನಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಅನೇಕರು, ‘ಇಬ್ಬರು ಗೇಮ್ ಚೇಂಜರ್ಗಳು’ ಎಂದು ಕಮೆಂಟ್ ಮಾಡಿದ್ದಾರೆ.
View this post on Instagram
ಇದನ್ನೂ ಓದಿ: ಧೋನಿಯ ಹೊಸ ಲುಕ್ಗೆ ಅಭಿಮಾನಿಗಳು ಫಿದಾ: ಇಲ್ಲಿದೆ ಫೋಟೋಸ್
ಧೋನಿ ಅವರು ಐಪಿಎಲ್ ಆಡುತ್ತಿದ್ದಾರೆ. ಅವರಿಗೆ ಮೊದಲಿನಿಂದಲೂ ಸಿನಿಮಾ ಮೇಲೆ ಆಸಕ್ತಿ ಇತ್ತು. ಅವರ ಕುರಿತು ಬಯೋಪಿಕ್ ಕೂಡ ಬಂದಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಪಡೆದ ಧೋನಿ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದರು. ಈ ಸಂಸ್ಥೆ ನಿರ್ಮಾಣ ಮಾಡಿದ ಮೊದಲ ಚಿತ್ರ ‘ಲೆಟ್ಸ್ ಗೆಟ್ ಮ್ಯಾರೀಡ್’ ಸೋತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ