AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ನಿರ್ಮಾಪಕರ ಜೊತೆ ಕೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ

‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಪೆದ್ದಿ’ ಸಿನಿಮಾ ಮೇಲೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರೀಕ್ಷೆ ಹೆಚ್ಚಿದೆ. ‘ಜಿಯೋ ಸ್ಟುಡಿಯೋಸ್’ ಸಂಸ್ಥೆಯ ಮೂಲಕ ಈ ಚಿತ್ರದ ಹಿಂದಿ ವರ್ಷನ್ ಬಿಡುಗಡೆ ಆಗಲಿದೆ. ಅದರಿಂದಾಗಿ ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ದೊಡ್ಡ ಓಪನಿಂಗ್ ಸಿಗಲಿದೆ.

‘ಧುರಂಧರ್’ ನಿರ್ಮಾಪಕರ ಜೊತೆ ಕೈ ಜೋಡಿಸಿದ ರಾಮ್ ಚರಣ್; ಸಿಕ್ತು ದೊಡ್ಡ ಸುದ್ದಿ
Ram Charan
ಮದನ್​ ಕುಮಾರ್​
| Edited By: |

Updated on:Mar 27, 2026 | 11:09 PM

Share

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಜನ್ಮದಿನದ ಅಂಗವಾಗಿ ಬಿಡುಗಡೆಯಾದ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ರಾಮ್ ಚರಣ್ ಅವರ ಕಟ್ಟುಮಸ್ತಾದ ಬಾಡಿ ಮತ್ತು ಬುಚ್ಚಿ ಬಾಬು ಸಾನ ಅವರ ಮೇಕಿಂಗ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಂಭ್ರಮದ ನಡುವೆಯೇ ಚಿತ್ರದ ಹಿಂದಿ ವರ್ಷನ್ ವಿತರಣೆ ಬಗ್ಗೆ ದೊಡ್ಡ ಸುದ್ದಿ ಕೇಳಿಬರುತ್ತಿದೆ. ‘ಪೆದ್ದಿ’ ಸಿನಿಮಾ (Peddi) ಜೊತೆ ‘ಜಿಯೋ ಸ್ಟುಡಿಯೋಸ್’ ಸಂಸ್ಥೆ ಕೈ ಜೋಡಿಸಲಿದೆ.

ದೇಶಾದ್ಯಂತ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿರುವ ‘ಧುರಂಧರ್: ದಿ ರಿವೆಂಜ್’ ಸಿನಿಮಾವನ್ನು ‘ಜಿಯೋ ಸ್ಟುಡಿಯೋಸ್’ ಸಂಸ್ಥೆ ನಿರ್ಮಾಣ ಮಾಡಿದೆ. ನಿರ್ಮಾಣ ಸಂಸ್ಥೆಗೆ ಈ ಚಿತ್ರದಿಂದ ಭರ್ಜರಿ ಲಾಭ ಆಗಿದೆ. ಈಗ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರದ ಹಿಂದಿ ಅವತರಣಿಕೆಯ ಜವಾಬ್ದಾರಿಯನ್ನು ಇದೇ ಸಂಸ್ಥೆ ಹೊತ್ತುಕೊಂಡಿದೆ.

‘ಜಿಯೋ ಸ್ಟುಡಿಯೋಸ್’ ಮೂಲಕ ‘ಪೆದ್ದಿ’ ಸಿನಿಮಾದ ಹಿಂದಿ ವರ್ಷನ್ ಬಿಡುಗಡೆ ಆಗುವುದು ನಿಜವೇ ಹೌದಾದರೆ ಉತ್ತರ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ ದೊಡ್ಡ ಓಪನಿಂಗ್ ಪಡೆಯಲಿದೆ. ‘ಉಪ್ಪೇನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಾಮ್ ಚರಣ್ ಅವರಿಗೆ ಜೋಡಿಯಾಗಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್‌ಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ಕನ್ನಡಿಗರಲ್ಲಿ ಕುತೂಹಲ ಹೆಚ್ಚಿಸಿದೆ. ದಿವ್ಯೇಂದು ಶರ್ಮಾ, ಜಗಪತಿ ಬಾಬು, ಬೋಮನ್ ಇರಾನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಎ.ಆರ್. ರೆಹಮಾನ್ ಅವರ ಸಂಗೀತ ಈ ಚಿತ್ರಕ್ಕಿದೆ.

ಇದನ್ನೂ ಓದಿ: ‘ಪೆದ್ದಿ’ ಟೀಸರ್ ರಿಲೀಸ್: ಕ್ರಿಕೆಟರ್ ಬಳಿಕ ಪೈಲ್ವಾನ್ ಆದ ರಾಮ್ ಚರಣ್

‘ವೃದ್ಧಿ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸ್ಪೋರ್ಟ್ಸ್ ಡ್ರಾಮಾ ಎನ್ನಲಾದ ಈ ಸಿನಿಮಾದಲ್ಲಿ ರಾಮ್ ಚರಣ್ ಒಬ್ಬ ಕುಸ್ತಿಪಟುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಅವರ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರದಲ್ಲಿನ ಅವರ ಗೆಟಪ್ ಡಿಫರೆಂಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:33 pm, Fri, 27 March 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More