ಹಂಪಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಮೊದಲ ಸಿನಿಮಾ

‘ದಿ ಇಂಡಿಯಾ ಹೌಸ್’ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿ ಆಗಿತ್ತು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಸಾವರ್ಕರ್ ಜೀವನದ ಕಥೆಯನ್ನು ಸಿನಿಮಾ ಆಧರಿಸಿದೆ.

ಹಂಪಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಮೊದಲ ಸಿನಿಮಾ
ಹಂಪಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಮೊದಲ ಸಿನಿಮಾ
Follow us
|

Updated on:Jul 02, 2024 | 2:25 PM

‘ಆರ್​ಆರ್​ಆರ್’ ಮೂಲಕ ರಾಮ್ ಚರಣ್ ಖ್ಯಾತಿ ಜಾಗತಿಕ ಮಟ್ಟದಲ್ಲಿ ಹಬ್ಬಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಸಿನಿಮಾ ಬಳಿಕ ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅವರು ಸಿನಿಮಾ ನಿರ್ಮಾಣಕ್ಕೂ ಇಳಿದಿದ್ದಾರೆ. ‘ವಿ ಮೆಗಾ ಪಿಕ್ಚರ್ಸ್’ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಅವರು ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿದ್ದು ಇದಕ್ಕೆ ‘ದಿ ಇಂಡಿಯಾ ಹೌಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಪೂಜಾ ಕಾರ್ಯ ಹಂಪಿಯಲ್ಲಿ ಇಂದು (ಜುಲೈ 2) ಜರುಗಿದೆ.

‘ದಿ ಇಂಡಿಯಾ ಹೌಸ್’ ಸಾವರ್ಕರ್ ಜೀವನದ ಕಥೆಯನ್ನು ಆಧರಿಸಿದೆ. ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿ ಆಗಿತ್ತು. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

‘ದಿ ಕಾಶ್ಮೀರ್ ಫೈಲ್ಸ್’, ‘ಕಾರ್ತಿಕೇಯ-2’ ಸೇರಿ ಅನೇಕ ಹಿಟ್ ಚಿತ್ರಗಳನ್ನು ಅಭಿಷೇಕ್ ಅಗರ್ವಾಲ್ ನಿರ್ಮಿಸಿದ್ದಾರೆ. ‘ದಿ ಇಂಡಿಯಾ ಹೌಸ್’ ಚಿತ್ರ ನಿರ್ಮಿಸಲು ರಾಮ್ ಚರಣ್ ಅವರು ಅಭಿಷೇಕ್ ಒಡೆತನದ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಜೊತೆ ಕೈ ಜೋಡಿಸಿದ್ದಾರೆ. ಇಬ್ಬರೂ ಜಂಟಿಯಾಗಿ ಈ ಸಿನಿಮಾ ನಿರ್ಮಿಸಲಿದ್ದಾರೆ. ನಿಖಿಲ್ ಅವರು ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಪಾತ್ರ ಮಾಡುತ್ತಿದ್ದಾರೆ. ನಿಖಿಲ್ ಸಿದ್ದಾರ್ಥ್​ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ನಟಿಸುತ್ತಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಇದನ್ನೂ ಓದಿ: ‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್​ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್

‘ದಿ ಇಂಡಿಯನ್ ಹೌಸ್’ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿದೆ. ಬ್ರೈಸನ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಜುಲೈ 3ರಿಂದ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:24 pm, Tue, 2 July 24

ತಾಜಾ ಸುದ್ದಿ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ