AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕೃಷ್ಣನ ಪಾತ್ರದಲ್ಲಿ ರಾಮ್ ಚರಣ್? ‘ಲಾಲೋ’ ತೆಲುಗು ರಿಮೇಕ್‌ ಬಗ್ಗೆ ಗಾಸಿಪ್

ಗುಜರಾತಿ ಭಾಷೆಯ ‘ಲಾಲೋ: ಕೃಷ್ಣ ಸದಾ ಸಹಾಯತೆ’ ಸಿನಿಮಾವನ್ನು ತೆಲುಗಿನಲ್ಲಿ ರಿಮೇಕ್ ಮಾಡುವ ಪ್ರಯತ್ನ ನಡೆಯುತ್ತಿದೆ. ಈ ಸಿನಿಮಾದಲ್ಲಿ ನಟ ರಾಮ್ ಚರಣ್ ಅವರು ಶ್ರೀಕೃಷ್ಣನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಹೊರಬೀಳುವವರೆಗೆ ಕಾಯಬೇಕಾಗಿದೆ.

ಶ್ರೀಕೃಷ್ಣನ ಪಾತ್ರದಲ್ಲಿ ರಾಮ್ ಚರಣ್? ‘ಲಾಲೋ’ ತೆಲುಗು ರಿಮೇಕ್‌ ಬಗ್ಗೆ ಗಾಸಿಪ್
Ram Charan Image Credit source: PTI
ಮದನ್​ ಕುಮಾರ್​
|

Updated on: Sep 02, 2026 | 4:48 PM

Share

ತೆಲುಗು ಚಿತ್ರರಂಗದಲ್ಲಿ ಇದೀಗ ಹೊಸದೊಂದು ಕುತೂಹಲಕಾರಿ ವದಂತಿ ಭಾರೀ ಸದ್ದು ಮಾಡುತ್ತಿದೆ. ಟಾಲಿವುಡ್ ಮೆಗಾಪವರ್ ಸ್ಟಾರ್ ರಾಮ್ ಚರಣ್ ಅವರು ಬೆಳ್ಳಿಪರದೆಯ ಮೇಲೆ ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗುಜರಾತಿ ಚಿತ್ರರಂಗದ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿ 120 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಬ್ಲಾಕ್ ಬಸ್ಟರ್ ‘ಲಾಲೋ: ಕೃಷ್ಣ ಸದಾ ಸಹಾಯತೆ’ ಸಿನಿಮಾದ ತೆಲುಗು ರಿಮೇಕ್ ಹಕ್ಕುಗಳು ಮಾರಾಟವಾಗಿದ್ದು, ಈ ಸಿನಿಮಾದಲ್ಲಿ ಶ್ರೀಕೃಷ್ಣನ ಪಾತ್ರಕ್ಕಾಗಿ ರಾಮ್ ಚರಣ್ ಅವರನ್ನು ಸಂಪರ್ಕಿಸಲಾಗಿದೆ ಎಂದು ವರದಿಯಾಗಿದೆ.

ಸಣ್ಣ ಬಜೆಟ್‌ನಲ್ಲಿ ನಿರ್ಮಾಣಗೊಂಡು ದಾಖಲೆ ಬರೆದ ‘ಲಾಲೋ’ ಸಿನಿಮಾದಲ್ಲಿ ಶ್ರೀಕೃಷ್ಣನ ಪಾತ್ರವು ಪೂರ್ಣ ಪ್ರಮಾಣದ ನಾಯಕನ ಪಾತ್ರವಲ್ಲದೆ, ವಿಶೇಷ ಪಾತ್ರವಾಗಿ ಬರಲಿದೆ. ಪ್ರಸ್ತುತ ಕಾಲಘಟ್ಟಕ್ಕೆ ತಕ್ಕಂತೆ ಶ್ರೀಕೃಷ್ಣನ ಪಾತ್ರವನ್ನು ಆಧುನಿಕ ಶೈಲಿಯಲ್ಲಿ ಪ್ರಸ್ತುತಪಡಿಸಲು ಚಿತ್ರತಂಡ ಯೋಜನೆ ರೂಪಿಸಿದೆ. ಈ ಹಿಂದೆ ಈ ಪಾತ್ರಕ್ಕೆ ವಿಜಯ್ ದೇವರಕೊಂಡ ಹೆಸರು ಕೇಳಿಬಂದಿತ್ತಾದರೂ, ಈಗ ನಿರ್ಮಾಪಕರು ರಾಮ್ ಚರಣ್ ಅವರನ್ನು ನಟಿಸಲು ವಿನಂತಿಸಿದ್ದಾರೆ ಎನ್ನಲಾಗಿದೆ.

ಕಾರ್ತಿಕ್ ಸುಬ್ಬರಾಜ್ ನಿರ್ದೇಶನ?

ಈ ಮಹತ್ವಾಕಾಂಕ್ಷೆಯ ತೆಲುಗು ರಿಮೇಕ್ ಚಿತ್ರವನ್ನು ನಿರ್ದೇಶಿಸಲು ತಮಿಳಿನ ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರ ಹೆಸರು ಮುಂಚೂಣಿಯಲ್ಲಿದೆ. ‘ಜಿಗರ್‌ಥಂಡ’, ‘ಪೆಟ್ಟಾ’ ಮತ್ತು ‘ಮಹಾನ್’ ನಂತಹ ವಿಭಿನ್ನ ಸಿನಿಮಾಗಳನ್ನು ನೀಡಿದ ಕಾರ್ತಿಕ್ ಸುಬ್ಬರಾಜ್ ಅವರ ಸ್ಪರ್ಶ ಈ ಸಿನಿಮಾಗೆ ಸಿಕ್ಕಿದರೆ, ಮೂಲ ಚಿತ್ರದ ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಅಂಶಗಳನ್ನು ಉಳಿಸಿಕೊಂಡು ತೆಲುಗು ಪ್ರೇಕ್ಷಕರಿಗೆ ಹೊಸ ಅನುಭವ ನೀಡಬಹುದು ಎಂಬುದು ಸಿನಿಮಾ ಪ್ರಿಯರ ಲೆಕ್ಕಾಚಾರವಾಗಿದೆ.

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಕೊಯಮತ್ತೂರು ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ರಾಮ್ ಚರಣ್ ಭೇಟಿ

ರಾಮ್ ಚರಣ್ ಮುಂದಿನ ಸಿನಿಮಾಗಳು

ಸದ್ಯ ರಾಮ್ ಚರಣ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವಿಶ್ರಾಂತಿಯಲ್ಲಿದ್ದಾರೆ. ಚೇತರಿಸಿಕೊಂಡ ನಂತರ ತಮ್ಮ ಮುಂಬರುವ ಚಿತ್ರಗಳ ಮೇಲೆ ಗಮನ ಹರಿಸಲಿದ್ದಾರೆ. ಸುಕುಮಾರ್ ನಿರ್ದೇಶನದ ‘RC 17’ ಸಿನಿಮಾದ ಮುಹೂರ್ತ ಸಮಾರಂಭವು ಈ ವರ್ಷದ ನವೆಂಬರ್‌ನಲ್ಲಿ ನಡೆಯಲಿದ್ದು, 2027ರ ಜನವರಿಯಿಂದ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ