AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ನಟನೆಯ ಗೇಮ್ ಚೇಂಜರ್ ಸಿನಿಮಾದಲ್ಲಿ ಒಂದಲ್ಲ, ಎರಡಲ್ಲ ಏಳು ಹಾಡುಗಳು

ರಾಮ್ ಚರಣ್ ಬರ್ತ್​ಡೇ ಪ್ರಯುಕ್ತ ‘ಜರಗಂಡಿ..’ ಸಾಂಗ್ ರಿಲೀಸ್ ಆಗಿತ್ತು. ಈ ಹಾಡು ಗಮನ ಸೆಳೆದಿತ್ತು. ಈಗ ಆಗಸ್ಟ್ ಅಂತ್ಯಕ್ಕೆ ಮತ್ತೊಂದು ಹಾಡು ರಿಲೀಸ್ ಆಗೋ ಸಾಧ್ಯತೆ ಇದೆ. ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರರೋದು ತಮನ್ ಅವರು ಸಿನಿಮಾ ಬಗ್ಗೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ನಟನೆಯ ಗೇಮ್ ಚೇಂಜರ್ ಸಿನಿಮಾದಲ್ಲಿ ಒಂದಲ್ಲ, ಎರಡಲ್ಲ ಏಳು ಹಾಡುಗಳು
ರಾಮ್ ಚರಣ್ ನಟನೆಯ ಗೇಮ್ ಚೇಂಜರ್ ಸಿನಿಮಾದಲ್ಲಿ ಒಂದಲ್ಲ, ಎರಡಲ್ಲ ಏಳು ಹಾಡುಗಳು
ರಾಜೇಶ್ ದುಗ್ಗುಮನೆ
|

Updated on: Jul 24, 2024 | 7:40 AM

Share

ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಶೂಟಿಂಗ್ ಮುಗಿದಿದ್ದು, ಅವರು ಡಬ್ಬಿಂಗ್ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಸಿನಿಮಾಗೆ ದಿಲ್ ರಾಜು ಅವರು ಬಂಡವಾಳ ಹೂಡುತ್ತಿದ್ದು, ಶಂಕರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ 2024ರ ಕ್ರಿಸ್​ಮಸ್​ ಸಂದರ್ಭದಲ್ಲಿ ರಿಲೀಸ್ ಆಗಲಿದೆ. ಇದೊಂದು ಪೊಲಿಟಿಕಲ್ ಆ್ಯಕ್ಷನ್ ಡ್ರಾಮಾ. ಈ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್ ಒಂದನ್ನು ನೀಡಿದ್ದಾರೆ ಸಂಗೀತ ಸಂಯೋಜಕ ತಮನ್. ಈ ಸಿನಿಮಾದಲ್ಲಿ ಬರೋಬ್ಬರಿ ಏಳು ಹಾಡುಗಳು ಇರಲಿವೆಯಂತೆ.

ರಾಮ್ ಚರಣ್ ಬರ್ತ್​ಡೇ ಪ್ರಯುಕ್ತ ‘ಜರಗಂಡಿ..’ ಸಾಂಗ್ ರಿಲೀಸ್ ಆಗಿತ್ತು. ಈ ಹಾಡು ಗಮನ ಸೆಳೆದಿತ್ತು. ಈಗ ಆಗಸ್ಟ್ ಅಂತ್ಯಕ್ಕೆ ಮತ್ತೊಂದು ಹಾಡು ರಿಲೀಸ್ ಆಗೋ ಸಾಧ್ಯತೆ ಇದೆ. ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರರೋದು ತಮನ್ ಅವರು. ಅವರು ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಏಳು ಹಾಡುಗಳು ಇರಲಿವೆ ಎಂದು ಹೇಳಿದ್ದಾರೆ.

‘ದಿಲ್ ರಾಜು ಇತ್ತೀಚೆಗೆ ಒಂದು ಸರ್​ಪ್ರೈಸ್ ನೀಡಿದ್ದಾರೆ (ಕ್ರಿಸ್​ಮಸ್ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಆಗಲಿದೆ ಎಂಬುದನ್ನು ಉಲ್ಲೇಖಿಸಿ ಈ ಮಾತನ್ನು ಹೇಳಿದ್ದಾರೆ.) ಈ ಸಿನಿಮಾದಲ್ಲಿ ಏಳು ಹಾಡುಗಳು ಇರಲಿವೆ. ಆಗಸ್ಟ್ ಅಂತ್ಯದಿಂದ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗಲಿದೆ. ಮುಂದೆ ಯಾವ ಸಾಂಗ್ ರಿಲೀಸ್ ಮಾಡಬೇಕು ಎಂಬುದನ್ನು ನಿರ್ಧರಿಸಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಕಡಿಮೆ ಇಲ್ಲ ರಾಮ್ ಚರಣ್ ಪತ್ನಿ ಉಪಾಸನಾ ಕೋನಿಡೇಲ ಆಸ್ತಿ ಮೌಲ್ಯ

ಸಾಂಗ್​ಗಳು ಸಿನಿಮಾಗಳಿಗೆ ವರವೂ ಹೌದು, ಶಾಪವೂ ಹೌದು. ಹಾಡುಗಳು ಚೆನ್ನಾಗಿ ಇದ್ದರೆ ಸಿನಿಮಾ ಗೆಲ್ಲುತ್ತದೆ. ಆದರೆ, ಸಾಂಗ್​ಗಳು ಚೆನ್ನಾಗಿ ಮೂಡಿ ಬಂದಿಲ್ಲ ಎಂದರೆ ಅದನ್ನು ಸಹಿಸಿಕೊಳ್ಳೋದು ಪ್ರೇಕ್ಷಕರಿಗೆ ಕಷ್ಟ ಎನಿಸಬಹುದು. ಹೀಗಾಗಿ, ‘ಗೇಮ್ ಚೇಂಜರ್’ ಸಾಂಗ್​ಗಳು ಯಾವ ರೀತಿಯಲ್ಲಿ ಇವೆ ಎಂಬುದು ಸದ್ಯದ ಪ್ರಶ್ನೆ.

ಕಿಯಾರಾ ಅಡ್ವಾಣಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ. ಎಸ್​ಜೆ ಸೂರ್ಯ, ಅಂಜಲಿ, ಶ್ರೀಕಾಂತ್, ಜಯರಾಮ್, ನವೀನ್ ಚಂದ್ರ, ಸುನೀಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ