AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ಚಿತ್ರದ ‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ ರಿಲೀಸ್: ಶ್ರುತಿ ಹಾಸನ್ ಡ್ಯಾನ್ಸ್ ಧಮಾಕಾ

‘ಪೆದ್ದಿ’ ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಾಡುಗಳು ಧೂಳೆಬ್ಬಿಸುತ್ತಿವೆ. ಈ ಚಿತ್ರದ ‘ಹೆಲ್ಲಲ್ಲಲ್ಲೋ’ ಹಾಡಿನಲ್ಲಿ ರಾಮ್ ಚರಣ್, ಶ್ರುತಿ ಹಾಸನ್ ಹಾಗೂ ಜಾನ್ವಿ ಕಪೂರ್ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಹಾಡಿನ ಪ್ರೋಮೋ ರಿಲೀಸ್ ಆಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

‘ಪೆದ್ದಿ’ ಚಿತ್ರದ ‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ ರಿಲೀಸ್: ಶ್ರುತಿ ಹಾಸನ್ ಡ್ಯಾನ್ಸ್ ಧಮಾಕಾ
Ram Charan, Shruti Haasan
ಮದನ್​ ಕುಮಾರ್​
|

Updated on: May 22, 2026 | 6:47 PM

Share

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಪೆದ್ದಿ’ (Peddi) ದಿನಕ್ಕೊಂದು ಹೊಸ ಅಪ್‌ಡೇಟ್ ಮೂಲಕ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸುತ್ತಿದೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಸಂಗೀತ ಸಂಯೋಜನೆಯ ಈ ಚಿತ್ರದ ಮೊದಲ ಎರಡು ಹಾಡುಗಳು ಈಗಾಗಲೇ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡಿಂಗ್‌ನಲ್ಲಿವೆ. ಇದೀಗ ಚಿತ್ರತಂಡ ಸಿನಿಮಾದ ಮೂರನೇ ಹಾಡು ‘ಹೆಲ್ಲಲ್ಲಲ್ಲೋ’ (Hellallallo) ಕೂಡ ಧೂಳೆಬ್ಬಿಸಲು ಸಜ್ಜಾಗಿದೆ. ಹಾಡಿನ ಪ್ರೋಮೋವನ್ನು ಬಿಡುಗಡೆ ಆಗಿದೆ.

ಈ ಪ್ರೋಮೋದಲ್ಲಿ ಎ.ಆರ್. ರೆಹಮಾನ್ ಅವರ ವಿಶಿಷ್ಟ ಶೈಲಿಯ ಮ್ಯೂಸಿಕಲ್ ಮ್ಯಾಜಿಕ್ ಮತ್ತು ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ರಾ ಶೈಲಿಯ ಸಮ್ಮಿಲನ ಎದ್ದು ಕಾಣುತ್ತಿದೆ. ವೇದಿಕೆಯೊಂದರ ಮೇಲೆ, ಸುತ್ತುವರಿದ ನೂರಾರು ಜನರ ಮಧ್ಯೆ ಅದ್ದೂರಿಯಾಗಿ ಚಿತ್ರೀಕರಿಸಲಾದ ಈ ಹಾಡಿನಲ್ಲಿ ರಾಮ್ ಚರಣ್, ಶ್ರುತಿ ಹಾಸನ್ ಮತ್ತು ಜಾನ್ವಿ ಕಪೂರ್ ಜೊತೆಯಾಗಿ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ.

ಹಾಡಿನಲ್ಲಿ ರಾಮ್ ಚರಣ್ ಅವರು ರಗಡ್ ಲುಕ್‌ನಲ್ಲಿ ಮಿಂಚಿದ್ದಾರೆ. ನಟಿ ಶ್ರುತಿ ಹಾಸನ್ ಗ್ಲಾಮರಸ್ ಉಡುಪಿನಲ್ಲಿ ಕಣ್ಮನ ಸೆಳೆದರೆ, ಜಾನ್ವಿ ಕಪೂರ್ ಕೂಡ ಚಂದದ ಡ್ರೆಸ್ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಈ ಮೂವರ ಎನರ್ಜಿಟಿಕ್ ಡ್ಯಾನ್ಸ್ ಅಭಿಮಾನಿಗಳಿಗೆ ವಿಶುವಲ್ ಟ್ರೀಟ್ ನೀಡಲಿದ್ದು, ಈ ಪ್ರೋಮೋದಿಂದ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ:

ಕ್ರೀಡಾ ಲೋಕದ ಕಥಾಹಂದರ ಹೊಂದಿರುವ ‘ಪೆದ್ದಿ’ ಚಿತ್ರವನ್ನು ಬುಚ್ಚಿ ಬಾಬು ಸನಾ ನಿರ್ದೇಶಿಸಿದ್ದು, ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ದಿವ್ಯೇಂದು ಶರ್ಮಾ ಮತ್ತು ಜಗಪತಿ ಬಾಬು ಸಹ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಜೂ.4ಕ್ಕೆ ‘ಪೆದ್ದಿ’ ರಿಲೀಸ್; ‘ಟಾಕ್ಸಿಕ್’ ಬಿಟ್ಟುಕೊಟ್ಟ ದಿನಾಂಕದಲ್ಲಿ ರಾಮ್ ಚರಣ್ ಸಿನಿಮಾ ತೆರೆಗೆ

ಸದ್ಯಕ್ಕೆ ಬಿಡುಗಡೆ ಆಗಿರುವುದು ‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ ಮಾತ್ರ. ಪೂರ್ಣ ಹಾಡನ್ನು ಮೇ 23ರಂದು ಭೋಪಾಲ್‌ನಲ್ಲಿ ನಡೆಯಲಿರುವ ಅದ್ಧೂರಿ ಸಂಗೀತ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಬಹುಭಾಷೆಗಳಲ್ಲಿ ಸಿದ್ಧವಾಗಿರುವ ಈ ಸಿನಿಮಾ ಜೂನ್ 4ರಂದು ವಿಶ್ವದಾದ್ಯಂತ ತೆರೆಕಾಣಲಿದ್ದು, ಜೂನ್ 3ರಂದೇ ಪ್ರೀಮಿಯರ್ ಶೋಗಳನ್ನು ಆಯೋಜಿಸಲು ನಿರ್ಮಾಪಕರು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More