AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ

ರಾಮ್ ಚರಣ್ ಮತ್ತು ಸುಕುಮಾರ್ ಅವರ ಬಹುನಿರೀಕ್ಷಿತ ಚಿತ್ರದ ಚಿತ್ರೀಕರಣ ವಿಳಂಬವಾಗಿದೆ. ನಿರ್ದೇಶಕ ಸುಕುಮಾರ್ ಕಥೆಯನ್ನು ಅಂತಿಮಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. 'ಪೆದ್ದಿ' ಯಶಸ್ಸಿನಲ್ಲಿರುವ ರಾಮ್ ಚರಣ್ ಅವರಿಗೆ ಈ ವಿಳಂಬ ವರದಾನವಾಗಿದೆ, ಏಕೆಂದರೆ ಇದು ಗಾಯದಿಂದ ಚೇತರಿಸಿಕೊಳ್ಳಲು ಸಮಯ ನೀಡಿದೆ. ದಸರಾ ಹಬ್ಬದ ನಂತರ ಚಿತ್ರದ ಅಧಿಕೃತ ಲಾಂಚ್ ನಿರೀಕ್ಷಿಸಲಾಗಿದೆ, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ
ರಾಮ್ ಚರಣ್​-ಸುಕುಮಾರ್
ರಾಜೇಶ್ ದುಗ್ಗುಮನೆ
|

Updated on:Jun 15, 2026 | 10:43 AM

Share

ರಾಮ್ ಚರಣ್ (Ram Charan) ಮತ್ತು ಸುಕುಮಾರ್ ಕಾಂಬಿನೇಷನ್‌ ಅಲ್ಲಿ ‘ರಂಗಸ್ಥಳಂ’ ಸಿನಿಮಾ ಮೂಡಿ ಬಂದಿತ್ತು. ಇದಕ್ಕೆ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ಇವರಿಬ್ಬರ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಆರಂಭವಾಗುವುದು ಮತ್ತಷ್ಟು ತಡವಾಗಲಿದೆ ಎಂದು ಸಿನಿಮಾ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಆದರೆ, ಇದು ರಾಮ್ ಚರಣ್​​ಗೆ ವರದಾನವಾಗಿದೆ.

ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಅವರು ಈ ಚಿತ್ರದ ಚಿತ್ರಕಥೆಯನ್ನು ಇನ್ನೂ ಸಂಪೂರ್ಣವಾಗಿ ಫೈನಲ್ ಮಾಡಿಲ್ಲ ಎನ್ನಲಾಗಿದೆ. ಕಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮತ್ತು ಪ್ರತಿಯೊಂದು ದೃಶ್ಯವನ್ನು ಅಚ್ಚುಕಟ್ಟಾಗಿ ರೂಪಿಸಲು ಸುಕುಮಾರ್ ಅವರು ಇನ್ನೂ ಸ್ವಲ್ಪ ಸಮಯಾವಕಾಶ ಕೇಳಿದ್ದಾರಂತೆ. ಹೀಗಾಗಿ, ಈ ಮೆಗಾ ಪ್ರಾಜೆಕ್ಟ್‌ನ ಅಧಿಕೃತ ಲಾಂಚ್ ಈ ವರ್ಷದ ದಸರಾ ಹಬ್ಬದ ನಂತರವಷ್ಟೇ ನಡೆಯುವ ಸಾಧ್ಯತೆ ಇದೆ.

ಈ ವಿಳಂಬ ನಟ ರಾಮ್ ಚರಣ್ ಅವರಿಗೆ ಒಂದು ರೀತಿಯಲ್ಲಿ ವರವಾಗಲಿದೆ ಎನ್ನಲಾಗುತ್ತಿದೆ. ಏಕೆಂದರೆ, ರಾಮ್ ಚರಣ್ ಸದ್ಯಕ್ಕೆ ತಮ್ಮ ಇತ್ತೀಚಿನ ಸೆನ್ಸೇಷನಲ್ ಬ್ಲಾಕ್‌ಬಸ್ಟರ್ ‘ಪೆದ್ದಿ’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಜೂನ್ 4 ರಂದು ಬಿಡುಗಡೆಯಾದ ‘ಪೆದ್ದಿ’ ಸಿನಿಮಾ 2026ರಲ್ಲಿ ದಕ್ಷಿಣ ಭಾರತದಲ್ಲೇ ನಂಬರ್ ಒನ್ ಗಳಿಕೆ ಮಾಡಿ ಭರ್ಜರಿ ದಾಖಲೆ ಬರೆಯುತ್ತಿದ್ದು, ರಾಮ್ ಚರಣ್ ಸದ್ಯ ಅದರ ಸಕ್ಸಸ್ ಸಂಭ್ರಮದಲ್ಲಿದ್ದಾರೆ.

ಇದರ ಜೊತೆಗೆ, ರಾಮ್ ಚರಣ್ ಇತ್ತೀಚೆಗೆ ಮಣಿಕಟ್ಟಿನ ಗಾಯದಿಂದ ಬಳಲುತ್ತಿದ್ದು, ಸುಕುಮಾರ್ ಸಿನಿಮಾ ತಡವಾಗುತ್ತಿರುವುದರಿಂದ ಅವರಿಗೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಉತ್ತಮ ಬ್ರೇಕ್ ಸಿಕ್ಕಂತಾಗಿದೆ. ಗಾಯದಿಂದ ಪೂರ್ತಿಯಾಗಿ ಗುಣಮುಖರಾದ ಬಳಿಕವೇ ಅವರು ಸುಕುಮಾರ್ ಅವರ ಬಿಗ್ ಬಜೆಟ್ ಚಿತ್ರದ ಸೆಟ್‌ಗೆ ಜಾಯಿನ್ ಆಗಲಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ

ನಿರ್ದೇಶಕರು ಕಥೆಗಾಗಿ ಸಮಯ ತೆಗೆದುಕೊಳ್ಳುತ್ತಿರುವುದು ಮತ್ತು ನಟನಿಗೆ ಗಾಯದಿಂದ ಚೇತರಿಸಿಕೊಳ್ಳಲು ಗ್ಯಾಪ್ ಸಿಕ್ಕಿರುವುದು ಇಬ್ಬರಿಗೂ ಪ್ಲಸ್ ಪಾಯಿಂಟ್ ಆಗಿದೆ. ಸಿನಿಮಾ ತಡವಾದರೂ ಇವರಿಬ್ಬರ ಕಾಂಬಿನೇಷನ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇರುವುದರಿಂದ, ಗಲ್ಲಾಪೆಟ್ಟಿಗೆಯಲ್ಲಿ ಮತ್ತೊಂದು ಧೂಳೆಬ್ಬಿಸುವ ಸಿನಿಮಾ ಬರುವುದು ಗ್ಯಾರಂಟಿ ಎಂಬ ನಂಬಿಕೆಯಲ್ಲಿ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:43 am, Mon, 15 June 26

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು