AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

Peddi movie release: ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ಕುರಿತಾಗಿ ಸಾಕಷ್ಟು ಗಾಳಿ ಸುದ್ದಿಗಳು ಹರಿದಾಡುತ್ತಿವೆ. ಸಿನಿಮಾದ ಚಿತ್ರೀಕರಣ ಪೂರ್ಣವಾಗಿಲ್ಲ, ಸಾಕಷ್ಟು ಪೋಸ್ಟ್ ಪ್ರೊಡಕ್ಷನ್ ಬಾಕಿ ಇದೆ ಹೀಗಾಗಿ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ ಹೋಗಲಿದೆ ಎಂದೆಲ್ಲ ಹೇಳಲಾಗುತ್ತಿದೆ. ಇದೀಗ ಸ್ವತಃ ರಾಮ್ ಚರಣ್ ಈ ಬಗ್ಗೆ ಮಾತನಾಡಿದ್ದಾರೆ.

‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ
Peddi Movie
ಮಂಜುನಾಥ ಸಿ.
|

Updated on: Apr 03, 2026 | 12:32 PM

Share

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ಕುರಿತು ಸಾಕಷ್ಟು ಊಹಾಪೋಹಗಳು, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಾರ್ಚ್ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಪದೇ ಪದೇ ಬಿಡುಗಡೆ ಮುಂದೂಡಿಕೊಂಡೇ ಬರುತ್ತಿದೆ. ಇದೀಗ ಸಿನಿಮಾ ಏಪ್ರಿಲ್ 30 ರಂದು ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಇದು ಸಹ ಸುಳ್ಳಾಗಲಿದ್ದು, ಸಿನಿಮಾ ಮತ್ತೆ ಮುಂದೂಡಲ್ಪಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ‘ಪೆದ್ದಿ’ ಪೋಸ್ಟರ್​​ನಲ್ಲಿ ಬಿಡುಗಡೆ ದಿನಾಂಕವೇ ಇಲ್ಲದಿರುವುದು ಇನ್ನಷ್ಟು ಅನುಮಾನಗಳನ್ನು ಮೂಡಿಸಿದೆ. ಇದೀಗ ನಟ ರಾಮ್ ಚರಣ್ ಅವರು ಈ ಕುರಿತು ಸ್ವತಃ ಸ್ಪಷ್ಟನೆ ನೀಡಿದ್ದಾರೆ.

ರಾಮ್ ಚರಣ್ ಅವರ ಚಿಕ್ಕಪ್ಪ ನಾಗಬಾಬು ಅವರ ಪುತ್ರಿ ನಿಹಾರಿಕಾ ಸಿನಿಮಾ ನಿರ್ಮಾಪಕಿ ಆಗಿದ್ದು, ‘ರಾಕಾಸ’ ಹೆಸರಿನ ತೆಲುಗು ಹಾರರ್-ಕಾಮಿಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ರಾಕಾಸ’ ತಂಡವನ್ನು ರಾಮ್ ಚರಣ್ ಇತ್ತೀಚೆಗೆ ಭೇಟಿ ಆಗಿದ್ದರು. ಈ ವೇಳೆ ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದ ಚಿತ್ರೀಕರಣದ ಬಗ್ಗೆಯೂ ಅಪ್​​ಡೇಟ್ ನೀಡಿದ್ದಾರೆ.

ರಾಮ್ ಚರಣ್ ಅವರು ಎರಡು ದಿನ ಹಿಂದೆ ‘ರಾಕಾಸ’ ಸಿನಿಮಾ ತಂಡವನ್ನು ಭೇಟಿ ಮಾಡಿದ್ದರು. ಆ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತಾ, ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದರು. ಆದರೆ ಇನ್ನು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಇದೆ ಎಂದು ಸಹ ಹೇಳಿದ್ದು, ‘ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿರುವುದನ್ನು ಗಮನಿಸಿದ್ದೇನೆ. ಯಾವುದೇ ಆತಂಕ ಬೇಕಿಲ್ಲ, ನಾವು ಅಂದುಕೊಂಡ ಸಮಯಕ್ಕೆ ಸಿನಿಮಾ ಮುಗಿಸುತ್ತಿದ್ದೇವೆ’ ಎಂದು ರಾಮ್ ಚರಣ್ ಹೇಳಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಪೆದ್ದಿ’ ಸಿನಿಮಾವು ಹಳ್ಳಿಯ ಕ್ರಿಕೆಟ್ ಆಟಗಾರ ಹಾಗೂ ಕುಸ್ತಿ ಪೈಲ್ವಾನನ ಕತೆಯನ್ನು ಒಳಗೊಂಡಿದೆ. ಸಿನಿಮಾ ಅನ್ನು ‘ಉಪ್ಪೆನ’ ಖ್ಯಾತಿಯ ಬುಚ್ಚಿಬಾಬು ಸನಾ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರು ಕುಸ್ತಿ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಸಿನಿಮಾದ ನಾಯಕಿ ಬಾಲಿವುಡ್ ಬೆಡಗಿ ಜಾನ್ಹವಿ ಕಪೂರ್. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ. ಸಿನಿಮಾ ಏಪ್ರಿಲ್ 30ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ