ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ

ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಮ್ಮ 14ನೇ ವಿವಾಹ ವಾರ್ಷಿಕೋತ್ಸವದಂದು ಅವಳಿ ಮಕ್ಕಳಾದ ಶಿವ್​ರಾಮ್ ಮತ್ತು ಅನ್ವೀರಾ ದೇವಿಯವರ ಮೊದಲ ಝಲಕ್ ಅನ್ನು ಹಂಚಿಕೊಂಡಿದ್ದಾರೆ. ಜನವರಿ 31ರಂದು ಜನಿಸಿದ ಅವಳಿಗಳಲ್ಲಿ ಒಬ್ಬ ಗಂಡು, ಒಬ್ಬಳು ಹೆಣ್ಣು. ಕ್ಲಿನ್ ಕಾರಾ ಜೊತೆ ಮಕ್ಕಳ ಪುಟ್ಟ ಕೈಗಳ ಫೋಟೋ ವೈರಲ್ ಆಗಿದ್ದು, ಮೆಗಾ ಕುಟುಂಬದ ಹೊಸ ಸದಸ್ಯರನ್ನು ನೋಡಿ ಅಭಿಮಾನಿಗಳು ಸಂತಸಗೊಂಡಿದ್ದಾರೆ.

ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ
ಉಪಾಸನಾ-ರಾಮ್ ಚರಣ್

Updated on: Jun 15, 2026 | 8:54 AM

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೇಲ ತಮ್ಮ 14ನೇ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪರೂಪದ ಫ್ಯಾಮಿಲಿ ಫೋಟೋ ಒಂದನ್ನು ಹಂಚಿಕೊಂಡಿರುವ ದಂಪತಿ, ತಮ್ಮ ನವಜಾತ ಅವಳಿ ಮಕ್ಕಳಾದ ಶಿವ್​ರಾಮ್ ಮತ್ತು ಅನ್ವೀರಾ ದೇವಿ ಅವರ ಮೊದಲ ಝಲಕ್ ಅನ್ನು ಸಾರ್ವಜನಿಕವಾಗಿ ರಿವೀಲ್ ಮಾಡಿದ್ದಾರೆ.

ಈ ಮೊದಲು ರಾಮ್ ಚರಣ್-ಉಪಾಸನಾ ದಂಪತಿಗೆ ಕ್ಲಿನ್ ಕಾರ ಹೆಸರಿನ ಮಗಳಿದ್ದಳು. ಕಳೆದ ಜನವರಿ 31 ರಂದು ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಅವಳಿ ಮಕ್ಕಳಿಗೆ ಪೋಷಕರಾದರು. ಒಂದು ಗಂಡಾದರೆ, ಮತ್ತೊಂದು ಹೆಣ್ಣು. ಈಗ ದಂಪತಿ ಮಗುವಿನ ಫೋಟೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್

ಭಾನುವಾರ ಇನ್‌ಸ್ಟಾಗ್ರಾಮ್‌ನಲ್ಲಿ ರಾಮ್ ಚರಣ್ ಮತ್ತು ಉಪಾಸನಾ ಜಂಟಿಯಾಗಿ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಮಕ್ಕಳ ಮುಖವನ್ನು ಪೂರ್ತಿಯಾಗಿ ತೋರಿಸುವ ಬದಲು, ಅವರು ವಿಭಿನ್ನವಾದ ಮತ್ತು ಅರ್ಥಪೂರ್ಣವಾದ ಫೋಟೋ ಒಂದನ್ನು ಅಪ್‌ಲೋಡ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರ ಹಿರಿಯ ಮಗಳು ಕ್ಲಿನ್ ಕಾರಾ ಹಾಗೂ ಈಗ ಜನಿಸಿರುವ ಅವಳಿ ಮಕ್ಕಳ ಪುಟ್ಟ ಪುಟ್ಟ ಕೈಗಳು ಮಾತ್ರ ಕಾಣಿಸುತ್ತಿವೆ. ಅವಳಿ ಮಕ್ಕಳ ಚಿತ್ರವನ್ನು ಈ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದು ಇದೇ ಮೊದಲು.

ಭಾವನಾತ್ಮಕ ಸಾಲುಗಳು:

ಈ ಮುದ್ದಾದ ಫೋಟೋದೊಂದಿಗೆ ‘ಮನಸ್ಸು ತುಂಬಿ ಬಂದಿದೆ’ ಎಂದು ಬರೆದುಕೊಂಡು ಇನ್ಫಿನಿಟಿ ಎಮೋಜಿಯನ್ನು ಹಾಕಿದ್ದಾರೆ. ಈ ಪೋಸ್ಟ್ ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದ್ದು, ಮೆಗಾ ಫ್ಯಾಮಿಲಿಯ ಈ ಹೊಸ ಸದಸ್ಯರನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ ಮತ್ತು ದಂಪತಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us