AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​​ಗಾಗಿ ಕಾಯುತ್ತಿದ್ದಾರೆ ರಾಮ್ ಚರಣ್, ಕಾರಣ ಏನು ಗೊತ್ತೆ?

Ram Charan movie: ಆರ್​​ಆರ್​​ಆರ್ ಬಳಿಕ ರಾಮ್ ಚರಣ್ ನಟಿಸಿದ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ, ಆದರೆ ರಾಮ್ ಚರಣ್ ಐಪಿಎಲ್ 2026ಗಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ.

ಐಪಿಎಲ್​​ಗಾಗಿ ಕಾಯುತ್ತಿದ್ದಾರೆ ರಾಮ್ ಚರಣ್, ಕಾರಣ ಏನು ಗೊತ್ತೆ?
Ipl
ಮಂಜುನಾಥ ಸಿ.
|

Updated on: Mar 05, 2026 | 10:30 AM

Share

ಆರ್​​ಆರ್​​ಆರ್ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಸಿನಿಮಾ ಅಟ್ಟರ್ ಫ್ಲಾಫ್ ಆಗಿವೆ. ಆರ್​​ಆರ್​​ಆರ್ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ, ಆದರೆ ರಾಮ್ ಚರಣ್ ಐಪಿಎಲ್ 2026ಗಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ.

ರಾಮ್ ಚರಣ್ ನಟಿಸಿರುವ ‘ಪೆದ್ದಿ’ ಸಿನಿಮಾ ಕ್ರಿಕೆಟ್ ಆಟದ ಕುರಿತಾದ ಕತೆಯನ್ನು ಹೊಂದಿದ್ದು, ಸಿನಿಮಾನಲ್ಲಿ ನಾಯಕ ರಾಮ್ ಚರಣ್ ಹಳ್ಳಿಯೊಂದರ ಕ್ರಿಕೆಟ್ ಆಟಗಾರನ ಪಾತ್ರದಲ್ಲಿ ನಟಿಸಿದ್ದಾರೆ. ಹಾಗಾಗಿಯೇ ಸಿನಿಮಾದ ಪ್ರಚಾರವನ್ನು ಭಾರತದ ಕ್ರಿಕೆಟ್ ಹಬ್ಬವೇ ಆಗಿರುವ ಐಪಿಎಲ್​​ನಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಇದೇ ಐಪಿಎಲ್ ಅನ್ನು ಗುರಿಯಾಗಿಸಿಕೊಂಡು ಹಲವು ಪ್ರಚಾರದ ಯೋಜನೆಗಳನ್ನು ಚಿತ್ರತಂಡ ಮಾಡಿಕೊಂಡಿದೆ.

ಮೂಲಗಳ ಪ್ರಕಾರ ಐಪಿಎಲ್​​ನ ಮುಖ್ಯ ಇವೆಂಟ್​​ನಲ್ಲಿಯೇ ‘ಪೆದ್ದಿ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡುವ ಯೋಜನೆ ಇದೆಯಂತೆ. ಅದರ ಜೊತೆಗೆ ರಾಮ್ ಚರಣ್ ಸಹ ಹಲವು ಐಪಿಎಲ್ ಪಂದ್ಯಗಳಿಗೆ ತೆರಳಿ ಅಲ್ಲಿಂದಲೇ ಸಿನಿಮಾದ ಪ್ರಚಾರ ಮಾಡಲಿದ್ದಾರೆ. ಹೈದರಾಬಾದ್ ತಂಡದ ಜೊತೆಗೆ ‘ಪೆದ್ದಿ’ ತಂಡ ಪ್ರಚಾರದ ಒಪ್ಪಂದ ಮಾಡಿಕೊಳ್ಳಲಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಾರೆ ಐಪಿಎಲ್ ಅನ್ನು ಸಂಪೂರ್ಣವಾಗಿ ತಮ್ಮ ಸಿನಿಮಾ ಪ್ರಚಾರಕ್ಕೆ ಬಳಸಿಕೊಳ್ಳಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ:‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್

‘ಪೆದ್ದಿ’ ಸಿನಿಮಾವು ಕ್ರಿಕೆಟಿಗನೊಬ್ಬನ ಕತೆಯನ್ನು ಒಳಗೊಂಡಿದೆ. ಕ್ರಿಕೆಟ್ ಅನ್ನು ಅತಿಯಾಗಿ ಪ್ರೀತಿಸುವ ಹಳ್ಳಿ ಯುವಕನೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿ. ಕನ್ನಡದ ಶಿವಣ್ಣ ಸಹ ಈ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಅನ್ನು ಬುಚ್ಚಿಬಾಬು ಸನಾ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಇವರು ‘ಉಪ್ಪೆನ’ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!