ರಾಮ್ ಚರಣ್​ ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ? ಈ ಘಟನೆಯೇ ಸಾಕ್ಷಿ

ವರುಣ್ ತೇಜ್ ಅವರು ತಮ್ಮ ಸೋದರ ಸಂಬಂಧಿ ರಾಮ್ ಚರಣ್ ಅವರ ಅತ್ಯಂತ ಕಡಿಮೆ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯ ಬಗ್ಗೆ ಮಾತನಾಡಿದ್ದಾರೆ. ರಾಮ್ ಚರಣ್ ಮೆಸೇಜ್​ಗಳನ್ನು ನೋಡುವುದಿಲ್ಲ ಎಂದು ಹೇಳಿದ್ದಾರೆ.

ರಾಮ್ ಚರಣ್​ ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ? ಈ ಘಟನೆಯೇ ಸಾಕ್ಷಿ
ರಾಮ್ ಚರಣ್
Follow us
ರಾಜೇಶ್ ದುಗ್ಗುಮನೆ
|

Updated on: Nov 08, 2024 | 2:22 PM

ಅನೇಕ ಹೀರೋ ಹಾಗೂ ಹೀರೋಯಿನ್​ಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಇದೇ ಕಾರಣಕ್ಕೆ ಅವರು ಹೆಚ್ಚು ಹೊತ್ತು ಮೊಬೈಲ್​ನಲ್ಲಿಯೇ ಸಮಯ ಕಳೆಯುತ್ತಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಹಾಗೂ ಮೊಬೈಲ್​​ನ ಕಡಿಮೆ ಬಳಕೆ ಮಾಡುತ್ತಾರೆ. ಈ ಸಾಲಿನಲ್ಲಿ ರಾಮ್ ಚರಣ್ ಕೂಡ ಇದ್ದಾರೆ. ಅವರು ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ ಎಂದರೆ ಅವರಿಗೆ ಮೆಸೇಜ್ ಮಾಡಿದ ಬಳಿಕ ಅದನ್ನು ನೋಡಿ ಎನ್ನಲು ಫೋನ್​ ಮಾಡಬೇಕು.

ರಾಮ್ ಚರಣ್ ಅವರ ಸೋದರ ಸಂಬಂಧಿ ವರುಣ್ ತೇಜ್ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ರಾಮ್ ಚರಣ್ ಹಾಗೂ ವರುಣ್ ತೇಜ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರೂ ಆಗಾಗ ಭೇಟಿ ಆಗುತ್ತಾ ಇರುತ್ತಾರೆ. ರಾಮ್ ಚರಣ್ ಅವರನ್ನು ವರುಣ್ ಅತಿ ಹತ್ತಿರದಿಂದ ಕಂಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಅವರು ಹಲವು ವಿಚಾರ ರಿವೀಲ್ ಮಾಡಿದ್ದಾರೆ. ರಾಮ್ ಚರಣ್ ಸರಿಯಾಗಿ ಮೆಸೇಜ್​ಗಳನ್ನೂ ನೋಡುವುದಿಲ್ಲ ಎಂದಿದ್ದಾರೆ ವರುಣ್.

‘ನನ್ನ ಸಿನಿಮಾದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದರೆ ನಾನು ಮೊದಲು ರಾಮ್​ ಚರಣ್​ ಅವರಿಗೆ ಕರೆ ಮಾಡಬೇಕು. ನಾನು ಮೆಸೇಜ್ ಕಳುಹಿಸಿದ್ದೇನೆ ನೋಡಿ ಎಂದು ಹೇಳಬೇಕು. ನಾನು ಕೇವಲ ಮೆಸೇಜ್ ಕಳಿಸಿ ಅವರಿಂದ ಉತ್ತರ ಬರುತ್ತದೆ ಎಂದು ನಿರೀಕ್ಷಿಸಬಾರದು’ ಎಂದಿದ್ದಾರೆ ವರುಣ್ ತೇಜ್. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಎನಿಸಿದೆ.

ರಾಮ್ ಚರಣ್ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದಾರೆ. ಆದರೆ, ಅದರಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ರಾಮ್ ಚರಣ್ ಅವರು ಈವರೆಗೆ ಇನ್​ಸ್ಟಾಗ್ರಾಮ್​ನಲ್ಲಿ 307 ಪೋಸ್ಟ್​ಗಳನ್ನು ಮಾತ್ರ ಹಂಚಿಕೊಂಡಿದ್ದಾರೆ. ಅವರಿಗೆ ಎರಡೂವರೆ ಕೋಟಿ ಹಿಂಬಾಲಕರು ಇದ್ದಾರೆ.

ಇದನ್ನೂ ಓದಿ: ಪ್ರೀತಿ ವಿಚಾರ ಹೇಳದ ವರುಣ್ ತೇಜ್ ಮೇಲೆ ಚಿರಂಜೀವಿಗೆ ಇನ್ನೂ ಇದೆ ಕೋಪ

ವರುಣ್ ತೇಜ್ ಅವರು ‘ಮಟ್ಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ಯಶಸ್ಸು ಕಾಣುವ ನಿರೀಕ್ಷೆಯಲ್ಲಿದ್ದಾರೆ. ನವೆಂಬರ್ 14ರಂದು ಸಿನಿಮಾ ರಿಲೀಸ್ ಆಗಲಿದೆ. ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ‘RC 16’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್