AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್

Ram Charan movie: ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್ ಚರಣ್ ಅವರ ಚಿಕ್ಕಪ್ಪ ಪವನ್ ಕಲ್ಯಾಣ್ ಅವರ ದಾಖಲೆಯೊಂದನ್ನು ಮುರಿದಿದೆ.

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್
Ram Charan
ಮಂಜುನಾಥ ಸಿ.
|

Updated on: May 08, 2026 | 11:24 AM

Share

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್ ಚರಣ್ ಅವರ ಚಿಕ್ಕಪ್ಪ ಪವನ್ ಕಲ್ಯಾಣ್ ಅವರ ದಾಖಲೆಯೊಂದನ್ನು ಮುರಿದಿದೆ.

‘ಪೆದ್ದಿ’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಅಮೆರಿಕನಲ್ಲಿ ಓಪನ್ ಆಗಿದ್ದು, ಕೇವಲ 24 ಗಂಟೆಯಲ್ಲಿ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಟಿಕೆಟ್​​ಗಳು ಮುಂಗಡವಾಗಿ ಬುಕಿಂಗ್ ಆಗಿವೆ. ಈ ಹಿಂದೆ ಪವನ್ ಕಲ್ಯಾಣ್ ಅವರ ‘ಓಜಿ’ ಸಿನಿಮಾದ ಮುಂಗಡ ಬುಕಿಂಗ್ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್​​ಗಳು 24 ಗಂಟೆಯಲ್ಲಿ ಬುಕ್ ಆಗಿತ್ತು. ಇದು ಇತ್ತೀಚೆಗಿನ ದಾಖಲೆಯಾಗಿತ್ತು. ಆದರೆ ಆ ದಾಖಲೆಯನ್ನು ‘ಪೆದ್ದಿ’ ಸಿನಿಮಾ ಮುರಿದು ಹಾಕಿದೆ.

‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಕತೆಯನ್ನು ಒಳಗೊಂಡಿದ್ದು, ಸಿನಿಮಾನಲ್ಲಿ ರಾಮ್ ಚರಣ್ ಕ್ರೀಡಾಪಟುವಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲವು ಪೋಸ್ಟರ್​​ನಲ್ಲಿ ರಾಮ್ ಚರಣ್ ಕ್ರಿಕೆಟರ್ ಆಗಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಬಿಡುಗಡೆ ಆದ ಟೀಸರ್​​ನಲ್ಲಿ ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದಾರೆ. ಕುಸ್ತಿ ಪಟುವಿನ ದೇಹ ಪಡೆಯಲು ಸಖತ್ ಕಸರತ್ತು ಮಾಡಿದ್ದಾರೆ ನಟ ರಾಮ್ ಚರಣ್. ಈ ಹಿಂದೆ ರಾಮ್ ಚರಣ್, ಗ್ರಾಮೀಣ ಭಾಗದ ಕತೆಯಲ್ಲಿ ನಟಿಸಿದಾಗ ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಈಗ ಮತ್ತೊಮ್ಮೆ ಅದೇ ಮ್ಯಾಜಿಕ್ ರಿಪೀಟ್ ಆಗುವ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ:ರಾಮ್ ಚರಣ್ ಮತ್ತು ನಾನಿ ಸಿನಿಮಾಗಳಿಗೆ ಲೀಕ್ ಸಂಕಷ್ಟ: ಆತಂಕದಲ್ಲಿ ‘ಪೆದ್ದಿ’, ‘ದಿ ಪ್ಯಾರಡೈಸ್’

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಎದುರು ಜಾನ್ಹವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ರಾಮ್ ಚರಣ್ ಅವರ ಗುರುವಿನ ಪಾತ್ರದಲ್ಲಿ ಶಿವರಾಜ್ ಕುಮಾರ್ ಅವರು ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ. ಸುಕುಮಾರ್ ಶಿಷ್ಯನಾಗಿರುವ ಇವರು ಈ ಹಿಂದೆ ‘ಉಪ್ಪೆನ’ ಹೆಸರಿನ ಬ್ಲಾಕ್ ಬಸ್ಟರ್ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More