AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಗೋಪಾಲ್ ವರ್ಮಾ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ಬಿಗ್​ ಬಾಸ್​ ಸ್ಪರ್ಧಿ  

ಅರಿಯಾನಾ ಜತೆ ಇರುವ ಬೋಲ್ಡ್​ ಫೋಟೋಗಳನ್ನು ಆರ್​ಜಿವಿ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿ, ‘ಅರಿಯಾನಾ  ಟಾಕ್ಸ್​ ಬೋಲ್ಡ್ ವಿತ್​ ಆರ್​ಜಿವಿ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ.

ರಾಮ್ ಗೋಪಾಲ್ ವರ್ಮಾ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ಬಿಗ್​ ಬಾಸ್​ ಸ್ಪರ್ಧಿ  
ಅರಿಯಾ ಜತೆ ರಾಮ್​ ಗೋಪಾಲ್​ ವರ್ಮಾ
TV9 Web
| Edited By: |

Updated on:Jun 16, 2021 | 4:10 PM

Share

ರಾಮ್​ ಗೋಪಾಲ್​ ವರ್ಮಾ ಸದಾ ವಿವಾದದ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಅವರು ಸ್ಟಾರ್​ ನಟರ ವಿರುದ್ಧ ಹೇಳಿಕೆ ಕೊಡುವುದರಲ್ಲಿ ಎತ್ತಿದೆ ಕೈ. ಇದರ ಜತೆಗೆ ಸಾಕಷ್ಟು ಹೀರೋಯಿನ್​ಗಳ ಜತೆಯೂ ಆರ್​ಜಿವಿ ಕ್ಲೋಸ್​ ಆಗಿ ಕಾಣಿಸಿಕೊಳ್ಳುತ್ತಾರೆ. ಈ ಫೋಟೋಗಳನ್ನು ಅವರು ಮುಕ್ತವಾಗಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ತೆಲುಗು ಬಿಗ್‌ ಬಾಸ್ ಮಾಜಿ ಸ್ಪರ್ಧಿ ಅರಿಯಾನಾ ಗ್ಲೋರಿ ಜತೆಗೆ ರಾಮ್ ಗೋಪಾಲ್ ವರ್ಮಾ ಜಿಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅರಿಯಾನಾ ಜತೆ ಇರುವ ಬೋಲ್ಡ್​ ಫೋಟೋಗಳನ್ನು ಆರ್​ಜಿವಿ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿ, ‘ಅರಿಯಾನಾ  ಟಾಕ್ಸ್​ ಬೋಲ್ಡ್ ವಿತ್​ ಆರ್​ಜಿವಿ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಟೈಟಲ್​ಗೆ ತಕ್ಕಂತೆ ಫೋಟೋಗಳು ಕೂಡ ಇವೆ.

ಅರಿಯಾನಾ  ಅವರ ವಿಶೇಷ ಸಂದರ್ಶನವನ್ನು ಆರ್​ಜಿವಿ ಮಾಡಿದ್ದಾರಂತೆ. ಈ ಸಂದರ್ಶನದಲ್ಲಿ ಅವರು ಸಾಕಷ್ಟು ವಿಚಾರ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂದರ್ಶನ ಶೀಘ್ರದಲ್ಲೇ ಪ್ರಸಾರವಾಗಲಿದೆ. ಇನ್ನು, ಶೀಘ್ರದಲ್ಲೇ ಆರ್​ಜಿವಿ ಚಿತ್ರಕ್ಕೆ ಅರಿಯಾನಾ ನಾಯಕಿಯಾಗಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಅಮಿತಾಭ್​ ಬಚ್ಚನ್​ ಹಾಗೂ ಆರ್​ಜಿವಿ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿ ಬರಲಿದೆ ಎನ್ನಲಾಗುತ್ತಿದೆ. ರಾಮ್ ಗೋಪಾಲ್​ ವರ್ಮಾ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಇದನ್ನೂ ಓದಿ: ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

Published On - 4:09 pm, Wed, 16 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್