AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೇಮ್ ಚೇಂಜರ್ ಬಾಕ್ಸ್ ಆಫೀಸ್​ ಲೆಕ್ಕ ಸುಳ್ಳು’: ಹಿಗ್ಗಾಮುಗ್ಗ ಜಾಡಿಸಿದ ರಾಮ್ ಗೋಪಾಲ್ ವರ್ಮಾ

ರಾಮ್ ಚರಣ್ ನಟನೆಯ ‘ಗೇಮ್​ ಚೇಂಜರ್​’ ಸಿನಿಮಾ ಜನವರಿ 10ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಘಟಾನುಘಟಿಗಳು ಇದ್ದರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗಿಲ್ಲ. ಆದರೆ ಚಿತ್ರತಂಡದ ಕಡೆಯಿಂದ ಸುಳ್ಳು ಬಾಕ್ಸ್ ಆಫೀಸ್​ ಲೆಕ್ಕ ನೀಡಲಾಗಿದೆ ಎಂದು ರಾಮ್​ ಗೋಪಾಲ್ ವರ್ಮಾ ಅವರು ಆರೋಪ ಮಾಡಿದ್ದಾರೆ.

‘ಗೇಮ್ ಚೇಂಜರ್ ಬಾಕ್ಸ್ ಆಫೀಸ್​ ಲೆಕ್ಕ ಸುಳ್ಳು’: ಹಿಗ್ಗಾಮುಗ್ಗ ಜಾಡಿಸಿದ ರಾಮ್ ಗೋಪಾಲ್ ವರ್ಮಾ
Ram Gopal Varma, Ram Charam
ಮದನ್​ ಕುಮಾರ್​
|

Updated on: Jan 14, 2025 | 5:59 PM

Share

ಜನವರಿ 10ರಂದು ತೆರೆಕಂಡ ‘ಗೇಮ್ ಚೇಂಜರ್​’ ಸಿನಿಮಾ ಮೊದಲ ದಿನವೇ 186 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ನಿರ್ಮಾಪಕರ ಕಡೆಯಿಂದ ಮಾಹಿತಿ ಹೊರಬಿದ್ದಿದೆ. ಆದರೆ ಈ ಲೆಕ್ಕ ಸುಳ್ಳು ಎಂದು ರಾಮ್​ ಗೋಪಾಲ್ ವರ್ಮಾ ಅವರು ಹೇಳುತ್ತಿದ್ದಾರೆ. ‘ಎಕ್ಸ್​’ (ಟ್ವಿಟರ್​) ಮೂಲಕ ಸರಣಿ ಪೋಸ್ಟ್ ಮಾಡಿರುವ ರಾಮ್​ ಗೋಪಾಲ್ ವರ್ಮಾ ಅವರು ‘ಗೇಮ್ ಚೇಂಜರ್​’ ಚಿತ್ರತಂಡವನ್ನು ಲೇವಡಿ ಮಾಡಿದ್ದಾರೆ. ಈ ರೀತಿ ಮೋಸದ ಲೆಕ್ಕ ನೀಡಿದ್ದು ಯಾರು ಎಂದು ರಾಮ್ ಗೋಪಾಲ್ ವರ್ಮಾ ಪ್ರಶ್ನಿಸಿದ್ದಾರೆ.

ರಾಮ್ ಚರಣ್​ ಅಭಿನಯದ, ಶಂಕರ್​ ನಿರ್ದೇಶನದ ‘ಗೇಮ್ ಚೇಂಜರ್​’ ಸಿನಿಮಾಗೆ ದಿಲ್ ರಾಜು ಬಂಡವಾಳ ಹೂಡಿದ್ದಾರೆ. ಚಿತ್ರದ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡ ಮಾಹಿತಿ ಪ್ರಕಾರ, ಈ ಸಿನಿಮಾ ಜನವರಿ 10ರಂದು ಬರೋಬ್ಬರಿ 186 ಕೋಟಿ ರೂಪಾಯಿ ಗಳಿಸಿದೆ. ಒಂದು ವೇಳೆ ಅದು ನಿಜವೇ ಹೌದಾಗಿದ್ದರೆ, ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ 4ನೇ ಸಿನಿಮಾ ಇದಾಗಬೇಕಿತ್ತು. ಆದರೆ ಈ ಲೆಕ್ಕ ನಿಜವಾಗಿರಲು ಸಾಧ್ಯವೇ ಇಲ್ಲ ಎಂದು ರಾಮ್ ಗೋಪಾಲ್ ವರ್ಮಾ ಅವರು ಟೀಕಿಸಿದ್ದಾರೆ. ಚಿತ್ರದ ಬಜೆಟ್​ ಬಗ್ಗೆಯೂ ಆರ್​ಜಿವಿ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಗೇಮ್ ಚೇಂಜರ್​ ಸಿನಿಮಾದ ಬಜೆಟ್ 450 ಕೋಟಿ ಆಗಿದ್ದರೆ, ಆರ್​ಆರ್​ಆರ್​ ಸಿನಿಮಾಗೆ 4500 ಕೋಟಿ ರೂಪಾಯಿ ಖರ್ಚಾಗಬೇಕಿತ್ತು. ಗೇಮ್ ಚೇಂಜರ್​ ಸಿನಿಮಾದ ಮೊದಲ ದಿನದ ಕಲೆಕ್ಷನ್​ 186 ಕೋಟಿ ಎಂಬುದಾದರೆ ‘ಪುಷ್ಪ 2’ ಚಿತ್ರದ ಮೊದಲ ದಿನದ ಕಲೆಕ್ಷನ್​ 1860 ಕೋಟಿ ರೂಪಾಯಿ ಆಗಬೇಕಿತ್ತು’ ಎಂದು ರಾಮ್ ಗೋಪಾಲ್ ವರ್ಮಾ ಅವರು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಹೀನಾಯ ಸ್ಥಿತಿಯಲ್ಲಿ ‘ಗೇಮ್ ಚೇಂಜರ್’ ಗಳಿಕೆ; ನಿರ್ಮಾಪಕರಿಗೆ ಆಗೋ ನಷ್ಟವೆಷ್ಟು?

ನಿರ್ಮಾಪಕ ದಿಲ್ ರಾಜು ಅವರು ಈ ರೀತಿ ಸುಳ್ಳು ಲೆಕ್ಕ ನೀಡುವಂತಹ ವ್ಯಕ್ತಿ ಅಲ್ಲ ಎಂದು ರಾಮ್ ಗೋಪಾಲ್ ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ಹಾಗಾದರೆ ಈ ಕೃತ್ಯದ ಹಿಂದೆ ಇರುವವರು ಯಾರು ಎಂದು ಕೂಡ ಅವರು ಪ್ರಶ್ನಿಸಿದ್ದಾರೆ. ಆರ್​ಜಿವಿ ಮಾಡಿರುವ ಈ ಆರೋಪಗಳಿಗೆ ‘ಗೇಮ್ ಚೇಂಜರ್​’ ಚಿತ್ರತಂಡದವರು ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು. ವರದಿಗಳ ಪ್ರಕಾರ, ‘ಗೇಮ್ ಚೇಂಜರ್​’ ಸಿನಿಮಾ 4 ದಿನ ಕಳೆದರೂ ಭಾರತದ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ