ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಜಾಮೀನು ರಹಿತ ವಾರಂಟ್ ಹೊರಡಿಸಿದ ಕೋರ್ಟ್

|

Updated on: Jan 23, 2025 | 2:22 PM

ಟಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮುಂಬೈ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2018ರಲ್ಲಿ ದಾಖಲಾದ ಪ್ರಕರಣದಲ್ಲಿ ಅವರು ಕೋರ್ಟ್‌ಗೆ ಹಾಜರಾಗದ ಕಾರಣ ಈ ಶಿಕ್ಷೆ ವಿಧಿಸಲಾಗಿದೆ. ಆರ್ಥಿಕ ಸಂಕಷ್ಟದಲ್ಲಿದ್ದ ಅವರು ಈಗ ಜೈಲು ಶಿಕ್ಷೆಯನ್ನು ಎದುರಿಸಬೇಕಾಗಿದೆ.

ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಜಾಮೀನು ರಹಿತ ವಾರಂಟ್ ಹೊರಡಿಸಿದ ಕೋರ್ಟ್
Ram Gopal Varma
Follow us on

ಟಾಲಿವುಡ್​ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್​ ಕೇಸ್​ನಲ್ಲಿ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ದುಬಾರಿ ದಂಡ ವಿಧಿಸಿದ್ದು, ಪಾವತಿಸಲು ತಪ್ಪಿಸಿದರೆ ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದಿದೆ. ಮಂಗಳವಾರ (ಜವನವರಿ 21) ತೀರ್ಪು ಇದ್ದಿದ್ದರಿಂದ ರಾಮ್ ಗೋಪಾಲ್ ವರ್ಮಾ ಕೋರ್ಟ್​ಗೆ ಹಾಜರಿ ಹಾಕಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ಕೋರ್ಟ್​ಗೆ ಬರಲೇ ಇಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.

ರಾಮ್ ಗೋಪಾಲ್ ವರ್ಮಾ ಅವರು ಟಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ವಿವಾದಕ್ಕೂ ಅವರಿಗೂ ಸಾಕಷ್ಟು ನಂಟಿದೆ. ಅವರು ಒಂದಲ್ಲಾ ಒಂದು ವಿವಾದಗಳ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರಿಗೆ ಜೈಲು ಶಿಕ್ಷೆ ಆಗಿರುವುದು ಸಂಚಲನ ಸೃಷ್ಟಿಸಿದೆ.

ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ರೂ.3.72 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಘಟನೆ ಏನು?

2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆ ಸಮಯದಲ್ಲಿ ಮಹೇಶ್ಚಂದ್ರ ಮಿಶ್ರಾ ಎಂಬ ವ್ಯಕ್ತಿ ರಾಮಗೋಪಾಲ್ ವರ್ಮಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆರ್​​ಜಿವಿಗೆ ನೋಟಿಸ್ ನೀಡಿದರೂ ಅವರು ಕೋರ್ಟ್​ಗೆ ಬಂದಿರಲಿಲ್ಲ. ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ‘ಗೇಮ್ ಚೇಂಜರ್ ಬಾಕ್ಸ್ ಆಫೀಸ್​ ಲೆಕ್ಕ ಸುಳ್ಳು’: ಹಿಗ್ಗಾಮುಗ್ಗ ಜಾಡಿಸಿದ ರಾಮ್ ಗೋಪಾಲ್ ವರ್ಮಾ

ಆರ್ಥಿಕ ಸಂಕಷ್ಟ

ಸಿನಿಮಾ ವಿಚಾರಕ್ಕೆ ಬಂದರೆ ಒಂದು ಕಾಲದಲ್ಲಿ ಉತ್ತಮ ಫಾರ್ಮ್​​ನಲ್ಲಿದ್ದ ಆರ್​ಜಿವಿ ಇತ್ತೀಚೆಗೆ ಕೀಳುಮಟ್ಟದ ಸಿನಿಮಾಗಳನ್ನು ಮಾಡುತ್ತಾ ಸಾಲು ಸಾಲು ಫ್ಲಾಪ್​ಗಳನ್ನು ನೀಡುತ್ತಿದ್ದಾರೆ. ಅವರು ನಟಿಯರ ಜೊತೆ ಬೋಲ್ಡ್ ಆಗಿ ಕಾಣಿಸಿಕೊಂಡು, ಅವರ ಜೊತೆ ಆಪ್ತವಾಗಿ ಮಾತನಾಡಿ ಸುದ್ದಿ ಆಗುತ್ತಿದ್ದಾರೆ. ಅವರು ಆರ್ಥಿಕ ಸಂಕಷ್ಟ ಕೂಡ ಎದುರಿಸುತ್ತಿದ್ದು, 2022ರಲ್ಲಿ ಅವರು ಕಚೇರಿಯನ್ನು ಮಾರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:09 pm, Thu, 23 January 25