AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ರಿಲೀಸ್ ಡೇಟ್​ನಲ್ಲಿ ಬರುತ್ತಿದೆ ಶ್ರೀಲೀಲಾ ಸಿನಿಮಾ; ಪ್ರಮೋಷನ್​ಗೆ ಭರ್ಜರಿ ಪ್ಲಾನ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ಅವರು ‘ಸ್ಕಂದ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರ ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್ 15ರಂದು ಬಿಡುಗಡೆ ಆಗುವುದರಲ್ಲಿತ್ತು. ಆದರೆ, ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಿಲ್ಲ. ಈ ಕಾರಣದಿಂದಲೋ ಏನೋ ನಿರ್ಮಾಪಕರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದ್ದಾರೆ.

‘ಸಲಾರ್’ ರಿಲೀಸ್ ಡೇಟ್​ನಲ್ಲಿ ಬರುತ್ತಿದೆ ಶ್ರೀಲೀಲಾ ಸಿನಿಮಾ; ಪ್ರಮೋಷನ್​ಗೆ ಭರ್ಜರಿ ಪ್ಲಾನ್
ಸ್ಕಂದ ಟೀಂ-ಸಲಾರ್
ರಾಜೇಶ್ ದುಗ್ಗುಮನೆ
|

Updated on:Sep 05, 2023 | 7:32 AM

Share

‘ಸಲಾರ್’ ಸಿನಿಮಾದ (Salaar Movie) ರಿಲೀಸ್ ಡೇಟ್ ಮುಂದಕ್ಕೆ ಹೋಗಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಂದು ಸಿನಿಮಾ ರಿಲೀಸ್ ಮಾಡಲು ದಕ್ಷಿಣ ಭಾರತದ ಕೆಲ ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ. ಶ್ರೀಲೀಲಾ (Sreeleela) ಹಾಗೂ ರಾಮ್ ಪೋತಿನೇನಿ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸೆಪ್ಟೆಂಬರ್ 28ರಂದು ‘ಸಲಾರ್’ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರತಂಡ ಈ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಅಮೆರಿಕದಲ್ಲಿ ಆನ್​ಲೈನ್​ ಬುಕಿಂಗ್​ಗೆ ಅವಕಾಶ ನೀಡಲಾಗಿತ್ತು. ಆದರೆ, ಅಲ್ಲಿನ ಹಂಚಿಕೆದಾರರಿಗೆ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​ಪೋನ್ ಆದ ಬಗ್ಗೆ ಮಾಹಿತಿ ನೀಡಲಾಗಿದ್ದು, ಬುಕಿಂಗ್​ ಆಯ್ಕೆಯಿಂದ ‘ಸಲಾರ್’ ಸಿನಿಮಾವನ್ನು ತೆಗೆಯಲಾಗಿದೆ. ಹೀಗಾಗಿ, ಸಿನಿಮಾ ರಿಲೀಸ್ ಮುಂದಕ್ಕೆ ಹೋಗೋದು ಬಹುತೇಕ ಖಚಿತವಾಗಿದೆ.

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ಅವರು ‘ಸ್ಕಂದ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ.  ಬಯೋಪತಿ ಶ್ರೀನು ನಿರ್ದೇಶನದ ಈ ಚಿತ್ರ ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್ 15ರಂದು ಬಿಡುಗಡೆ ಆಗುವುದರಲ್ಲಿತ್ತು. ಆದರೆ, ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಿಲ್ಲ. ಈ ಕಾರಣದಿಂದಲೋ ಏನೋ ನಿರ್ಮಾಪಕರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದ್ದಾರೆ.

ಸೆಪ್ಟೆಂಬರ್ 28ರಂದು ‘ಸ್ಕಂದ’ ಸಿನಿಮಾ ತೆರೆಗೆ ಬರಲಿದೆ. ಕನ್ನಡದ ನಟಿ ಶ್ರೀಲೀಲಾಗೆ ಟಾಲಿವುಡ್​ನಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಆರಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಮಾರುಕಟ್ಟೆ ಹೆಚ್ಚಿರುವುದರಿಂದ ನಿರ್ಮಾಪಕರು ಕೂಡ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ

‘ಸ್ಕಂದ’ ಚಿತ್ರದ ಟ್ರೇಲರ್ ಈಗಾಗಲೇ ರಿಲೀಸ್ ಆಗಿದೆ. ಆದರೆ, ಇದಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮೊದಲು ರಿಲೀಸ್ ಆದ ಬಯೋಪತಿ ಶ್ರೀನು ನಿರ್ದೇಶನದ ‘ವಿನಯ ವಿಧೇಯ ರಾಮ’ ಚಿತ್ರಕ್ಕೆ ಈ ಸಿನಿಮಾನ ಹೋಲಿಕೆ ಮಾಡುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಡಿಸಾಸ್ಟರ್ ಎನಿಸಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Tue, 5 September 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್