AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arun Govil: ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ಇತ್ತೀಚೆಗೆ ಬಿಡುಗಡೆ ಆದ ‘ಆರ್ಟಿಕಲ್​ 370’ ಸಿನಿಮಾದಲ್ಲಿ ಅರುಣ್​ ಗೋವಿಲ್​ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ನಿಭಾಯಿಸಿದ್ದಾರೆ. ಆ ಸಿನಿಮಾ ಹಿಟ್​ ಆಗಿದೆ. ಅದರ ಬೆನ್ನಲ್ಲೇ ಅರುಣ್​ ಗೋವಿಲ್​ ಅವರಿಗೆ ಮೀರತ್​ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದಿಂದ ಟಿಕೆಟ್​ ನೀಡಲಾಗಿದೆ. ನಟಿ ಕಂಗನಾ ರಣಾವತ್​ ಅವರಿಗೂ ಬಿಜೆಪಿ ಟಿಕೆಟ್​ ನೀಡಿದೆ.

Arun Govil: ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​
ಅರುಣ್​ ಗೋವಿಲ್​
ಮದನ್​ ಕುಮಾರ್​
|

Updated on:Mar 24, 2024 | 11:21 PM

Share

‘ದೂರದರ್ಶನ’ದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯ (Ramayan Serial) ನಟ ಅರುಣ್​ ಗೋವಿಲ್​ ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್​ ನೀಡಲಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶದ ಮೀರತ್​ (Meerut) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇಂದು (ಮಾರ್ಚ್​ 24) ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಆಗಿದ್ದು 111 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ನಟಿ ಕಂಗನಾ ರಣಾವತ್​ ಅವರಿಗೂ ಟಿಕೆಟ್​ ನೀಡಲಾಗಿದೆ. ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅರುಣ್ ಗೋವಿಲ್​ (Arun Govil) ಅವರಿಗೆ ಟಿಕೆಟ್​ ಸಿಕ್ಕಿರುವುದು ಅವರ ಅಭಿಮಾನಿಗಳು ಸಂತಸ ತಂದಿದೆ.

ಇದೇ ಮೊದಲ ಬಾರಿಗೆ ಅರುಣ್​ ಗೋವಿಲ್​ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ಅವರು ಮೂಲತಃ ಉತ್ತರ ಪ್ರದೇಶದ ಮೀರತ್​ನವರು. ರಮಾನಂದ್​ ಸಾಗರ್​ ನಿರ್ದೇಶನದ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡುವ ಮೂಲಕ ದೇಶಾದ್ಯಂತ ಅವರು ಮನೆಮಾತಾದರು.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

1987-88ರಲ್ಲಿ ‘ರಾಮಾಯಣ’ ಧಾರಾವಾಹಿ ಪ್ರಸಾರ ಆಗಿತ್ತು. ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಮರು ಪ್ರಸಾರ ಆಗಿ ಮತ್ತೊಮ್ಮೆ ಜನಮೆಚ್ಚುಗೆ ಗಳಿಸಿತ್ತು. ಅರುಣ್​ ಗೋವಿಲ್​ ಅವರು ಮಾಡಿದ ರಾಮನ ಪಾತ್ರವನ್ನು ಜನರು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಎಷ್ಟರಮಟ್ಟಿಗೆ ಯಶಸ್ಸು ಸಿಗಲಿ ಎಂಬುದನ್ನು ಕಾದು ನೋಡಬೇಕು. ಅರುಣ್​ ಗೋವಿಲ್​ ಅವರಿಗೆ ಈಗ 72 ವರ್ಷ ವಯಸ್ಸು.

ನರೇಂದ್ರ ಮೋದಿ ಪಾತ್ರ:

50ಕ್ಕೂ ಅಧಿಕ ಸಿನಿಮಾಗಳಲ್ಲಿ ಅರುಣ್ ಗೋವಿಲ್​ ನಟಿಸಿದ್ದಾರೆ. ‘ಪಹೇಲಿ’, ‘ಸಸುರಾಲ್​’, ‘ಹಿಮ್ಮತ್​ವಾಲಾ’, ‘ಕಾನೂನ್​’, ‘ಓಎಂಜಿ 2’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಆರ್ಟಿಕಲ್​ 370’ ಸಿನಿಮಾದಲ್ಲಿ ಅವರು ನರೇಂದ್ರ ಮೋದಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆ ಚಿತ್ರವು ಭಾರತದ ಬಾಕ್ಸ್​ ಆಫೀಸ್​ನಲ್ಲಿ 78 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಅರುಣ್​ ಗೋವಿಲ್​ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಟಿಕೆಟ್​ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:08 pm, Sun, 24 March 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು