AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​ ರೇಸ್​​ನಲ್ಲಿ ‘ರಾಮಾಯಣ’; ಹಾಲಿವುಡ್ ಸಿನಿಮಾಗಳಿಗೆ ಸ್ಪರ್ಧೆ

ನಮಿತ್ ಮಲ್ಹೋತ್ರಾ ನಿರ್ಮಾಣದ ರಾಮಾಯಣ ಭಾಗ 1 ಸಿನಿಮಾ 32ನೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್ ಶಾರ್ಟ್‌ಲಿಸ್ಟ್‌ನಲ್ಲಿ ಎರಡು ವಿಭಾಗಗಳಲ್ಲಿ ಸ್ಥಾನ ಪಡೆದಿದೆ. ಅತ್ಯುತ್ತಮ ವಿಜ್ಯುವಲ್ ಎಫೆಕ್ಟ್ಸ್ ಮತ್ತು ಸ್ಟಂಟ್ ವಿಭಾಗದಲ್ಲಿ ಹಾಲಿವುಡ್ ಚಿತ್ರಗಳಿಗೆ ಪೈಪೋಟಿ ನೀಡುತ್ತಿದೆ. ಮತ್ತೊಂದೆಡೆ ಬಾಕ್ಸ್ ಆಫೀಸ್ ಗಳಿಕೆ ಕುಸಿದ ಕಾರಣ ಟಿಕೆಟ್ ದರವನ್ನು ಇಳಿಸಲಾಗಿದೆ.

ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​ ರೇಸ್​​ನಲ್ಲಿ ‘ರಾಮಾಯಣ’; ಹಾಲಿವುಡ್ ಸಿನಿಮಾಗಳಿಗೆ ಸ್ಪರ್ಧೆ
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: Nov 24, 2026 | 2:50 PM

Share

ಮುಖ್ಯಾಂಶಗಳು

  • ಆಸ್ಕರ್ ಹಾದಿಯತ್ತ 'ರಾಮಾಯಣ'
  • ಹಾಲಿವುಡ್ ದಿಗ್ಗಜರಿಗೆ ನೇರ ಪೈಪೋಟಿ
  • 11 ವಿಭಾಗಗಳಲ್ಲಿ 'ದಿ ಒಡಿಸ್ಸಿ' ಮೇಲುಗೈ

ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಸಿನಿಮಾ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಮಿಂಚುತ್ತಿದೆ. ಪ್ರತಿಷ್ಠಿತ 32ನೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್ ಶಾರ್ಟ್‌ಲಿಸ್ಟ್‌ನಲ್ಲಿ ಈ ಚಿತ್ರ ಸ್ಥಾನ ಪಡೆದಿದೆ. ಅತ್ಯುತ್ತಮ ವಿಜ್ಯುವಲ್ ಎಫೆಕ್ಟ್ಸ್ ಮತ್ತು ಅತ್ಯುತ್ತಮ ಸ್ಟಂಟ್ ಡಿಸೈನ್ ವಿಭಾಗಗಳಲ್ಲಿ ‘ರಾಮಾಯಣ’ ಸ್ಪರ್ಧೆಗೆ ಇಳಿದಿದ್ದು, ಭಾರತೀಯ ಚಿತ್ರರಂಗಕ್ಕೆ ಹೊಸ ಹೆಮ್ಮೆ ತಂದಿದೆ.

ಸುಮಾರು 500ಕ್ಕೂ ಹೆಚ್ಚು ಸಿನಿಮಾ ವಿಮರ್ಶಕರು ಹಾಗೂ ಪತ್ರಕರ್ತರನ್ನು ಒಳಗೊಂಡಿರುವ ಕ್ರಿಟಿಕ್ಸ್ ಚಾಯ್ಸ್ ಅಸೋಸಿಯೇಷನ್ ಈ ಪಟ್ಟಿಯನ್ನು ಪ್ರಕಟಿಸಿದೆ. ತಾಂತ್ರಿಕ ವಿಭಾಗದ ಒಟ್ಟು 12 ಕೆಟಗರಿಗಳಲ್ಲಿ ಶಾರ್ಟ್‌ಲಿಸ್ಟ್ ಬಿಡುಗಡೆಯಾಗಿದೆ. ವಿಜ್ಯುವಲ್ ಎಫೆಕ್ಟ್ಸ್ ವಿಭಾಗದಲ್ಲಿ ‘ರಾಮಾಯಣ’ ಚಿತ್ರಕ್ಕೆ ಹಾಲಿವುಡ್‌ನ ‘ದಿ ಒಡಿಸ್ಸಿ’, ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಮತ್ತು ‘ಗಾಡ್ಜಿಲ್ಲಾ ಮೈನಸ್ ಜೀರೋ’ ಚಿತ್ರಗಳಿಂದ ಭಾರಿ ಪೈಪೋಟಿ ಎದುರಾಗಿದೆ. ಅಂತೆಯೇ ಸ್ಟಂಟ್ ವಿಭಾಗದಲ್ಲಿ ‘ಡ್ಯೂನ್: ಪಾರ್ಟ್ 3’ ಹಾಗೂ ‘ರೆಸಿಡೆಂಟ್ ಎವಿಲ್’ ಸಿನಿಮಾಗಳೊಂದಿಗೆ ಯಶ್ ಚಿತ್ರ ಸೆಣಸಾಡಲಿದೆ.

ಈ ಬಾರಿಯ ತಾಂತ್ರಿಕ ವಿಭಾಗದ ಶಾರ್ಟ್‌ಲಿಸ್ಟ್‌ನಲ್ಲಿ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ ಚಿತ್ರ ಅಗ್ರಸ್ಥಾನದಲ್ಲಿದೆ. ಒಟ್ಟು 12 ವಿಭಾಗಗಳಲ್ಲಿ 11 ಸ್ಥಾನಗಳನ್ನು ಈ ಸಿನಿಮಾ ಬಾಚಿಕೊಂಡಿದೆ. ನಂತರದ ಸ್ಥಾನದಲ್ಲಿ ‘ಡ್ಯೂನ್: ಪಾರ್ಟ್ 3’ ಮತ್ತು ಸ್ಪ್ಯಾನಿಷ್ ಸಿನಿಮಾ ‘ಲಾ ಬೋಲಾ ನೆಗ್ರಾ’ ತಲಾ ಎಂಟು ವಿಭಾಗಗಳಲ್ಲಿ ಸ್ಥಾನ ಪಡೆದಿವೆ. ‘ಗಾಡ್ಜಿಲ್ಲಾ ಮೈನಸ್ ಜೀರೋ’ ಹಾಗೂ ‘ವೈಲ್ಡ್‌ವುಡ್’ ಚಿತ್ರಗಳು ತಲಾ ಏಳು ವಿಭಾಗಗಳಲ್ಲಿ ಆಯ್ಕೆಯಾಗಿ ಮೂರನೇ ಸ್ಥಾನ ಹಂಚಿಕೊಂಡಿವೆ.

ಕ್ರಿಟಿಕ್ಸ್ ಚಾಯ್ಸ್ ಪ್ರಶಸ್ತಿಗಳನ್ನು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳ ಮುನ್ಸೂಚಕ ಎಂದೇ ಕರೆಯಲಾಗುತ್ತದೆ. ಈ ಹಿಂದೆ ಇಲ್ಲಿ ಗೆದ್ದ ‘ಗ್ಲಾಡಿಯೇಟರ್’ ಮತ್ತು ‘ಪ್ಯಾರಾಸೈಟ್’ ಚಿತ್ರಗಳು ಆಸ್ಕರ್ ಕೂಡ ಗೆದ್ದಿದ್ದವು. ನವೆಂಬರ್ 26ರಿಂದ ಅಂತಿಮ ನಾಮನಿರ್ದೇಶನಕ್ಕಾಗಿ ಮತದಾನ ಆರಂಭವಾಗಲಿದೆ. ಡಿಸೆಂಬರ್ 4ರಂದು ಅಂತಿಮ ಪಟ್ಟಿ ಹೊರಬೀಳಲಿದೆ. ನಟನೆ ಮತ್ತು ಚಿತ್ರಕಥೆ ವಿಭಾಗಗಳಲ್ಲಿಯೂ ‘ರಾಮಾಯಣ’ ನಾಮನಿರ್ದೇಶನಗೊಳ್ಳುವ ಭರವಸೆಯಲ್ಲಿದೆ. 2027ರ ಜನವರಿ 3ರಂದು ಲಾಸ್ ಏಂಜಲೀಸ್‌ನಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇದನ್ನೂ ಓದಿ: ‘ರಾಮಾಯಣ’ 19 ದಿನಕ್ಕೆ 1,704 ಕೋಟಿ ರೂಪಾಯಿ ಗಳಿಕೆ; 2,000 ಕೋಟಿ ಕ್ಲಬ್ ಸೇರುತ್ತಾ ಸಿನಿಮಾ?

ಭಾರತದ ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಉತ್ತಮ ಗಳಿಕೆ ಕಾಣುತ್ತಿದ್ದರೂ ಹಳೆಯ ದಾಖಲೆಗಳನ್ನು ಮುರಿಯಲು ಸಾಧ್ಯವಾಗಿಲ್ಲ. ಸ್ಯಾಕ್ನಿಲ್ಕ್ ವರದಿಯ ಪ್ರಕಾರ ಈ ಚಿತ್ರ ಭಾರತದಲ್ಲಿ ಒಟ್ಟು 955.45 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಆದರೆ ‘ಪುಷ್ಪ 2’ (1,234.10 ಕೋಟಿ), ‘ಧುರಂಧರ್ 2’ (1,149.30 ಕೋಟಿ) ಮತ್ತು ‘ಬಾಹುಬಲಿ 2’ (1,030.42 ಕೋಟಿ) ಚಿತ್ರಗಳ ದಾಖಲೆಯನ್ನು ಹಿಂದಿಕ್ಕಲು ‘ರಾಮಾಯಣ’ ವಿಫಲವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?