AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಯಿತು ‘ರಾಮಾಯಣ’ ಸಿನಿಮಾ ಶೂಟಿಂಗ್; ವಿದೇಶಕ್ಕೆ ಹಾರಿದ ರಣಬೀರ್, ಯಶ್

ಎರಡು ಪಾರ್ಟ್​ಗಳಲ್ಲಿ ‘ರಾಮಾಯಣ’ ಸಿನಿಮಾ ಸಿದ್ಧವಾಗುತ್ತಿದೆ. ಮೊದಲ ಪಾರ್ಟ್​​ಗೆ ಶೂಟಿಂಗ್ ಪೂರ್ಣಗೊಂಡಿದೆ. ಚಿತ್ರೀಕರಣದ ಕೊನೆಯ ದಿನ ನಟ ರಣಬೀರ್ ಕಪೂರ್, ನಿರ್ದೇಶಕ ನಿತೇಶ್ ತಿವಾರಿ ಮುಂತಾದವರು ಕೇಕ್ ಕತ್ತರಿಸಿದ್ದಾರೆ. ಶೂಟಿಂಗ್ ಮುಗಿಸಿಕೊಂಡು ರಣಬೀರ್ ಕಪೂರ್ ಅವರು ಫ್ಯಾಮಿಲಿ ಜೊತೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಮುಗಿಯಿತು ‘ರಾಮಾಯಣ’ ಸಿನಿಮಾ ಶೂಟಿಂಗ್; ವಿದೇಶಕ್ಕೆ ಹಾರಿದ ರಣಬೀರ್, ಯಶ್
Yash, Alia Bhatt, Ranbir Kapoor
ಮದನ್​ ಕುಮಾರ್​
|

Updated on: Jul 01, 2025 | 5:37 PM

Share

ಹಲವು ಕಾರಣಗಳಿಂದಾಗಿ ‘ರಾಮಾಯಣ’ ಸಿನಿಮಾ (Ramayana Part 1) ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ರಾಮನ ಪಾತ್ರವನ್ನು ರಣಬೀರ್ ಕಪೂರ್ ಮಾಡುತ್ತಿದ್ದಾರೆ. ಯಶ್ (Yash) ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಸೀತೆ ಪಾತ್ರವನ್ನು ಸಾಯಿ ಪಲ್ಲವಿ ನಿಭಾಯಿಸುತ್ತಿದ್ದಾರೆ. ಪಾತ್ರವರ್ಗದಲ್ಲಿ ಇನ್ನೂ ಅನೇಕ ಘಟಾನುಘಟಿ ಕಲಾವಿದರು ಇದ್ದಾರೆ. ಆದ್ದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯ ಆಗಿದೆ. ಶೂಟಿಂಗ್ ಮುಗಿಸಿದ ಬೆನ್ನಲ್ಲೇ ಯಶ್, ರಣಬೀರ್ ಕಪೂರ್ (Ranbir Kapoor) ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಡುವು ಇಲ್ಲದೇ ಅವರು ಶೂಟಿಂಗ್ ಮಾಡುತ್ತಿದ್ದರು. ಈಗ ಶೂಟಿಂಗ್ ಮುಗಿದಿರುವುದರಿಂದ ಅವರು ಫ್ಯಾಮಿಲಿಗೆ ಸಮಯ ನೀಡುತ್ತಿದ್ದಾರೆ. ವಿದೇಶದಲ್ಲಿ ಕಾಲ ಕಳೆಯುವ ಸಲುವಾಗಿ ಪ್ರಯಾಣ ಬೆಳೆಸಿದ್ದಾರೆ. ಅದೇ ರೀತಿ ರಣಬೀರ್ ಕಪೂರ್ ಕೂಡ ತಮ್ಮ ಕುಟುಂಬದವರ ಜೊತೆ ಲಂಡನ್​​ಗೆ ತೆರಳಿದ್ದಾರೆ.

ಜುಲೈ 3ರಂದು ‘ರಾಮಾಯಣ’ ಸಿನಿಮಾದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಲಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಬೆಂಗಳೂರು, ಮುಂಬೈ ಮುಂತಾದ ನಗರಗಳಲ್ಲಿ ಅಭಿಮಾನಿಗಳ ಎದುರು ಗ್ಲಿಂಪ್ಸ್ ರಿಲೀಸ್ ಮಾಡಲು ತೀರ್ಮಾನಿಸಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಯಶ್, ರಣಬೀರ್ ಕಪೂರ್ ಭಾಗವಹಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಇದನ್ನೂ ಓದಿ
Image
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
Image
ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
Image
ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್
Image
ಕಡಲ ತೀರದಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರ

‘ರಾಮಾಯಣ’ ಸಿನಿಮಾ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ಅತ್ಯಾಧುನಿಕ ಗ್ರಾಫಿಕ್ಸ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶೂಟಿಂಗ್ ಮುಗಿದ ಬಳಿಕ ರಣಬೀರ್ ಕಪೂರ್ ಅವರು ಎಮೋಷನಲ್ ಆಗಿ ಮಾತನಾಡಿದ್ದಾರೆ. ಇದು ತಮ್ಮ ವೃತ್ತಿಜೀವನದ ಸ್ಪೆಷಲ್ ಸಿನಿಮಾ ಮತ್ತು ಪಾತ್ರ ಎಂದು ಅವರು ಹೇಳಿದ್ದಾರೆ. ಚಿತ್ರತಂಡದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ಐಶಾರಾಮಿ ಕಾರು ಖರೀದಿಸಿದ ಯಶ್, ವಿಶೇಷವಾಗಿದೆ ರಿಜಿಸ್ಟ್ರೆಷನ್ ಸಂಖ್ಯೆ

‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. 2 ಪಾರ್ಟ್​ನಲ್ಲಿ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ಗೆ ಚಿತ್ರೀಕರಣ ಮುಕ್ತಾಯ ಆಗಿದೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರ ಮಾಡುತ್ತಿದ್ದಾರೆ. ಮಂಡೋದರಿಯಾಗಿ ಕಾಜಲ್ ಅಗರ್​ವಾಲ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ