ಭಾರತಕ್ಕೂ ಮುನ್ನ ವಿದೇಶದಲ್ಲಿ ‘ರಾಮಾಯಣ’ ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್

ರಣ್‌ಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ವಿದೇಶದಲ್ಲಿ ರಿಲೀಸ್ ಆಗಲಿದೆ. ನವೆಂಬರ್ 6ರಂದು ವಿದೇಶ ಹಾಗೂ ನವೆಂಬರ್ 8ಕ್ಕೆ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಪೈರೆಸಿ ಮತ್ತು ಲೀಕ್ ಭೀತಿಯಿಂದ ಭಾರತೀಯ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೂ ಮುನ್ನ ವಿದೇಶದಲ್ಲಿ ರಾಮಾಯಣ ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್
ರಾಮಾಯಣ

Updated on: Aug 08, 2026 | 9:27 AM

ಮುಖ್ಯಾಂಶಗಳು

  • ವಿದೇಶದಲ್ಲಿ ಮುಂಚಿತವಾಗಿ 'ರಾಮಾಯಣ' ಧಮಾಕಾ
  • ಭಾರತದ ಪ್ರೇಕ್ಷಕರಿಗೆ ಎರಡೆರಡು ದಿನ ಕಾಯುವಿಕೆ
  • ಪೈರೆಸಿ ತಡೆಯಲು ಫ್ಯಾನ್ಸ್ ಮನವಿ

ಬಾಲಿವುಡ್ ನಟ ರಣ್‌ಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬೃಹತ್ ಬಜೆಟ್‌ನ ‘ರಾಮಾಯಣ’ ಸಿನಿಮಾದ ಬಿಡುಗಡೆ ಕುರಿತು ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ನೀಡಿರುವ ಹೇಳಿಕೆ ಇದೀಗ ಭಾರತೀಯ ಸಿನಿಮಾ ಪ್ರೇಮಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ರಾಮಾಯಣ’ ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿಯೇ ವಿದೇಶಗಳಲ್ಲಿ ತೆರೆಕಾಣಲಿದೆ.

ವಿದೇಶದಲ್ಲಿ ನವೆಂಬರ್ 6, ಭಾರತದಲ್ಲಿ ನವೆಂಬರ್ 8

ನಿರ್ಮಾಪಕ ನಮಿತ್ ಮಲ್ಹೋತ್ರಾ ತಿಳಿಸಿರುವ ಪ್ರಕಾರ, ‘ರಾಮಾಯಣ’ ಚಿತ್ರವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 6 ಶುಕ್ರವಾರದಂದು ಬಿಡುಗಡೆಯಾಗಲಿದೆ. ಆದರೆ ಭಾರತದಲ್ಲಿ ನವೆಂಬರ್ 8ರ ಭಾನುವಾರ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ವಿದೇಶಗಳಲ್ಲಿ ಶುಕ್ರವಾರ ಸಿನಿಮಾ ರಿಲೀಸ್ ಮಾಡುವ ಪದ್ಧತಿ ಇರುವುದರಿಂದ ಈ ನಿರ್ಧಾರ ತಳೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಲೀಕ್ ಭೀತಿ: ಅಪ್ಸೆಟ್ ಆದ ಭಾರತೀಯ ಅಭಿಮಾನಿಗಳು

ವಿದೇಶದಲ್ಲಿ ಎರಡು ದಿನ ಮುಂಚಿತವಾಗಿ ಸಿನಿಮಾ ರಿಲೀಸ್ ಆಗುತ್ತಿರುವುದು ಭಾರತೀಯ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಚಿತ್ರದ ದೃಶ್ಯಗಳು ಎಚ್‌ಡಿ ರೂಪದಲ್ಲಿ ಲೀಕ್ ಆಗಬಹುದು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸ್ಪಾಯ್ಲರ್‌ಗಳು ಹರಿದಾಡಬಹುದು ಎಂಬ ಭಯ ಫ್ಯಾನ್ಸ್‌ನಲ್ಲಿದೆ. ಈ ಕಾರಣಕ್ಕೆ ಪ್ರಪಂಚದಾದ್ಯಂತ ಒಂದೇ ದಿನ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಅಭಿಮಾನಿಗಳು ನಿರ್ಮಾಪಕರಲ್ಲಿ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಆಸ್ಕರ್ ಸಿಗಲೇ ಬೇಕು’: ‘ರಾಮಾಯಣ’ ಸಿನಿಮಾವನ್ನು ಕೊಂಡಾಡಿದ ಮಹಾರಾಷ್ಟ್ರ ಸಿಎಂ

ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ, ಕೇವಲ ಐದೇ ದಿನಗಳಲ್ಲಿ 100 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಜಾಗತಿಕ ಮಟ್ಟದಲ್ಲಿ ದಾಖಲೆ ಬರೆದಿದೆ.  ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಿದ್ದಾರೆ. ರಣಬೀರ್ ರಾಮ, ಸಾಯಿ ಪಲ್ಲವಿ ಸೀತೆ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Loading...
Unable to load recommendations.
Follow Us