AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್

ಬಹುನಿರೀಕ್ಷಿತ 'ರಾಮಾಯಣ' ಟೀಸರ್ ಬಿಡುಗಡೆಯಾಗಿದೆ. ದೊಡ್ಡ ಬಜೆಟ್‌ನಿಂದಾಗಿ ಹೆಚ್ಚಿನ ನಿರೀಕ್ಷೆಗಳಿದ್ದರೂ, ನೆಟ್ಟಿಗರು ಟೀಸರ್‌ನಲ್ಲಿ ಎರಡು ಪ್ರಮುಖ ತಪ್ಪುಗಳನ್ನು ಗುರುತಿಸಿದ್ದಾರೆ. ಒಂದೇ ಹುಡುಗ ಎರಡು ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಮತ್ತು ಸೈನಿಕರು ಅಸಮಂಜಸವಾಗಿ ನಿಂತಿರುವುದು ಎಐ ಲೋಪಗಳೆಂದು ಶಂಕಿಸಲಾಗಿದೆ. ಈ ತಪ್ಪುಗಳು ನಿರ್ದೇಶಕ ನಿತೇಶ್ ತಿವಾರಿ ಟೀಕೆಗೆ ಗುರಿಯಾಗಲು ಕಾರಣವಾಗಿವೆ.

‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್
ರಾಮಾಯಣ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 03, 2026 | 7:08 AM

Share

ಬಹುನಿರೀಕ್ಷಿತ ‘ರಾಮಾಯಣ’ ಟೀಸರ್ (Ramayana Teaser) ಹನುಮ ಜಯಂತಿ ಪ್ರಯುಕ್ತ ಏಪ್ರಿಲ್ 2ರಂದು ರಿಲೀಸ್ ಆಯಿತು. ಸಿನಿಮಾದ ಬಜೆಟ್ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ಹೇಳಲಾಗಿದೆ. ಈ ಕಾರಣದಿಂದಲೇ ಸಿನಮಾದ ಟೀಸರ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನರು ಸಿನಿಮಾದಿಂದ ದೊಡ್ಡದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ, ಟೀಸರ್ ನೋಡಿದ ಬಳಿಕ ಸಾಕಷ್ಟು ಟೀಕೆ ಎದುರಾಗಿದೆ. ಟೀಸರ್​​​ನಲ್ಲಿರುವ ಎರಡು ದೊಡ್ಡ ತಪ್ಪನ್ನು ನೆಟ್ಟಿಗರು ಕಂಡು ಹಿಡಿದಿದ್ದಾರೆ.

ದೊಡ್ಡ ಬಜೆಟ್ ಸಿನಿಮಾ ಮಾಡಬೇಕು ಎಂದಾಗ ಅದಕ್ಕೆ ಅಷ್ಟೇ ಸಿದ್ಧತೆ ಬೇಕಾಗುತ್ತದೆ. ನಿರ್ದೇಶಕರು ಸಾಕಷ್ಟು ಮುಂದಾಲೋಚನೆ ಹೊಂದಿರಬೇಕಾಗುತ್ತದೆ. ಸಣ್ಣ ಸಣ್ಣ ವಿಷಯಗಳನ್ನು ಗಮನಿಸಬೇಕಾಗುತ್ತದೆ. ಇಲ್ಲವಾದಲ್ಲಿ ಅಲ್ಲಿಯೂ ಜನರು ತಪ್ಪು ಕಂಡು ಹಿಡಿಯುತ್ತಾರೆ. ಆದಿತ್ಯ ಧಾರ್ ಅವರ ‘ಧುರಂಧರ್ 2’ ಚಿತ್ರವನ್ನು ಜನರು ಹೊಗಳಿದ್ದರು. ಆದಿತ್ಯ ಧಾರ್ ಅವರ ಪೀಕ್ ಡೀಟೇಲಿಂಗ್ ಎಂದು ಬೆನ್ನು ತಟ್ಟಿದ್ದರು. ಆದರೆ, ಸಿನಿಮಾದಲ್ಲಿರುವ ತಪ್ಪುಗಳನ್ನು ಕೆಲವರು ಎತ್ತಿ ತೋರಿಸಿದ್ದರು. ಈಗ ‘ರಾಮಾಯಣ’ ಟೀಸರ್​ ಅಲ್ಲೇ ಕೆಲವು ತಪ್ಪು ಕಂಡು ಹಿಡಿದಿದ್ದು, ಇದಕ್ಕೆ ನಿರ್ದೇಶಕ ನಿತೇಶ್ ತಿವಾರಿ ಅವರು ಸಾಕಷ್ಟು ಟೀಕೆ ಎದುರಿಸಿದ್ದಾರೆ. ಇದನ್ನೂ ಓದಿ: ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು

ರಾಮ ಜನರ ಮಧ್ಯೆ ನಡೆದುಕೊಂಡು ಬರುವ ದೃಶ್ಯವಿದೆ. ಆಗ ಬಾಲಕನೋರ್ವ ನಮಸ್ಕರಿಸುತ್ತಾನೆ. ರಾಮ ಸ್ವಲ್ಪ ಮುಂದೆ ಹೋದರೆ ಇದೇ ಬಾಲಕ ರಾಮನಿಗೆ ಹೂವನ್ನು ಹಾಕುತ್ತಾ ಇರುತ್ತಾನೆ. ಇದು ದೊಡ್ಡ ತಪ್ಪುಗಳಲ್ಲಿ ಒಂದು. ಇದನ್ನು ಎಐ ಅಲ್ಲಿ ಮಾಡಿರಬಹುದು ಅಥವಾ ಆ ಬಾಲಕನ್ನನ್ನೇ ಮತ್ತೆ ಬಳಸಿಕೊಂಡಿರಬಹುದು ಎಂದು ಊಹಿಸಲಾಗಿದೆ.

ಇನ್ನು, ಮತ್ತೂ ಒಂದು ತಪ್ಪನ್ನು ಎತ್ತಿ ತೋರಿಸಲಾಗಿದೆ. ರಾಮ ಯುದ್ಧಕ್ಕೆ ಸಿದ್ಧನಾಗಿ ನಿಂತಿರುತ್ತಾನೆ. ಎದುರಿನವರ ಮೇಲೆ ಬಾಣ ಹೂಡಲು ರೆಡಿ ಆಗಿರುತ್ತಾನೆ. ಆದರೆ, ಆತನ ಸೈನಿಕರು ಮಾತ್ರ ಇನ್ಯಾವುದೋ ಕಡೆ ನೋಡುತ್ತಾ ನಿಂತಿದ್ದಾರೆ. ಇದು ಎಐನಿಂದ ಮಾಡಿದ ಫೋಟೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿ ಕಾಣಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?