Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

Ind Vs Pak World Cup: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ.

Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?
ರಮ್ಯಾ ದಿವ್ಯ ಸ್ಪಂದನಾ
Follow us
ಮದನ್​ ಕುಮಾರ್​
|

Updated on: Oct 15, 2023 | 7:47 AM

ವಿಶ್ವಕಪ್​ ಕದನದಲ್ಲಿ ಭಾರತ ವರ್ಸಸ್​ ಪಾಕಿಸ್ತಾನ (Ind Vs Pak) ಪಂದ್ಯ ಇದ್ದರೆ ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅಲರ್ಟ್​ ಆಗುತ್ತಾರೆ. ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಕೂಡ ಕ್ರಿಕೆಟ್​ಪ್ರಿಯೆ. ಶನಿವಾರ (ಅಕ್ಟೋಬರ್​ 14) ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್​ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯವನ್ನು ರಮ್ಯಾ (Ramya) ಅವರು ವೀಕ್ಷಿಸಿದ್ದಾರೆ. ಭಾರತ ಗೆಲ್ಲುತ್ತಿದ್ದಂತೆಯೇ ಎಲ್ಲರೂ ಸಂಭ್ರಮಿಸಿದ್ದಾರೆ. ರಮ್ಯಾ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೂ ಅವರು ಒಂದು ಬೇಸರವನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ. ಎಲ್ಲೆಂದರಲ್ಲಿ ಕಸ ಎಸೆದಿರುವುದನ್ನು ಅವರು ಖಂಡಿಸಿದ್ದಾರೆ. ಅವರ ಈ ಪೋಸ್ಟ್​ಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇದೊಂದು ಉತ್ತಮ ಪಂದ್ಯವಾಗಿತ್ತು. ನಾವು ಗೆದ್ದೆವು. ಎಂದಿನಂತೆ ಅಹಮದಾಬಾದ್​ ನಮಗೆ ನಿರಾಸೆ ಮಾಡಿಲ್ಲ. ಆಹಾರ ಚೆನ್ನಾಗಿತ್ತು. ಈ ವಿಡಿಯೋ ನೋಡಿ ನನಗೆ ನಿರಾಸೆ ಆಯಿತು. ಯಾಕೆ ಇಂಡಿಯಾ ಯಾಕೆ? ಎಲ್ಲಿದೆ ಸ್ವಚ್ಛತೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವು ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಆಗದೇ ಇರುವುದು ಬೇಸರದ ಸಂಗತಿ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?

ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದವರು ರಮ್ಯಾ. ಆದರೆ ಈಗ ಅವರು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಗೆಲುವು ಸಾಧಿಸಿತು. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇದೆ. ಅಲ್ಲದೇ, ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿರುವ ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ