AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ; ವಿಡಿಯೋ ವೈರಲ್

ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಬೆಂಗಳೂರಿನಲ್ಲಿ ನಾಯಿಗಳು ನಾಪತ್ತೆ ಆಗಿರುವುದನ್ನು ಅವರು ಖಂಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ರಮ್ಯಾ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ; ವಿಡಿಯೋ ವೈರಲ್
Ramya Divya Spandana
Malatesh Jaggin
| Edited By: |

Updated on:Apr 12, 2026 | 10:37 AM

Share

ಕಗ್ಗದಾಸಪುರದಲ್ಲಿ ಅಮಾನವೀಯವಾಗಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಆರೋಪ ಕೇಳಿಬಂದಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಅದರ ಬೆನ್ನಲ್ಲೇ, ಬೀದಿ ನಾಯಿಗಳ (Stray Dogs) ಮೇಲಿನ ಕ್ರೌರ್ಯ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ. ಇದರಲ್ಲಿ ನಟಿ ರಮ್ಯಾ ಕೂಡ ಭಾಗಿ ಆಗಿದ್ದಾರೆ. ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ರಮ್ಯಾ (Ramya Divya Spandana) ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು ಭಾವುಕರಾದರು.

‘ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು’ ಎಂದು ರಮ್ಯಾ ಅವರು ಪ್ರತಿಭಟನೆ ವೇಳೆ ಕಣ್ಣೀರು ಹಾಕಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಮ್ಯಾ ಕಣ್ಣೀರು ಹಾಕಿದ ವಿಡಿಯೋ:

‘ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿದ್ದರೆ ನಮಗೆ ತೋರಿಸಿ, ಇಲ್ಲದಿದ್ದರೆ ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಿ’ ಎಂದು ರಮ್ಯಾ ಆಗ್ರಹಿಸಿದರು. ಸುಮಾರು 20ಕ್ಕೂ ಹೆಚ್ಚು ನಾಯಿಗಳು ನಾಪತ್ತೆ ಆಗಿವೆ. Animal Birth Control ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಆಗ್ರಹ ಮಾಡಲಾಗಿದೆ. ಸಿ.ವಿ. ರಾಮನ್ ನಗರ ಅನಿಮಲ್ ಸ್ಕ್ವಾಡ್ ಮತ್ತು ಪ್ರಾಣಿ ಕಲ್ಯಾಣ ಹೋರಾಟಗಾರ್ತಿ ಪ್ರಿಯಾ ಚೆಟ್ಟಿ ರಾಜಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಏಪ್ರಿಲ್ 16ರಂದು ಮುಂದಿನ ವಿಚಾರಣೆ ಇದೆ.

ಇದನ್ನೂ ಓದಿ: ನಾಯಿ ಮೇಲೆ ಕಾರು ಹತ್ತಿಸಿದ ಪ್ರಕರಣ: ಮೃತ ಶ್ವಾನ ಲಾರಾ ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ನಟಿ ರಮ್ಯಾ

ರಮ್ಯಾ ಅವರು ಪ್ರಾಣಿಗಳ ಬಗ್ಗೆ ಕಾಳಜಿ ಹೊಂದಿದ್ದಾರೆ. ಅವರು ನಾಯಿಗಳ ರಕ್ಷಣೆ ಬಗ್ಗೆ ಧ್ವನಿ ಎತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅವರು ಇಂಥ ಘಟನೆಗಳು ನಡೆದಾಗಿ ಮಾಧ್ಯಮಗಳ ಎದುರು ಬಂದು ಮಾತನಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಕೂಡ ಅವರು ಇಂಥ ಕೃತ್ಯಗಳನ್ನು ಖಂಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:36 am, Sun, 12 April 26

Follow Us