ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ, ರೀಟ್ವೀಟ್ ಮಾಡಿದ ನಟಿ ರಮ್ಯಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ದರ್ಶನ್​ಗೆ ಈ ಪ್ರಕರಣದಲ್ಲಿ ಕಾನೂನು ರೀತ್ಯ ಜೀವಾವಧಿ ಅಥವಾ ಮರಣ ದಂಡನ ಶಿಕ್ಷೆ ಆಗಲಿದೆ, ತಪ್ಪು ಮಾಡಿದ ವ್ಯಕ್ತಿಗೆ ಕಾನೂನು ರೀತಿ ಶಿಕ್ಷೆ ಆಗಲೇ ಬೇಕು ಎಂದು ಮಾಡಲಾಗಿರುವ ಟ್ವೀಟ್ ಒಂದನ್ನು ನಟಿ ರಮ್ಯಾ ರೀಟ್ವೀಟ್ ಮಾಡುವ ಮೂಲಕ ಸಂತ್ರಸ್ತ ವ್ಯಕ್ತಿಯ ಕುಟುಂಬದ ಪರ ನಿಂತಿದ್ದಾರೆ.

ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ, ರೀಟ್ವೀಟ್ ಮಾಡಿದ ನಟಿ ರಮ್ಯಾ
Follow us
|

Updated on:Jun 11, 2024 | 1:47 PM

ರೇಣುಕಾ ಸ್ವಾಮಿ (Renuka Swamy) ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan Thoogudeepa) ಅನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ವಿಚಾರಣೆ ನಡೆಯುತ್ತಿದ್ದು ಇಂದೇ ದರ್ಶನ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದೆ. ದರ್ಶನ್ ಮೇಲೆ ಯಾವ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂಬುದರ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಸೆಕ್ಷನ್ 302 (ಕೊಲೆ), 369 (ಅಪಹರಣ) ಇನ್ನೂ ಕೆಲವು ಸೆಕ್ಷನ್​ಗಳನ್ನು ಹೇರುವುದು ಖಾಯಂ ಎನ್ನಲಾಗುತ್ತಿದೆ.

ಇದರ ನಡುವೆ ನಟಿ ರಮ್ಯಾ, ದರ್ಶನ್​ಗೆ ಯಾವ ರೀತಿಯ ಶಿಕ್ಷೆ ಆಗಲಿದೆ ಎಂಬ ಬಗ್ಗೆ ಮಾಡಲಾಗಿರುವ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ‘ದರ್ಶನ್​ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್​ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಕೆಲವು ಬಾರಿ ಖ್ಯಾತೆ ತೆರೆದಿದ್ದರು. ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣ ನಡೆದಾಗ ರಮ್ಯಾ, ಸ್ಟಾರ್ ನಟರು ತಮ್ಮ ಅಭಿಮಾನಿಗಳಿಗೆ ಬುದ್ಧಿವಾದ ಹೇಳಬೇಕು ಎಂದಿದ್ದರು. ಅವರ ಸಂದೇಶ ದರ್ಶನ್ ಅಭಿಮಾನಿಗಳ ಅತಿರೇಕದ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಂತಿತ್ತು. ಈ ಕಾರಣಕ್ಕೆ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಟ್ರೋಲ್ ಮಾಡಿದ್ದರು.

ರಮ್ಯಾ ಹಾಗೂ ದರ್ಶನ್ ‘ದತ್ತ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾ ದೊಡ್ಡ ಹಿಟ್ ಆಗಿತ್ತು. ಆದರೆ ದರ್ಶನ್ ಹಾಗೂ ರಮ್ಯಾ ಒಳ್ಳೆಯ ಸ್ನೇಹಿತರೇನೂ ಆಗಿರಲಿಲ್ಲ. ದರ್ಶನ್​ರ ಅಭಿಮಾನಿಗಳ ಅತಿರೇಕದ ವರ್ತನೆಯನ್ನು, ಆ ಅತಿರೇಕದ ವರ್ತನೆಗೆ ದರ್ಶನ್ ನೀಡುವ ಬೆಂಬಲವನ್ನು ಪರೋಕ್ಷವಾಗಿ ಟೀಕಿಸಿದ್ದರು ನಟಿ ರಮ್ಯಾ. ಈಗ ದರ್ಶನ್ ಮೇಲೆ ಕೊಲೆ ಆರೋಪ ಬಂದಿರುವ ಹಿನ್ನೆಲೆಯಲ್ಲಿ ದರ್ಶನ್​ಗೆ ತಪ್ಪಿಗೆ ಶಿಕ್ಷೆಯಾಗಲಿ ಎಂಬ ಸಂದೇಶವನ್ನು ರೀಟ್ವೀಟ್ ಮಾಡಿ, ಸಂತ್ರಸ್ತನ ಕುಟುಂಬದ ಪರವಾಗಿ ನಿಂತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 11 June 24

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ