ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ

ರಜನಿಕಾಂತ್ ಜೊತೆ ಇರೋ ಸೆಲ್ಫಿ ಹಂಚಿಕೊಂಡಿದ್ದರು ರಾಣಾ ದಗ್ಗುಬಾಟಿ. ಇದನ್ನು ನೋಡಿದ ಫ್ಯಾನ್ಸ್ ಇದು ಹೈದರಾಬಾದ್​ನ ಅನುಪಮಾ ಸ್ಟುಡಿಯೋ ಎಂದು ಭಾವಿಸಿದರು. ಹೀಗಾಗಿ ಅಭಿಮಾನಿಗಳು ದಂಡು ಅಲ್ಲಿಗೆ ತೆರಳಿತು. ರಜನಿ ಹಾಗೂ ರಾಣಾ ಜೊತೆ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳಬಹುದು ಎಂಬುದು ಅಭಿಮಾನಿಗಳ ಆಲೋಚನೆ ಆಗಿತ್ತು. ಆದರೆ, ಅಲ್ಲಿ ಅನೇಕರನ್ನು ಒಳಗೆ ಬಿಟ್ಟಿಲ್ಲ.

ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ
ರಜನಿ-ರಾಣಾ
Follow us
ರಾಜೇಶ್ ದುಗ್ಗುಮನೆ
|

Updated on:Mar 06, 2024 | 7:38 AM

ನಟ ರಜನಿಕಾಂತ್ (Rajinikanth) ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಕಳೆದ ವರ್ಷ ರಿಲೀಸ್ ಆದ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಜನಿಕಾಂತ್ ಅವರ ಪವರ್ ಹೆಚ್ಚಿದೆ. ಸದ್ಯ ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಜೊತೆ ರಾಣಾ ದಗ್ಗುಬಾಟಿ ಕೂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ರಾಣಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ.

ರಜನಿಕಾಂತ್ ಜೊತೆ ಇರೋ ಸೆಲ್ಫಿ ಹಂಚಿಕೊಂಡಿದ್ದರು ರಾಣಾ ದಗ್ಗುಬಾಟಿ. ಇದನ್ನು ನೋಡಿದ ಫ್ಯಾನ್ಸ್ ಇದು ಹೈದರಾಬಾದ್​ನ ಅನುಪಮಾ ಸ್ಟುಡಿಯೋ ಎಂದು ಭಾವಿಸಿದರು. ಹೀಗಾಗಿ ಅಭಿಮಾನಿಗಳು ದಂಡು ಅಲ್ಲಿಗೆ ತೆರಳಿತು. ರಜನಿ ಹಾಗೂ ರಾಣಾ ಜೊತೆ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳಬಹುದು ಎಂಬುದು ಅಭಿಮಾನಿಗಳ ಆಲೋಚನೆ ಆಗಿತ್ತು. ಆದರೆ, ಅಲ್ಲಿ ಅನೇಕರನ್ನು ಒಳಗೆ ಬಿಟ್ಟಿಲ್ಲ. ಇದರ ಜೊತೆಗೆ ರಜನಿಕಾಂತ್ ಅಲ್ಲಿಲ್ಲ ಎನ್ನುವ ವಿಚಾರವೂ ಗೊತ್ತಾಗಿದೆ.

‘ಜೈ ಭೀಮ್’ ಚಿತ್ರದ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ನಿರ್ದೇಶಕ ಟಿಜಿ ಜ್ಞಾನವೇಲ್​. ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ರಾಣಾ ಭಾಗದ ಶೂಟಿಂಗ್​ನ ಪೂರ್ಣಗೊಳಿಸಿದ್ದಾರೆ. ಇದರ ಜೊತೆಗೆ ಆ ಸಂದರ್ಭದಲ್ಲಿ ರಜನಿಕಾಂತ್ ಅವರು ಅಲ್ಲಿ ಇರಲೇ ಇಲ್ಲ. ನಿಜ ವಿಚಾರ ತಿಳಿದು ಫ್ಯಾನ್ಸ್ ಬೇಸರಗೊಂಡಿದ್ದಾರೆ.

ರಾಣಾ ಅವರು ‘ವೆಟ್ಟೈಯನ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ‘ಬಾಹುಬಲಿ’ ಚಿತ್ರದಲ್ಲಿ ಖಡಕ್ ವಿಲನ್ ಪಾತ್ರ ಮಾಡಿದ್ದರು. ಪವನ್ ಕಲ್ಯಾಣ್ ಎದುರು ಕೂಡ ತೊಡೆ ತಟ್ಟಿದ್ದರು. ರಜನಿಕಾಂತ್ ಎದುರು ಅವರು ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Viral Video: ರಜನಿಕಾಂತ್ ಅಭಿಯಾನದ ಮುತ್ತು ಚಿತ್ರದ ʼಒರುವನ್ ಒರುವನ್ʼ ಹಾಡನ್ನು ಹಾಡಿದ 77ರ ವಿದೇಶಿ ವೃದ್ಧ 

ರಜನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ವರ್ಷ ಅವರ ನಟನೆಯ ‘ಲಾಲ್ ಸಲಾಮ್’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲೇ ಇಲ್ಲ. ಈ ಚಿತ್ರದಲ್ಲಿ ರಜನಿಕಾಂತ್ ಅವರದ್ದು ಅತಿಥಿ ಪಾತ್ರ ಆಗಿತ್ತು. 40 ನಿಮಿಷಗಳ ಪಾತ್ರಕ್ಕೆ ಇವರು 40 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Wed, 6 March 24

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ