ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’

Rana Daggubati: ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ.

ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’
Rishab Shetty

Updated on: Feb 17, 2026 | 6:06 PM

ರಿಷಬ್ ಶೆಟ್ಟಿ (Rishab Shetty) ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡಿದ್ದಾರೆ. ‘ಕಾಂತಾರ 1’ ಸಿನಿಮಾದ ಬಳಿಕ ಇದೀಗ ರಿಷಬ್ ತಮ್ಮ ಹೊಸ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಳ್ಳುವ ಸಮಯ ಬಂದಾಗಿದೆ. ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ.

‘ಬಾಹುಬಲಿ’ ಸಿನಿಮಾನಲ್ಲಿ ಬಹಳ ಪವರ್​​ಫುಲ್ ಆಗಿರುವ ಪ್ರತಿ ನಾಯಕ ಬಲ್ಲಾಳದೇವನ ಪಾತ್ರದಲ್ಲಿ ನಟಿಸಿದ್ದ ರಾಣಾ ದಗ್ಗುಬಾಟಿ ಅವರು ರಿಷಬ್ ಶೆಟ್ಟಿ ಜೊತೆಗೆ ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದಾರೆ. ಆದರೆ ರಾಣಾ ದಗ್ಗುಬಾಟಿ ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಇನ್ನೂ ಖಾತ್ರಿ ಆಗಿಲ್ಲ. ‘ಜೈ ಹನುಮಾನ್’ ಸಿನಿಮಾನಲ್ಲಿ ರಾಣಾ ರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ, ಇನ್ನು ಕೆಲವು ವರದಿಗಳಲ್ಲಿ ರಾಣಾ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ರಾಣಾ ದಗ್ಗುಬಾಟಿ ಯಾವ ರೀತಿಯ ಪಾತ್ರಕ್ಕಾದರೂ ಫಿಟ್ ಆಗುವ ನಟ. ಹೀರೋ ನಟಿಸಬೇಕು ಎಂಬ ಗಡಿ ಹಾಕಿಕೊಳ್ಳದ ಅವರು ವಿಲನ್ ಆಗಿ, ಪ್ರಮುಖ ಪೋಷಕ ಪಾತ್ರದಲ್ಲಿ, ಅತಿಥಿ ಪಾತ್ರಗಳಲ್ಲಿ ಸಹ ನಟಿಸಿದ್ದಾರೆ. ಇದೀಗ ರಿಷಬ್ ಶೆಟ್ಟಿ ಜೊತೆಗೆ ನಟಿಸಲು ಎಸ್ ಎಂದಿದ್ದಾರೆ. ಅಂದಹಾಗೆ ಈ ಹಿಂದೆ ರಾಣಾ ದಗ್ಗುಬಾಟಿ ಅವರು ತಮ್ಮ ಟಾಕ್ ಶೋ ಒಂದಕ್ಕಾಗಿ ರಿಷಬ್ ಅವರ ಊರಾದ ಕೆರಾಡಿಗೆ ಬಂದು ರಿಷಬ್ ಅವರ ಸಂದರ್ಶನ ಸಹ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ. ಹಾಗಾಗಿ ಇಬ್ಬರೂ ಒಟ್ಟಿಗೆ ನಟಿಸುವುದು ಇಬ್ಬರಿಗೂ ಹೆಚ್ಚು ಕಂಫರ್ಟ್ ಆಗಿರಲಿದೆ.

ಇದನ್ನೂ ಓದಿ:ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

‘ಜೈ ಹನುಮಾನ್’ ಸಿನಿಮಾ ಹೆಸರೇ ಸೂಚಿಸುತ್ತಿರುವಂತೆ ಹನುಮಂತ ದೇವರ ಕುರಿತಾದ ಕತೆಯನ್ನು ಹೊಂದಿರಲಿದೆ. ಈ ಹಿಂದೆ ‘ಹನುಮ್ಯಾನ್’ ಹೆಸರಿನ ಫ್ಯಾಂಟಸಿ ಸೂಪರ್ ಹೀರೋ ಮಾದರಿಯ ಸಿನಿಮಾ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು ಟಿ-ಸೀರೀಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಫೆಬ್ರವರಿ 22 ರಂದು ಸಿನಿಮಾದ ಮುಹೂರ್ತ ಹಂಪಿಯಲ್ಲಿ ಬಲು ಅದ್ಧೂರಿಯಾಗಿ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us