AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR, ಬಾಹುಬಲಿ ಕೂಡ ಮಾಡಿರದ ಸಾಧನೆಯನ್ನು ‘ಪ್ರಾಜೆಕ್ಟ್​ ಕೆ’ ಸಿನಿಮಾ ಮಾಡಲಿದೆ’: ಭವಿಷ್ಯ ನುಡಿದ ರಾಣಾ ದಗ್ಗುಬಾಟಿ

Rana Daggubati: ಪ್ರಭಾಸ್​ ಅವರು ‘ಪ್ರಾಜೆಕ್ಟ್​ ಕೆ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಕುರಿತು ರಾಣಾ ದಗ್ಗುಬಾಟಿ ಅವರು ಮಾತನಾಡಿದ್ದಾರೆ. ಈ ಸಿನಿಮಾಗಾಗಿ ಇಡೀ ತೆಲುಗು ಚಿತ್ರರಂಗ ಎಗ್ಸೈಟ್​ ಆಗಿದೆ ಎಂದು ಅವರು ಹೇಳಿದ್ದಾರೆ.

‘RRR, ಬಾಹುಬಲಿ ಕೂಡ ಮಾಡಿರದ ಸಾಧನೆಯನ್ನು ‘ಪ್ರಾಜೆಕ್ಟ್​ ಕೆ’ ಸಿನಿಮಾ ಮಾಡಲಿದೆ’: ಭವಿಷ್ಯ ನುಡಿದ ರಾಣಾ ದಗ್ಗುಬಾಟಿ
ಪ್ರಾಜೆಕ್ಟ್​ ಕೆ
ಮದನ್​ ಕುಮಾರ್​
|

Updated on: Jun 02, 2023 | 2:38 PM

Share

ಭಾರತೀಯ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲೂ ತೆಲುಗು ಚಿತ್ರಗಳು ಆಸ್ಕರ್​ ಪ್ರಶಸ್ತಿ ಪಡೆಯುವ ಹಂತಕ್ಕೆ ಬೆಳೆದಿವೆ. ಹಾಗಾಗಿ ಮುಂಬರುವ ಚಿತ್ರಗಳ ಮೇಲೆ ಹೆಚ್ಚಿನ ನಿರೀಕ್ಷೆ ಸೃಷ್ಟಿಯಾಗಿದೆ. ಪ್ರಭಾಸ್​ (Prabhas) ಅವರು ‘ಪ್ರಾಜೆಕ್ಟ್​ ಕೆ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಕುರಿತು ನಟ ರಾಣಾ ದಗ್ಗುಬಾಟಿ ಅವರು ಮಾತನಾಡಿದ್ದಾರೆ. ಈ ಸಿನಿಮಾಗಾಗಿ ಇಡೀ ತೆಲುಗು ಚಿತ್ರರಂಗ ಎಗ್ಸೈಟ್​ ಆಗಿದೆ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ ಟುಡೇ ಕಾನ್​ಕ್ಲೇವ್​ ಸೌತ್​ 2023’ ವೇದಿಕೆಯಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಾಣಾ ದಗ್ಗುಬಾಟಿ (Rana Daggubati) ಅವರ ಮಾತುಗಳನ್ನು ಕೇಳಿದ ಬಳಿಕ ‘ಪ್ರಾಜೆಕ್ಟ್​ ಕೆ’ ಸಿನಿಮಾ (Project K Movie) ಬಗ್ಗೆ ನಿರೀಕ್ಷೆ ಹೆಚ್ಚುವಂತಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ರಾಣಾ ದಗ್ಗುಬಾಟಿ ಹೇಳಿದ್ದೇನು?

‘ನಾವು ಸಂಪೂರ್ಣವಾಗಿ ಪ್ರತಿಯೊಬ್ಬರ ಸಿನಿಮಾವನ್ನು ಸೆಲೆಬ್ರೇಟ್​ ಮಾಡುತ್ತೇವೆ. ಪ್ರಾಜೆಕ್ಟ್​ ಕೆ ಸಿನಿಮಾಗೆ ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಈ ಸಿನಿಮಾಗಾಗಿ ನಾವೆಲ್ಲರೂ ಕಾಯುತ್ತಿದ್ದೇವೆ. ಆರ್​ಆರ್​ಆರ್​ ಮತ್ತು ಬಾಹುಬಲಿ ಸಿನಿಮಾಗಳು ಮೀರಲು ಸಾಧ್ಯವಾಗದಂತಹ ಗಡಿಗಳನ್ನು ಪ್ರಾಜೆಕ್ಟ್​ ಕೆ ಚಿತ್ರ ಮೀರಲಿದೆ. ಅದು ಜಾಗತಿಕ ಮಟ್ಟದಲ್ಲಿ ಹಿಟ್​ ಆಗಲಿದೆ’ ಎಂದು ರಾಣಾ ದಗ್ಗುಬಾಟಿ ಹೇಳಿದ್ದಾರೆ. ತೆಲುಗಿನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ವೈಜಯಂತಿ ಮೂವೀಸ್​’ ಮೂಲಕ ‘ಪ್ರಾಜೆಕ್ಟ್​ ಕೆ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿದೆ.

ಇದನ್ನೂ ಓದಿ: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಕೆಜಿಎಫ್​’ ಚಿತ್ರವನ್ನು ಹಾಡಿ ಹೊಗಳಿದ ರಾಣಾ ದಗ್ಗುಬಾಟಿ

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಸಿನಿಮಾ ಕೆಲಸಗಳಲ್ಲಿ ಚುರುಕಾಗಿದ್ದಾರೆ. ‘ಬಾಹುಬಲಿ’ ಸಿನಿಮಾಗೋಸ್ಕರ ಹಲವು ವರ್ಷ ಮೀಸಲಿಟ್ಟಿದ್ದ ಅವರು ಆ ನಂತರ ಸಾಲು ಸಾಲು ಸಿನಿಮಾ ಒಪ್ಪಿಕೊಳ್ಳಲು ಆರಂಭಿಸಿದರು. ಈಗ ‘ಸಲಾರ್​’, ‘ಆದಿಪುರುಷ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಇತ್ತೀಚೆಗೆ ‘ಪ್ರಾಜೆಕ್ಟ್​ ಕೆ’ ಚಿತ್ರತಂಡದವರು ಹೊಸದೊಂದು ವಿಡಿಯೋ ಹಂಚಿಕೊಳ್ಳುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸುವ ಕೆಲಸ ಮಾಡಿದ್ದರು. ಸಿನಿಮಾದಲ್ಲಿನ ಪ್ರತಿ ಪಾತ್ರದ ಕಾಸ್ಟ್ಯೂಮ್​ ಕೂಡ ಡಿಫರೆಂಟ್​​ ಆಗಿರಲಿದೆ. ಅದನ್ನು ತೋರಿಸುವ ಸಲುವಾಗಿ ಚಿಕ್ಕ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ರಾಣಾ ದಗ್ಗುಬಾಟಿ ಆಫೀಸ್​ನಲ್ಲಿ ಅಪ್ಪು​ ಪುತ್ಥಳಿ; ಫೋಟೋ ತೋರಿಸಿ ಹೆಮ್ಮೆಯಿಂದ ಹೇಳಿಕೊಂಡ ನಟ

ಇದು ಸೈನ್ಸ್​ ಫಿಕ್ಷನ್​ ಶೈಲಿಯ ಸಿನಿಮಾ ಆಗಿದ್ದು, ಅದಕ್ಕೆ ತಕ್ಕಂತೆಯೇ ಕಾಸ್ಟ್ಯೂಮ್​ ಡಿಸೈನ್​ ಮಾಡಲಾಗಿದೆ. ಸಿನಿಮಾದಲ್ಲಿ ಬರುವ ರೇಡರ್ಸ್​ ಎಂಬ ಪಾತ್ರಗಳಿಗೆ ಹೇಗೆ ವಸ್ತ್ರ ವಿನ್ಯಾಸ ಮಾಡಲಾಗಿದೆ ಎಂಬುದನ್ನು ತಿಳಿಸುವ ಸಲುವಾಗಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೈನ್ಸ್​ ಫಿಕ್ಷನ್​ ಸಿನಿಮಾಗಳನ್ನು ಮಾಡುವಲ್ಲಿ ಹಾಲಿವುಡ್​ ಮಂದಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ. ಈಗ ‘ಪ್ರಾಜೆಕ್ಟ್​ ಕೆ’ ಚಿತ್ರತಂಡದವರು ಹಾಲಿವುಡ್​ಗೂ ಪೈಪೋಟಿ ನೀಡಲು ಸಜ್ಜಾದಂತಿದೆ. ಸದ್ಯಕ್ಕೆ ಹೊರಬಂದಿರುವುದು ಚಿಕ್ಕ ಮೇಕಿಂಗ್​ ವಿಡಿಯೋ ಮಾತ್ರ. ಇನ್ನೂ ಹಲವು ವಿಡಿಯೋಗಳನ್ನು ರಿಲೀಸ್​ ಮಾಡಲಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More