AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂದೇ ಬಿಡ್ತು ರಶ್ಮಿಕಾ-ವಿಜಯ್ ದೇವರಕೊಂಡ ‘ರಣಬಾಲಿ’ ಸಿನಿಮಾ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ನಟಿಸಿರುವ ‘ರಣಬಾಲಿ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಯ್ತು. ಬೆಳಿಗ್ಗೆ ಬಿಡುಗಡೆ ಆದ ಸಿನಿಮಾಕ್ಕೆ ಸಂಜೆಯೇ ಸಕ್ಸಸ್ ಪಾರ್ಟಿಯನ್ನು ಚಿತ್ರತಂಡ ಮಾಡಿತ್ತು. ಸ್ವಾತಂತ್ರ್ಯ ಪೂರ್ವದ ಕತೆ ಹೊಂದಿರುವ ಈ ಸಿನಿಮಾನಲ್ಲಿ ಹಾಲಿವುಡ್ ನಟರೂ ಸಹ ನಟಿಸಿದ್ದರು. ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರತಿಕ್ರಿಯೆ ಪಡೆದುಕೊಂಡ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ.

ಒಟಿಟಿಗೆ ಬಂದೇ ಬಿಡ್ತು ರಶ್ಮಿಕಾ-ವಿಜಯ್ ದೇವರಕೊಂಡ ‘ರಣಬಾಲಿ’ ಸಿನಿಮಾ
Ranabaali Movie
ಮಂಜುನಾಥ ಸಿ.
|

Updated on: Nov 09, 2026 | 4:12 PM

Share

ಮುಖ್ಯಾಂಶಗಳು

  • ನೆಟ್​​ಫ್ಲಿಕ್ಸ್​​ನಲ್ಲಿ ರಿಲೀಸ್ ಆಗುತ್ತಿದೆ ‘ರಣಬಾಲಿ’
  • ‘ರಣಬಾಲಿ’ ನವೆಂಬರ್ 11 ರಂದು ಒಟಿಟಿಗೆ ರಿಲೀಸ್ ಆಗುತ್ತಿದೆ
  • ‘ರಣಬಾಲಿ’ ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದೆ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ನಟಿಸಿರುವ ‘ರಣಬಾಲಿ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಯ್ತು. ಬೆಳಿಗ್ಗೆ ಬಿಡುಗಡೆ ಆದ ಸಿನಿಮಾಕ್ಕೆ ಸಂಜೆಯೇ ಸಕ್ಸಸ್ ಪಾರ್ಟಿಯನ್ನು ಚಿತ್ರತಂಡ ಮಾಡಿತ್ತು. ಸ್ವಾತಂತ್ರ್ಯ ಪೂರ್ವದ ಕತೆ ಹೊಂದಿರುವ ಈ ಸಿನಿಮಾನಲ್ಲಿ ಹಾಲಿವುಡ್ ನಟರೂ ಸಹ ನಟಿಸಿದ್ದರು. ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರತಿಕ್ರಿಯೆ ಪಡೆದುಕೊಂಡ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ.

ವಿಜಯ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಣಾಬಾಲಿ’ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದ್ದು, ಸಿನಿಮಾ ಅನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ. ಅಕ್ಟೋಬರ್‌ 16ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಇನ್ನು ಮೂರು ದಿನಗಳಲ್ಲಿ ಅಂದರೆ ನವೆಂಬರ್ 11 ರಂದು ಒಟಿಟಿಗೆ ಕಾಲಿಡಲಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಈ ಸಿನಿಮಾ ಅನ್ನು ತೆಲುಗಿನ ಜೊತೆಗೆ ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿಯೂ ವೀಕ್ಷಣೆ ಮಾಡಬಹುದಾಗಿದೆ.

ಈ ಕುರಿತು ಅಧಿಕೃತವಾಗಿ ಪೋಸ್ಟ್ ಹಂಚಿಕೊಂಡಿರುವ ನೆಟ್​​ಫ್ಲಿಕ್ಸ್​​ ‘ಸಿಂಗನಮಲ ಬೊಬ್ಬಲಿ ರಾಣಾಬಾಲಿ ಒಸ್ತುನ್ನಾಡು’ ಎಂದು ಬರೆಯಲಾಗಿದೆ. ಬ್ರಿಟಿಷ್‌ ವಸಾಹತುಶಾಹಿ ಆಳ್ವಿಕೆಯ ಕಾಲದ 19 ನೇ ಶತಮಾನದ ರಾಯಲಸೀಮೆಯ ಹಿನ್ನೆಲೆಯಲ್ಲಿ ಸಾಗುವ ‘ರಾಣಾಬಾಲಿ’ ಚಿತ್ರವು, ವಿಚಿತ್ರ ಪರಿಸ್ಥಿತಿಗಳಲ್ಲಿ ಜನಿಸಿ ಮಹೋದ್ದೇಶವನ್ನು ಪೂರೈಸಲು ಹುಟ್ಟಿದ ಸಿಂಗನಮಲ ಬೊಬ್ಬಲಿ ರಾಣಾಬಾಲಿ ಎಂಬಾತನ ಕತೆಯನ್ನು ಹೇಳುತ್ತದೆ. ರಾಯಲಸೀಮೆ ಭಾಗದಲ್ಲಿ ಜನರನ್ನು ಹುಳಗಳಂತೆ ಭಾವಿಸುವ ಬ್ರಿಟೀಷ್ ಅಧಿಕಾರಿಯ ವಿರುದ್ಧ ಸಶಸ್ತ್ರ ಹೋರಾಟ ಮಾಡುವ ರಣಬಾಲಿಯ ಕತೆಯನ್ನು ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ:ವಿಜಯ್ ಬಗ್ಗೆ ಟೀಕೆ ಮಾಡಿದವರಿಗೆ ನಟಿ ರಶ್ಮಿಕಾ ಮಂದಣ್ಣ ಖಡಕ್ ತಿರುಗೇಟು

‘ರಣಬಾಲಿ’ ಸಿನಿಮಾನಲ್ಲಿ ವಿಜಯ್ ದೇವರಕೊಂಡ ನಾಯಕ, ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಅನ್ನು ರಾಹುಲ್ ಸಾಂಕೃತ್ಯಾಯನ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದರು. ಸಿನಿಮಾ ಅನ್ನು ಭಾರಿ ಅದ್ಧೂರಿಯಾಗಿ ತೆರೆಗೆ ತರಲಾಗಿತ್ತು. ಆದರೆ ಸಿನಿಮಾ ನಿರೀಕ್ಷಿತ ಪ್ರದರ್ಶನವನ್ನು ಚಿತ್ರಮಂದಿರಗಳಲ್ಲಿ ಕಂಡಿರಲಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು