AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋ ಮಾಂಸ ತಿನ್ನುವವರು ರಾಮನ ಪಾತ್ರ ಮಾಡಿದ್ದು ಎಷ್ಟು ಸರಿ? ಪ್ರಶ್ನೆ ಮಾಡಿದ ನೆಟ್ಟಿಗರು

ರಾಮಾಯಣ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯಿಸುತ್ತಿದ್ದಾರೆ. ರಣಬೀರ್ ಅವರ ಆಹಾರದ ಆದ್ಯತೆಗಳ ಕುರಿತ ಹಳೆಯ ವೀಡಿಯೋ ವೈರಲ್ ಆಗಿದೆ. ಅವರು ರಾಮನ ಪಾತ್ರಕ್ಕೆ ಸೂಕ್ತರಲ್ಲ ಎಂಬ ಅಭಿಪ್ರಾಯವಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ರಣಬೀರ್ ನಾನ್-ವೆಜ್ ಮತ್ತು ಮದ್ಯ ಸೇವನೆಯನ್ನು ತ್ಯಜಿಸಿದ್ದಾರೆ ಎನ್ನಲಾಗಿದೆ. 2026ರಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಗೋ ಮಾಂಸ ತಿನ್ನುವವರು ರಾಮನ ಪಾತ್ರ ಮಾಡಿದ್ದು ಎಷ್ಟು ಸರಿ? ಪ್ರಶ್ನೆ ಮಾಡಿದ ನೆಟ್ಟಿಗರು
ರಾಮಾಯಣ ಸಿನಿಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 08, 2025 | 8:09 AM

Share

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ, ಮೊದಲಾದವರು ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2026ರ ದೀಪಾವಳಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಯಶ್ ಅವರು ರಾವಣನ ಪಾತ್ರಕ್ಕೆ ಹೆಚ್ಚು ಸೂಕ್ತ ಎಂದು ಅನೇಕರು ಹೇಳಿದ್ದಾರೆ. ಆದರೆ, ರಾಮನ ಪಾತ್ರಕ್ಕೆ ರಣಬೀರ್ ಸೂಕ್ತ ಅಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈಗ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ.

ರಣಬೀರ್ ಕಪೂರ್ ಅವರು ಸದಾ ವಿವಾದಿಂದ ದೂರ ಇರಲು ಪ್ರಯತ್ನಿಸುತ್ತಾರೆ. ಆದಾಗ್ಯೂ ಕೆಲವೊಮ್ಮೆ ವಿವಾದಗಳು ಅವರನ್ನು ಹುಡುಕಿ ಬರುತ್ತವೆ. ಈಗ ‘ರಾಮಾಯಣ’ ಸಿನಿಮಾ ಸಂದರ್ಭದಲ್ಲಿ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಇದರಲ್ಲಿ ರಣಬೀರ್ ಅವರು ತಮ್ಮ ಆಹಾರದ ಬಗ್ಗೆ, ತಮ್ಮಿಷ್ಟದ ಫುಡ್ ಬಗ್ಗೆ ವಿವರಣೆ ನೀಡಿದ್ದರು.

‘ನಾನು ಬೀಪ್​ನ ದೊಡ್ಡ ಅಭಿಮಾನಿ’ ಎಂದು ರಣಬೀರ್ ಕಪೂರ್ ಅವರು ಹೇಳಿಕೊಂಡಿದ್ದರು. ಇದಕ್ಕೆ ಕೆಲವರ ಅಪಸ್ವರ ತೆಗೆದಿದ್ದಾರೆ. ಈ ಮೊದಲು ಕಂಗನಾ ರಣಾವತ್ ಕೂಡ ಈ ವಿಚಾರವನ್ನು ವಿರೋಧಿಸಿದ್ದರು. ಆದರೆ, ರಣಬೀರ್ ಅಭಿಮಾನಿಗಳು ನೆಚ್ಚಿನ ನಟನ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ.

ಇದನ್ನೂ ಓದಿ
Image
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ
Image
PHOTOS: ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್
Image
ರಿಲೀಸ್​ಗೆ ಒಂದು ತಿಂಗಳಿರುವಾಗ ಶೂಟ್ ಮುಗಿಸಿದ ‘ವಾರ್ 2’
Image
‘ನನಗೆ ಗಾಯತ್ರಿ ಮಂತ್ರ, ಹನುಮಾನ್ ಚಾಲೀಸ್ ಕೇಳೋದು ಇಷ್ಟ’; ಮುಸ್ಲಿಂ ನಟಿ

ಇದನ್ನೂ ಓದಿ: ಗೋಮಾಂಸ ತಿನ್ನುವ ರಣಬೀರ್ ಕಪೂರ್​ಗೆ ರಾಮನ ಪಾತ್ರ: ಶುರುವಾಯ್ತು ಟ್ರೋಲ್

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟ್​ಗಾಗಿ ನಾನ್​ ವೆಜ್ ಸೇವನೆ ತ್ಯಜಿಸಿದ್ದಾರೆ ಎಂಬ ವರದಿ ಕೂಡ ಇದೆ. ಅಲ್ಲದೆ, ಮದ್ಯ ಸೇವನೆ ಕೂಡ ಅವರು ಸಂಪೂರ್ಣವಾಗಿ ತ್ಯಜಿಸಿದ್ದಾರಂತೆ. ದೊಡ್ಡ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಜೆಟ್ ಸಾವಿರ ಕೋಟಿ ರೂಪಾಯಿ ಎನ್ನಲಾಗುತ್ತಿದೆ. ಎರಡೂ ಪಾರ್ಟ್​ನ ಶೂಟ್ ಒಟ್ಟಿಗೆ ನಡೆಯುತ್ತಿದೆ. 2026ರಲ್ಲಿ ಸಿನಿಮಾದ ಮೊದಲ ಭಾಗವು ರಿಲೀಸ್ ಆದರೆ, ಎರಡನೇ ಭಾಗವು 2027ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಇದಲ್ಲದೆ, ರಣಬೀರ್ ಕಪೂರ್ ಅವರು ‘ಲವ್ ಆ್ಯಂಡ್ ವಾರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ. ಸಂಜಯ್ ಲೀಲಾ ಬನ್ಸಾಲಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:08 am, Tue, 8 July 25

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ