AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ದಾಖಲೆ ಮುರಿದ ‘ರಾಮಾಯಣ’? ಕೋಟಿ ಕೋಟಿಗೆ ಮಾರಾಟವಾಯ್ತು ಮ್ಯೂಸಿಕ್ ಹಕ್ಕು

ರಣಬೀರ್ ಕಪೂರ್ ಮತ್ತು ಯಶ್ ನಟನೆಯ ಬಿಗ್ ಬಜೆಟ್ ಸಿನಿಮಾ 'ರಾಮಾಯಣ' ಮ್ಯೂಸಿಕ್ ಡೀಲ್ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಟಿ-ಸೀರೀಸ್ ಸಂಸ್ಥೆಯು 75 ಕೋಟಿ ರೂಪಾಯಿಗೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಆ ಮೂಲಕ 'ಪುಷ್ಪ 2' ಚಿತ್ರದ 65 ಕೋಟಿ ರೂಪಾಯಿಯ ದಾಖಲೆಯನ್ನು ರಾಮಾಯಣ ಮುರಿದಿದೆ.

'ಪುಷ್ಪ 2' ದಾಖಲೆ ಮುರಿದ 'ರಾಮಾಯಣ’? ಕೋಟಿ ಕೋಟಿಗೆ ಮಾರಾಟವಾಯ್ತು ಮ್ಯೂಸಿಕ್ ಹಕ್ಕು
ರಣಬೀರ್​-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Jul 30, 2026 | 10:04 AM

Share

ಮುಖ್ಯಾಂಶಗಳು

  • ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್ ಸೌಂಡ್ ಮಾಡಿದ 'ರಾಮಾಯಣ'
  • ಅಲ್ಲು ಅರ್ಜುನ್ ದಾಖಲೆ ಬ್ರೇಕ್ ಮಾಡಿದ ರಣಬೀರ್-ಯಶ್ ಕಾಂಬಿನೇಷನ್
  • ಜುಲೈ 30 ಕ್ಕೆ ಬರಲಿದ್ದಾನೆ ರಾಮನ ದರ್ಶನ ಮಾಡಿಸಲಿರೋ ಟ್ರೈಲರ್ ಧಮಾಕಾ

ವಿಶ್ವ ಮಟ್ಟದಲ್ಲಿ ಸಖತ್ ಹೈಪ್ ಕ್ರಿಯೇಟ್ ಮಾಡಿರುವ ‘ರಾಮಾಯಣ’ ಸಿನಿಮಾ (Ramayana Movie) ಈಗ ಹೊಸ ಇತಿಹಾಸ ಬರೆಯಲು ರೆಡಿ ಆಗಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಟಿ-ಸೀರೀಸ್ ಸಂಸ್ಥೆಯು ಭಾರಿ ಮೊತ್ತಕ್ಕೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಮ್ಯೂಸಿಕ್ ಡೀಲ್ ಕುದುರಿಸಿದ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ.

75 ಕೋಟಿ ರೂಪಾಯಿಗೆ ಆಡಿಯೋ ಹಕ್ಕು ಮಾರಾಟ

ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಚಿತ್ರದ ಮ್ಯೂಸಿಕ್ ರೈಟ್ಸ್ ಬರೋಬ್ಬರಿ 75 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ವರದಿಯಾಗಿದೆ. ಸಿನಿಮಾ ವಲಯದಲ್ಲಿ ಈ ಸುದ್ದಿ ದೊಡ್ಡ ಸಂಚಲನ ಮೂಡಿಸಿದೆ. ಇದು ನಿಜವೇ ಆದಲ್ಲಿ ಭಾರತೀಯ ಸಿನಿಮಾ ರಂಗದಲ್ಲಿ ಇದು ಹೊಸ ಮೈಲಿಗಲ್ಲು ಸೃಷ್ಟಿಸಲಿದೆ. ಈ ಡೀಲ್ ಮೂಲಕ ಸಿನಿಮಾ ತನ್ನ ಗತ್ತನ್ನು ಪ್ರದರ್ಶಿಸಿದೆ.

‘ಪುಷ್ಪ 2’ ದಾಖಲೆ ಧೂಳೀಪಟ ಮಾಡಿದ ರಾಮ

ಇಲ್ಲಿಯವರೆಗೆ ಅತಿ ಹೆಚ್ಚು ಮೊತ್ತಕ್ಕೆ ಆಡಿಯೋ ಹಕ್ಕು ಮಾರಾಟವಾದ ದಾಖಲೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹೆಸರಿನಲ್ಲಿತ್ತು. ‘ಪುಷ್ಪ 2’ ಚಿತ್ರದ ಮ್ಯೂಸಿಕ್ ರೈಟ್ಸ್ ಸುಮಾರು 65 ಕೋಟಿ ರೂಪಾಯಿಗೆ ಸೇಲ್ ಆಗಿತ್ತು. ಈಗ ‘ರಾಮಾಯಣ’ ಸಿನಿಮಾ ಆ ದಾಖಲೆಯನ್ನು ಸುಲಭವಾಗಿ ಮೀರಿ ನಿಂತಿದೆ. ಆ ಮೂಲಕ ‘ಪುಷ್ಪ’ ಚಿತ್ರದ ದಾಖಲೆ ಧೂಳೀಪಟವಾಗಿದೆ.

ಇದನ್ನೂ ಓದಿ: ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ: ನಮಿತ್ ಮಲ್ಹೋತ್ರಾ ಅಧಿಕೃತ ಘೋಷಣೆ

ಯಶ್ ನಟನೆಯ ಚಿತ್ರದ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ರಣಬೀರ್ ಕಪೂರ್ ರಾಮನಾಗಿ ನಟಿಸುತ್ತಿದ್ದರೆ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಇಲ್ಲಿ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಜುಲೈ 30 ರಂದು ‘ರಾಮಾಯಣ ಭಾಗ 1’ ಚಿತ್ರದ ಬಹುನಿರೀಕ್ಷಿತ ಟ್ರೈಲರ್ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:38 am, Wed, 29 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!