AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ 2’ ರಿಲೀಸ್ ಮುಂದಕ್ಕೆ ಹೋಗುವ ವಿಷಯ ಮೊದಲೇ ಲೀಕ್ ಮಾಡಿದ್ದು ರಣಬೀರ್?

ರಣಬೀರ್ ಕಪೂರ್ ಅವರು 'ರಾಮಾಯಣ' ಚಿತ್ರದ ವಿಳಂಬದ ಬಗ್ಗೆ ಸಂದೀಪ್ ರೆಡ್ಡಿ ವಂಗಾ ಅವರಿಗೆ ರಹಸ್ಯವಾಗಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಪ್ರಭಾಸ್ ನಟನೆಯ 'ಸ್ಪಿರಿಟ್' ಸಿನಿಮಾಗೆ ದೀಪಾವಳಿ 2027ರ ಬಿಡುಗಡೆ ದಿನಾಂಕವನ್ನು ಪಡೆದುಕೊಳ್ಳಲು ಸಾಧ್ಯವಾಗಿದ್ದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ 2’ ರಿಲೀಸ್ ಮುಂದಕ್ಕೆ ಹೋಗುವ ವಿಷಯ ಮೊದಲೇ ಲೀಕ್ ಮಾಡಿದ್ದು ರಣಬೀರ್?
ರಾಮಾಯಣ ತಂಡ
ರಾಜೇಶ್ ದುಗ್ಗುಮನೆ
|

Updated on:Oct 24, 2026 | 1:22 PM

Share

ಮುಖ್ಯಾಂಶಗಳು

  • ರಣಬೀರ್ ರಹಸ್ಯ ಸುಳಿವು
  • ವಂಗಾಗೆ ಸಹಾಯ ಮಾಡಿದ ಬಾಲಿವುಡ್ ಸ್ಟಾರ್
  • ದೀಪಾವಳಿ 2027ಕ್ಕೆ ಸ್ಪಿರಿಟ್

ರಣಬೀರ್ ಕಪೂರ್ ಹಾಗೂ ಸಂದೀಪ್ ರೆಡ್ಡಿ ವಂಗಾ ನಡುವೆ ಬಾಕ್ಸ್‌ಆಫೀಸ್‌ನಲ್ಲಿ ಸಂಘರ್ಷ ನಡೆಯಲಿದೆ ಎಂದುಕೊಳ್ಳುತ್ತಿದ್ದವರಿಗೆ ಅಚ್ಚರಿಯೊಂದು ಕಾದಿದೆ. ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ದೀಪಾವಳಿ 2027ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆಯಾಗಲು ರಣಬೀರ್ ಕಪೂರ್ ನೀಡಿದ ಗುಪ್ತ ಸುಳಿವಿನೇ ಕಾರಣ ಎಂಬ ರೋಚಕ ಮಾಹಿತಿ ಹೊರಬಂದಿದೆ.

‘ರಾಮಾಯಣ ಭಾಗ 2’ ಸಿನಿಮಾದ ಬಿಡುಗಡೆಯಲ್ಲಿ ವಿಳಂಬವಾಗಲಿದೆ ಎಂಬ ವಿಷಯ ರರಣಬೀರ್ ಕಪೂರ್ ಅವರಿಗೆ ಮುಂಚಿತವಾಗಿ ತಿಳಿದಿತ್ತು. ತಕ್ಷಣವೇ ಈ ವಿಚಾರವನ್ನು ತಮ್ಮ ಆಪ್ತ ಸ್ನೇಹಿತ ಹಾಗೂ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರಿಗೆ ರಣಬೀರ್ ರಹಸ್ಯವಾಗಿ ತಿಳಿಸಿಕೊಟ್ಟಿದ್ದಾರೆ ಎಂದು ವರದಿ ಆಗಿದೆ.

ಈ ವಿಶ್ವಾಸಾರ್ಹ ಮಾಹಿತಿಯನ್ನು ಪಡೆದ ತಕ್ಷಣವೇ ವಂಗಾ ಅವರು ದೀಪಾವಳಿ 2027ರ ದಿನಾಂಕವನ್ನು ತಮ್ಮ ಸಿನಿಮಾಕ್ಕಾಗಿ ಲಾಕ್ ಮಾಡಿಕೊಂಡಿದ್ದಾರೆ. ನಿರ್ಮಾಪಕ ಭೂಷಣ್ ಕುಮಾರ್ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಇಬ್ಬರೂ ಸೇರಿ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ಮೊದಲ ಭಾಗದ ‘ರಾಮಾಯಣ’ ಸಿನಿಮಾದ ಪೋಸ್ಟ್ ಕ್ರೆಡಿಟ್ ಸೀನ್‌ನಲ್ಲಿ ಚಿತ್ರದ ಮುಂದಿನ ಬಿಡುಗಡೆಯ ಹೊಸ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ. ಚಿತ್ರರಂಗದಲ್ಲಿ ಇವರ ನಡುವೆ ಯಾವುದೇ ಪೈಪೋಟಿಯಿಲ್ಲದೆ ಪರಸ್ಪರ ಸಹಾಯ ಮಾಡಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಈ ಬಹುನಿರೀಕ್ಷಿತ ಆ್ಯಕ್ಷನ್ ಚಿತ್ರದ ಮೇಲಿನ ನಿರೀಕ್ಷೆ ಈಗ ಗರಿಗೆದರಿದೆ.

ಇದನ್ನೂ ಓದಿ: ಸೈಲೆಂಟ್ ಆಗಿ ಮುಂದಕ್ಕೆ ಹೋಯ್ತು ‘ರಾಮಾಯಣ 2’ ರಿಲೀಸ್ ದಿನಾಂಕ?

‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ 5ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನಾಗಿ ಯಶ್ ನಟಿಸಿದ್ದಾರೆ. ಈ ಚಿತ್ರದ ಎರಡನೇ ಭಾಗ 2027ರಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಶೂಟಿಂಗ್ ಹಾಗೂ ವಿಎಫ್​​ಎಕ್ಸ್ ಕೆಲಸಗಳ ವಿಳಂಬ ಕಾರಣಕ್ಕೆ ಈ ಚಿತ್ರದ ಬಿಡುಗಡೆ ತಡವಾಗುತ್ತಿದೆ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:17 pm, Sat, 24 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More