AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಹಿಂದಿನ ಕ್ಷಮೆ ಪ್ರಾಮಾಣಿಕವಾಗಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ, ರಣವೀರ್ ಸಿಂಗ್ ಮತ್ತೊಮ್ಮೆ ಪರಿಷ್ಕೃತ ಕ್ಷಮೆಯಾಚಿಸಲು ಮತ್ತು ಚಾವುಂಡಿ ದೇವಸ್ಥಾನಕ್ಕೆ ಭೇಟಿ ನೀಡಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಈ ವಿಷಯವನ್ನು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್
ರಿಷಬ್-ರಣವೀರ್
ರಾಜೇಶ್ ದುಗ್ಗುಮನೆ
|

Updated on: Apr 10, 2026 | 5:54 PM

Share

ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

‘ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು ದೂರ ಮಾಡುತ್ತದೆ’ ಎಂದು ರಣವೀರ್ ಸಿಂಗ್ ಪರವಾಗಿ ಸಜನ್ ಪೂವಯ್ಯ ಕೋರ್ಟ್​​ಗೆ ತಿಳಿಸಿದ್ದಾಗಿ ಬಾರ್ ಆ್ಯಂಡ್ ಬೇಂಚ್ ವರದಿ ಮಾಡಿದೆ.

‘ನಾನು ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದೇನೆ ಮತ್ತು ಆ ಅಫಿಡವಿಟ್‌ನಲ್ಲಿ ದೇವಸ್ಥಾನಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದೇನೆ. ದೈವಾರಾಧಕರನ್ನು ನೋಯಿಸಿದ್ದೇನೆ ಎಂದು ಮಿಮಿಕ್ರಿ ಮಾಡಿದಾಗ ನನಗೆ ತಿಳಿದಿರಲಿಲ್ಲ. ನಾನು ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದವನು. ನನಗೆ ಈ ಸೂಕ್ಷ್ಮತೆಗಳ ಬಗ್ಗೆ ತಿಳಿದಿರಲಿಲ್ಲ’ ಎಂದು ರಣವೀರ್ ಸಿಂಗ್ ಕೋರ್ಟ್​​ಗೇ ಈ ಮೊದಲು ವಕೀಲರ ಮೂಲಕ ತಿಳಿಸಿದ್ದರು.

‘ಈ ಅಫಿಡವಿಟ್ ಮೂಲಕ ನಾನು ಮತ್ತೊಮ್ಮೆ ನನ್ನ ವಿಷಾದ ಹೊರಹಾಕುತ್ತೇನೆ. ಬೇಷರತ್ತ ಕ್ಷಮೆಯಾಚಿಸುತ್ತೇನೆ . ನನ್ನ ಪ್ರಾರ್ಥನೆಗಳನ್ನು ಸಲ್ಲಿಸಲು ಮತ್ತು ನನ್ನ ಭಕ್ತಿಯನ್ನು ವ್ಯಕ್ತಪಡಿಸಲು ನಾನು ಶೀಘ್ರವೇ ಚಾವುಂಡಿ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ’ ಎಂದು ರಣವೀರ್ ಸಿಂಗ್ ಅಫಿಡವಿಟ್​​ನಲ್ಲಿ ತಿಳಿಸಿರುವುದಾಗಿ ಪೂವಯ್ಯ ಹೇಳಿದ್ದರು.

ಇದನ್ನೂ ಓದಿ: ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ ಆದರೆ, ದೂರುದಾರ ಪ್ರಶಾಂತ್ ಮೇಥಲ್​​ಗೆ ಇದು ಖುಷಿ ಕೊಟ್ಟಿರಲಿಲ್ಲ. ರಣವೀರ್ ಕ್ಷಮೆಯಲ್ಲಿ ಪ್ರಾಮಾಣಿಕತೆ ಕಾಣಿಸಿಲ್ಲ ಎಂದಿದ್ದರು. ಇದಕ್ಕೆ ಉತ್ತರಿಸಿರೋ ಪೂವಯ್ಯ ಅವರು, ಪ್ರಶಾಂತ್ ಅವರ ಜೊತೆ ಚರ್ಚಿಸಿ, ಹೊಸ ಅಫಿಡವಿಟ್ ಸಿದ್ಧ ಮಾಡಿ ಸಲ್ಲಿಕೆ ಮಾಡೋದಾಗಿ ಹೇಳಿದ್ದಾರೆ. ಪ್ರಕರಣವನ್ನು ಏಪ್ರಿಲ್ 23ಕ್ಕೆ ಮುಂದೂಡಲಾಗಿದೆ. ರಣವೀರ್ ಸಿಂಗ್ ಅವರು ಗೋವಾದಲ್ಲಿ ನಡೆದ ಫಿಲ್ಮ್​ ಫೆಸ್ಟಿವಲ್​​ನಲ್ಲಿ ದೈವವನ್ನು ಅನುಕರಿಸಿದ್ದರು. ರಿಷಬ್ ಎದುರು ಅವರು ಈ ಅನುಕರಣೆ ಮಾಡಿ ವಿವಾದಕ್ಕೆ ಸಿಲುಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!