AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರನ್ಯಾ ರಾವ್ ಬಿಗ್ ಶಾಕ್ ನೀಡಿದ ಕಸ್ಟಮ್ಸ್ ಇಲಾಖೆ: ನಟಿಗೆ 89 ಕೋಟಿ ರೂ. ದಂಡ

ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ 113 ಕೆಜಿ ಚಿನ್ನ ಅಕ್ರಮ ಸಾಗಾಟ ಪ್ರಕರಣದಲ್ಲಿ ಕಸ್ಟಮ್ಸ್ ಇಲಾಖೆಯಿಂದ ಬರೋಬ್ಬರಿ ₹89 ಕೋಟಿ ದಂಡಕ್ಕೆ ಗುರಿಯಾಗಿದ್ದಾರೆ. ದುಬೈನಿಂದ ಚಿನ್ನ ಸಾಗಾಟ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಸ್ಟಮ್ಸ್ ಜಂಟಿ ನಿರ್ದೇಶಕರು 399 ಪುಟಗಳ ವಿಸ್ತೃತ ಆದೇಶ ಹೊರಡಿಸಿದ್ದು, ನಟಿಗೆ ದಂಡ ಪಾವತಿಸಲು ನೋಟಿಸ್ ನೀಡಲಾಗಿದೆ. ಇದು ದೊಡ್ಡ ಚಿನ್ನದ ದಂಧೆಯ ಜಾಲದ ಭಾಗವಾಗಿದೆ.

ನಟಿ ರನ್ಯಾ ರಾವ್ ಬಿಗ್ ಶಾಕ್ ನೀಡಿದ ಕಸ್ಟಮ್ಸ್ ಇಲಾಖೆ: ನಟಿಗೆ 89 ಕೋಟಿ ರೂ. ದಂಡ
ರನ್ಯಾ ರಾವ್
ಶಿವಪ್ರಸಾದ್​ ಬಿ.
| Edited By: |

Updated on:Oct 01, 2026 | 6:23 AM

Share

ಮುಖ್ಯಾಂಶಗಳು

  • ನಟಿ ರನ್ಯಾ ರಾವ್ ಬಿಗ್ ಶಾಕ್ ನೀಡಿದ ಕಸ್ಟಮ್ಸ್ ಇಲಾಖೆ
  • ನಟಿ ರನ್ಯಾ ರಾವ್‌ಗೆ ಬರೋಬ್ಬರಿ 89 ಕೋಟಿ ರೂಪಾಯಿ ದಂಡ
  • ಕಸ್ಟಮ್ಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ

ಬೆಂಗಳೂರು, ಅ.1: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಅಕ್ರಮ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಭಾರಿ ಚಾವಟಿ ಬೀಸಿದೆ. ದುಬೈನಿಂದ ಅಕ್ರಮವಾಗಿ ನೂರಾರು ಕೆಜಿ ಚಿನ್ನ ಸಾಗಾಟ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್‌ಗೆ ಬರೋಬ್ಬರಿ 89 ಕೋಟಿ ರೂಪಾಯಿ ದಂಡ ವಿಧಿಸಿ ಕಸ್ಟಮ್ಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಕಸ್ಟಮ್ಸ್ ಇಲಾಖೆಯ ಜಂಟಿ ನಿರ್ದೇಶಕ ಸಂದೀಪ್ ಅವರು ಈ ಕುರಿತು 399 ಪುಟಗಳ ವಿಸ್ತೃತ ಆದೇಶ ಹೊರಡಿಸಿದ್ದು, ದಂಡ ಪಾವತಿಸುವಂತೆ ನಟಿ ರನ್ಯಾ ರಾವ್‌ಗೆ ಅಧಿಕೃತ ನೋಟಿಸ್ ರವಾನಿಸಿದ್ದಾರೆ. ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಟಿ ಹಾಗೂ ಆಕೆಯ ಸಹಚರರನ್ನು ಬಂಧಿಸಿದ ಬಳಿಕ ಈ ಬೃಹತ್ ಚಿನ್ನದ ದಂಧೆಯ ಜಾಲ ಒಂದೊಂದಾಗಿ ಹೊರಬಿದ್ದಿತ್ತು. ಕಸ್ಟಮ್ಸ್ ಇಲಾಖೆ ನಡೆಸಿದ ತೀವ್ರ ತನಿಖೆಯ ವೇಳೆ ಕಣ್ಣಿಕ್ಕುವಂತಹ ಆಘಾತಕಾರಿ ಸತ್ಯಗಳು ಸಾಬೀತಾಗಿವೆ.

ಮಾರ್ಚ್ 7, 2024 ರಿಂದ ಫೆಬ್ರವರಿ 18, 2025 ರವರೆಗಿನ ಕೇವಲ ಒಂದು ವರ್ಷದ ಅವಧಿಯಲ್ಲಿ ಈ ಅಕ್ರಮ ವಹಿವಾಟು ನಡೆದಿದೆ. ನಟಿ ರನ್ಯಾ ರಾವ್ ತಮ್ಮ ಸಹ ಆರೋಪಿಗಳೊಂದಿಗೆ ಸೇರಿಕೊಂಡು ದುಬೈನಿಂದ ಸುಮಾರು 113 ಕೆಜಿ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಇದನ್ನೂ ಓದಿ; ಗೋಲ್ಡ್ ಸ್ಮಗ್ಲಿಂಗ್ ಕೇಸ್​​: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್​​ಗೆ ಜಾಮೀನು

ಪ್ರಕರಣದ ಪ್ರಮುಖ ಆರೋಪಿ ತರುಣ್ ಸೇರಿದಂತೆ ಇನ್ನುಳಿದ ಮೂವರ ಜೊತೆಗೂಡಿ ರನ್ಯಾ ರಾವ್ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಅಕ್ರಮ ವ್ಯವಹಾರ ನಡೆಸುತ್ತಿದ್ದರು ಎಂಬುದು ಕಸ್ಟಮ್ಸ್ ತನಿಖೆಯಿಂದ ಸ್ಪಷ್ಟವಾಗಿದೆ. ಪ್ರಕರಣದ ತೀವ್ರತೆಯನ್ನು ಪರಿಗಣಿಸಿರುವ ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಅವರು 399 ಪುಟಗಳ ಕಡತ ಸಿದ್ಧಪಡಿಸಿ, ಕಸ್ಟಮ್ಸ್ ಕಾಯ್ದೆಯಡಿ ಇಷ್ಟೊಂದು ದೊಡ್ಡ ಪ್ರಮಾಣದ ದಂಡ ವಿಧಿಸಿದ್ದಾರೆ.

ಪ್ರಕರಣದ ಹಿನ್ನಲೆ:

ನಟಿ ರನ್ಯಾ ರಾವ್, ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡ ಬಳಿಕ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು. ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿ ವಾಸವಿದ್ದ ರನ್ಯಾ ರಾವ್ ಉದ್ಯಮ ಮತ್ತು ಬ್ಯುಸಿನೆಸ್ ನೆಪ ಒಡ್ಡಿ ದುಬೈಗೆ ಸಾಗುತ್ತಿದ್ದ ನಟಿ ರನ್ಯಾ ರಾವ್ ಅವರ ಮೇಲಿದ್ದ ಅನುಮಾನದಿಂದಾಗಿ ಕಸ್ಟಮ್ಸ್ ಹಾಗೂ ಡಿಆರ್‌ಐ ಅಧಿಕಾರಿಗಳು ಅವರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸಿದ್ದರು, 2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಬಂದಿಳಿದಿದ್ದ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ತಡೆದು ತೀವ್ರ ತಪಾಸಣೆ ನಡೆಸಿದ್ದರು. ಈ ವೇಳೆ ಅವರ ಬಳಿ 14.213 ಕೆಜಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ತಕ್ಷಣವೇ ಅವರನ್ನು ಬಂಧಿಸಲಾಯಿತು. ಬಂಧನದ ಬಳಿಕ ರನ್ಯಾ ರಾವ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ತಳ್ಳಲಾಯಿತು. ಈ ಮಧ್ಯೆ ಹೈಕೋರ್ಟ್ ಏಕಸದಸ್ಯ ಪೀಠವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಚಿನ್ನದ ಅಕ್ರಮ ಸಾಗಾಣಿಕೆಯ ಗಂಭೀರತೆಯನ್ನು ಪರಿಗಣಿಸಿ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB) ರನ್ಯಾ ರಾವ್ ವಿರುದ್ಧ ಕಾಫಿಪೋಸಾ (COFEPOSA) ಕಾಯ್ದೆ ಸೆಕ್ಷನ್ 3(1) ಅಡಿ ಮುನ್ನೆಚ್ಚರಿಕೆ ಬಂಧನದ ಆದೇಶ ಹೊರಡಿಸಿತು. ಪರಿಣಾಮವಾಗಿ ಅವರಿಗೆ ಬರೋಬ್ಬರಿ ಒಂದು ವರ್ಷದವರೆಗೆ ಜಾಮೀನು ಸಿಗದೆ ಜೈಲಿನಲ್ಲೇ ಉಳಿಯುವಂತಾಯಿತು. ತನಿಖೆ ಮುಂದುವರಿದಂತೆ, ನಟಿ ರನ್ಯಾ ರಾವ್ ಒಟ್ಟಾರೆಯಾಗಿ 102 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಭಾರಿ ಪ್ರಮಾಣದ ಚಿನ್ನವನ್ನು ಸಾಗಾಟ ಮಾಡಿರುವ ಬೃಹತ್ ಜಾಲದ ಆಘಾತಕಾರಿ ಸತ್ಯಗಳು ಒಂದೊಂದಾಗಿ ಹೊರಬಿದ್ದವು. ನಂತರದಲ್ಲಿ ಏಪ್ರಿಲ್ 22 2026ರಂದು ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿತ್ತು. ಇದೀಗ ಭಾರೀ ಪ್ರಮಾಣ ಕಸ್ಟಮ್ಸ್ ಇಲಾಖೆ ದಂಡ ವಿಧಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 am, Thu, 1 October 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ