AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾಗೆ ಜೈಲಿನಲ್ಲಿದ್ದರೂ ಮುಗಿಯದ ಸಂಕಷ್ಟ; ಐಟಿ ಇಲಾಖೆಯಿಂದ 3 ದಿನ ನಟಿಯ ವಿಚಾರಣೆ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡ ನಟಿ ರನ್ಯಾ ರಾವ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ 3 ದಿನಗಳ ವಿಚಾರಣೆ ಆರಂಭಿಸಿದೆ. ಜೂನ್ 11ರಿಂದ 13ರವರೆಗೆ ನಡೆಯುವ ಈ ವಿಚಾರಣೆ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ನಡೆಯಲಿದೆ. ಕಾಫೆಪೊಸಾ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಿಂದಾಗಿ ಜಾಮೀನು ನಿರಾಕರಣೆಯಾಗಿರುವ ರನ್ಯಾ ಅವರಿಗೆ ಈ ವಿಚಾರಣೆ ಹೊಸ ಸಂಕಷ್ಟವನ್ನು ತಂದೊಡ್ಡಿದೆ.

ರನ್ಯಾಗೆ ಜೈಲಿನಲ್ಲಿದ್ದರೂ ಮುಗಿಯದ ಸಂಕಷ್ಟ; ಐಟಿ ಇಲಾಖೆಯಿಂದ 3 ದಿನ ನಟಿಯ ವಿಚಾರಣೆ
ರನ್ಯಾ ರಾವ್
ರಾಜೇಶ್ ದುಗ್ಗುಮನೆ
|

Updated on: Jun 11, 2025 | 7:34 AM

Share

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ (Ranya Rao) ಬಂಧನ ಮಾಡಿ ಕೆಲವು ತಿಂಗಳು ನಡೆದಿದೆ. ಸದ್ಯ ಅವರ ವಿರುದ್ಧ ನಾನಾ ಪ್ರಕರಣಗಳು ದಾಖಲಾಗಿವೆ. ಈ ಎಲ್ಲಾ ಕಾರಣಕ್ಕೆ ಅವರಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಿರುವಾಗಲೇ ರನ್ಯಾ ರಾವ್ ಪ್ರಕರಣಕ್ಕೆ ಆದಾಯ ತೆರಿಗೆ ಇಲಾಖೆ ಎಂಟ್ರಿ ಕೊಟ್ಟಿದೆ. ಕೆಲವು ದಿನಗಳ ಕಾಲ ಅವರನ್ನು ವಿಚಾರಣೆ ಮಾಡಲು ಐಟಿ ಇಲಾಖೆ ಮುಂದಾಗಿದ್ದು, ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.

ಮಾರ್ಚ್ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರು 14 ಕೆಜಿ ಚಿನ್ನದ ಜೊತೆ ಸಿಕ್ಕಿ ಬಿದ್ದಿದ್ದರು. ತಕ್ಷಣ ಅವರನ್ನು ಬಂಧಿಸಲಾಯಿತು. ರನ್ಯಾ ಅವರು ಐಪಿಎಸ್ ಅಧಿಕಾರಿಯ ಪುತ್ರಿ. ಹೀಗಾಗಿ, ಅಕ್ರಮ ಚಿನ್ನ ಕಳ್ಳ ಸಾಗಣೆಗೆ ಪೊಲೀಸ್ ವ್ಯವಸ್ಥೆಯನ್ನು ಬಳಕೆ ಮಾಡಿಕೊಂಡಿದ್ದು ತನಿಖೆ ವೇಳೆ ತಿಳಿದು ಬಂದಿತ್ತು. ಅಲ್ಲದೆ, ಈ ಮೊದಲು ಹಲವು ಬಾರಿ ಚಿನ್ನ ಕಳ್ಳ ಸಾಗಣೆ ಮಾಡಿ, ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದು ಕೂಡ ಬಹಿರಂಗ ಆಗಿದೆ.

ಈಗ ಐಟಿ ಇಲಾಖೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಿಂದ ರನ್ಯಾ ವಿಚಾರಣೆಗೆ ಅನುಮತಿ ಪಡೆದಿದೆ. ಇಂದಿನಿಂದ (ಜೂನ್ 11) ಜೂನ್ 13ರವರೆಗೆ ವಿಚಾರಣೆ ನಡೆಯಲಿದೆ. ರನ್ಯಾ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಅಲ್ಲಿಯೇ ಅವರು ವಿಚಾರಣೆಗೆ ಒಳಗಾಗಲಿದ್ದಾರೆ. ಇಷ್ಟು ದಿನ ಜೈಲಿನಲ್ಲಿ ಹಾಯಾಗಿದ್ದ ಅವರಿಗೆ ಈಗ ಮತ್ತೆ ವಿಚಾರಣೆಯ ಭೂತ ಕಾಡಿದೆ. ಈ ವಿಚಾರಣೆ ವೇಳೆ ಮತ್ತಷ್ಟು ದೊಡ್ಡ ವಿಚಾರಗಳು ಬಹಿರಂಗ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ತೆಲುಗು ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮೇಲೆ ಓಪನ್​ ಟ್ರೋಲ್
Image
ಒಂದೇ ವರ್ಷ, ಮೂರು ಖ್ಯಾತ ನಿರ್ದೇಶಕರು ಮತ್ತು ನಾಲ್ಕು ಡಿಸಾಸ್ಟರ್ ಸಿನಿಮಾ
Image
ಹೊಸ ಅಧ್ಯಾಯ ಆರಂಭಿಸಿದ ಜೀ ಕನ್ನಡ; ವಿನೂತನ ಲೋಗೋ, ಹೊಸ ಅಧ್ಯಾಯ
Image
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್​ಗೆ ಜಾಮೀನು, ಬಿಡುಗಡೆ ಅನುಮಾನ

ಈ ಮೊದಲು ನಟಿ ರಮ್ಯಾಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ, ಆದರೆ ರನ್ಯಾ ರಾವ್ ಜೈಲಿನಿಂದ ಬಿಡುಗಡೆ ಆಗಿಲ್ಲ. ಇದಕ್ಕೆ ಕಾರಣ ಅವರ ಮೇಲೆ ದಾಖಲಾದ ಕೇಸ್. ರನ್ಯಾ ವಿರುದ್ಧ ಕಠಿಣವಾದ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ನಿಯಂತ್ರಣ ಕಾಯ್ದೆ (ಕಾಫೆಪೊಸಾ/COFEPOSA) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇದೊಂದು ಕಠಿಣವಾದ ಕಾಯ್ದೆಯಾಗಿದೆ. ಇದರ ಅಡಿಯಲ್ಲಿ ಕೇಸ್ ದಾಖಲಾದರೆ ಜಾಮೀನು ಸಿಗೋದಿಲ್ಲ. ಒಂದೊಮ್ಮೆ ಆರೋಪಿಗಳಿಗೆ ಬೇರೆ ಪ್ರಕರಣಗಳಲ್ಲಿ ಜಾಮೀನು ದೊರೆತರೂ ಸಹ ಅವರ ಬಿಡುಗಡೆ ಸಾಧ್ಯವಿಲ್ಲ. ಈ ಕಾರಣದಿಂದಲೇ ಅವರಿನ್ನೂ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ