AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದ್​ಶಾ -ಇಶಾ ರಿಖಿ ದಾಂಪತ್ಯ ಅಂತ್ಯ; ಅಧಿಕೃತವಾಗಿ ಘೋಷಣೆ ಮಾಡಿದ ರಾಪರ್

ಪ್ರಸಿದ್ಧ ರ‍್ಯಾಪರ್ ಬಾದ್‌ಶಾ ಹಾಗೂ ಪಂಜಾಬಿ ನಟಿ ಇಶಾ ರಿಖಿ ತಮ್ಮ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಪರಸ್ಪರ ಸಮ್ಮತಿಯಿಂದಲೇ ಬೇರೆಯಾಗುತ್ತಿರುವುದಾಗಿ ಈ ಜೋಡಿ ಅಧಿಕೃತವಾಗಿ ಘೋಷಿಸಿದೆ. ಬಾದ್‌ಶಾ ಅವರಿಗೆ ಇದು ಎರಡನೇ ವಿಚ್ಛೇದನವಾಗಿದ್ದು, ಈ ಸುದ್ದಿ ಅಭಿಮಾನಿಗಳಲ್ಲಿ ಭಾರಿ ಅಚ್ಚರಿ ಮೂಡಿಸಿದೆ.

ಬಾದ್​ಶಾ -ಇಶಾ ರಿಖಿ ದಾಂಪತ್ಯ ಅಂತ್ಯ; ಅಧಿಕೃತವಾಗಿ ಘೋಷಣೆ ಮಾಡಿದ ರಾಪರ್
ಬಾದ್​ಶಾ-ಇಶಾ
ರಾಜೇಶ್ ದುಗ್ಗುಮನೆ
|

Updated on: Sep 01, 2026 | 10:52 AM

Share

ಮುಖ್ಯಾಂಶಗಳು

  • ಬಾದ್‌ಶಾ-ಇಶಾ ರಿಖಿ ದಾಂಪತ್ಯ ಅಂತ್ಯ
  • ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್
  • ರ‍್ಯಾಪರ್ ಬಿಗ್‌ಬಾಸ್‌ಗೆ ಎರಡನೇ ವಿಚ್ಛೇದನ

ಖ್ಯಾತ ರ‍್ಯಾಪರ್ ಬಾದ್‌ಶಾ ಹಾಗೂ ಪಂಜಾಬಿ ನಟಿ ಇಶಾ ರಿಖಿ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಹರಿದಾಡುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಇಬ್ಬರೂ ಪರಸ್ಪರ ಒಪ್ಪಂದದ ಮೂಲಕ ಬೇರೆಯಾಗಲು ನಿರ್ಧರಿಸಿದ್ದಾರೆ. ಬಾದ್‌ಶಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

‘ನಾವಿಬ್ಬರೂ ಗೌರವಯುತವಾಗಿ ಬೇರೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಪರಸ್ಪರ ಸಮ್ಮತಿಯಿಂದಲೇ ಈ ಹಾದಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕಷ್ಟದ ಸಮಯದಲ್ಲಿ ಅಭಿಮಾನಿಗಳು ಮತ್ತು ಮಾಧ್ಯಮಗಳು ನಮ್ಮ ವೈಯಕ್ತಿಕ ಜೀವನಕ್ಕೆ ಗೌರವ ನೀಡಬೇಕು. ಈ ವಿಷಯದ ಬಗ್ಗೆ ನಾವು ಮುಂದೆ ಯಾವುದೇ ಬಹಿರಂಗ ಚರ್ಚೆ ಮಾಡುವುದಿಲ್ಲ’ ಎಂದು ಅವರು ಬರೆದುಕೊಂಡಿದ್ದಾರೆ.

ಕೆಲವು ವಾರಗಳ ಹಿಂದೆ ಇಶಾ ರಿಖಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ಭಾವನಾತ್ಮಕ ಪೋಸ್ಟ್ ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಗಂಡನ ಅಧಿಕಾರ ಮತ್ತು ಪ್ರಭಾವಕ್ಕೆ ಹೆದರಿ ನಾನು ಮೌನವಾಗಿದ್ದೆ’ ಎಂದು ಅವರು ಬರೆದಿದ್ದರು. ನನ್ನ ಮೌನವನ್ನು ಒಪ್ಪಿಗೆ ಎಂದು ಭಾವಿಸಬಾರದು ಎಂದು ಅವರು ಹೇಳಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು.

ಇದು ರ‍್ಯಾಪರ್ ಬಾದ್‌ಶಾ ಅವರಿಗೆ ಎರಡನೇ ವಿಚ್ಛೇದನವಾಗಿದೆ. ಈ ಹಿಂದೆ ಅವರು ಜಾಸ್ಮಿನ್ ಮಸಿಹ್ ಎಂಬುವವರನ್ನು 2012ರಲ್ಲಿ ಮದುವೆಯಾಗಿದ್ದರು. ಈ ದಂಪತಿಗೆ ಓರ್ವ ಮಗಳಿದ್ದಾಳೆ. 2020ರಲ್ಲಿ ಜಾಸ್ಮಿನ್ ಅವರಿಂದ ಕಾನೂನುಬದ್ಧವಾಗಿ ವಿಚ್ಛೇದನ ಪಡೆದ ನಂತರ, ಬಾದ್‌ಶಾ ಅವರು ಇಶಾ ರಿಖಿ ಅವರನ್ನು ಮದುವೆಯಾಗಿದ್ದರು.

ಇದನ್ನೂ ಓದಿ: ಮದುವೆಯಾದ ನಾಲ್ಕೇ ತಿಂಗಳಿಗೆ ಬಾದ್‌ಶಾ ದಾಂಪತ್ಯದಲ್ಲಿ ಬಿರುಕು; ಎರಡನೇ ಪತ್ನಿಯಿಂದಲೂ ದೂರ?

ಇದೀಗ ಇಶಾ ಅವರಿಂದಲೂ ಬೇರೆಯಾಗುವ ಮೂಲಕ ಬಾದ್‌ಶಾ ಅವರ ಎರಡನೇ ದಾಂಪತ್ಯವೂ ಮುರಿದುಬಿದ್ದಿದೆ. ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಬಾಲಿವುಡ್ ಹಾಗೂ ಪಂಜಾಬಿ ಚಿತ್ರರಂಗದ ಅಭಿಮಾನಿಗಳು ತೀವ್ರ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ