AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ನಾಲ್ಕೇ ತಿಂಗಳಿಗೆ ಬಾದ್‌ಶಾ ದಾಂಪತ್ಯದಲ್ಲಿ ಬಿರುಕು; ಎರಡನೇ ಪತ್ನಿಯಿಂದಲೂ ದೂರ?

ಬಾಲಿವುಡ್ ಖ್ಯಾತ ರ‍್ಯಾಪರ್ ಬಾದ್‌ಶಾ ಹಾಗೂ ಎರಡನೇ ಪತ್ನಿ ಇಶಾ ರಿಖಿ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಮದುವೆಯಾದ ಕೇವಲ ನಾಲ್ಕು ತಿಂಗಳಲ್ಲೇ ಭಿನ್ನಾಭಿಪ್ರಾಯಗಳು ತಲೆದೂರಿದ್ದು, ಇಶಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ವೈರಲ್ ಆಗಿದೆ. ಈ ಜೋಡಿ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಮದುವೆಯಾದ ನಾಲ್ಕೇ ತಿಂಗಳಿಗೆ ಬಾದ್‌ಶಾ ದಾಂಪತ್ಯದಲ್ಲಿ ಬಿರುಕು; ಎರಡನೇ ಪತ್ನಿಯಿಂದಲೂ ದೂರ?
ಬಾದ್​ ಶಾ-ಇಶಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 29, 2026 | 10:59 AM

Share

ಮುಖ್ಯಾಂಶಗಳು

  • ರ‍್ಯಾಪರ್ ಬಾದ್‌ಶಾ ಸಂಸಾರದಲ್ಲಿ ಬಿರುಗಾಳಿ
  • ‘ಗಂಡನ ಅಧಿಕಾರಕ್ಕೆ ಹೆದರಿದ್ದೆ’ ಎಂದು ಇಶಾ ರಿಖಿ
  • ಎರಡನೇ ಮದುವೆಯೂ ಮುರಿದುಬೀಳುವ ಹಂತಕ್ಕೆ?

ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಹಾಗೂ ಬ್ರೇಕಪ್‌ಗಳ ಸರಣಿ ತೀರಾ ಹೆಚ್ಚಾಗುತ್ತಿದೆ. ವರ್ಷಗಟ್ಟಲೆ ಸಂಸಾರ ನಡೆಸಿದ ಸ್ಟಾರ್ ಜೋಡಿಗಳು ಮಾತ್ರವಲ್ಲದೆ, ಮದುವೆಯಾಗಿ ಕೆಲವೇ ತಿಂಗಳು ಕಳೆದ ದಂಪತಿಗಳು ಕೂಡ ಬೇರ್ಪಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡುತ್ತಿದ್ದಾರೆ. ಇದೀಗ ಈ ಸಾಲಿಗೆ ಬಾಲಿವುಡ್‌ನ ಖ್ಯಾತ ರ‍್ಯಾಪರ್ ಹಾಗೂ ಜನಪ್ರಿಯ ಗಾಯಕ ಬಾದ್‌ಶಾ (Badsghah) ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ಬಾದ್‌ಶಾ ಮತ್ತು ಅವರ ಎರಡನೇ ಪತ್ನಿ ಇಶಾ ರಿಖಿ ನಡುವೆ ಗಂಭೀರ ಭಿನ್ನಾಭಿಪ್ರಾಯಗಳು ಮೂಡಿದ್ದು, ಶೀಘ್ರದಲ್ಲೇ ಈ ಜೋಡಿ ವಿಚ್ಛೇದನ ಪಡೆಯಲಿದೆ ಎಂಬ ವರದಿಗಳು ಸಿನಿಮಾ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ.

ಮೊದಲ ಪತ್ನಿಗೂ ಡಿವೋರ್ಸ್ ನೀಡಿದ್ದ ಗಾಯಕ

ಹಿಂದಿ ಚಿತ್ರರಂಗದಲ್ಲಿ ಸಾಲು ಸಾಲು ಸೂಪರ್ ಹಿಟ್ ಹಾಡುಗಳನ್ನು ನೀಡಿರುವ ಬಾದ್‌ಶಾ, ಕೇವಲ ಗಾಯಕರಾಗಿ ಮಾತ್ರವಲ್ಲದೆ ಹಲವು ರಿಯಾಲಿಟಿ ಶೋಗಳ ಜಡ್ಜ್ ಆಗಿಯೂ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದು ಬಾದ್‌ಶಾ ಅವರ ಎರಡನೇ ಮದುವೆಯಾಗಿದೆ.

ಈ ಹಿಂದೆ ಅವರು ಜಾಸ್ಮಿನ್ ಮಸಿಹ್ ಎಂಬುವವರನ್ನು ವಿವಾಹವಾಗಿದ್ದರು. ಆದರೆ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ 2020 ರಲ್ಲಿ ಅವರಿಂದ ಅಧಿಕೃತವಾಗಿ ವಿಚ್ಛೇದನ ಪಡೆದು ಬೇರ್ಪಟ್ಟಿದ್ದರು. ಇದಾದ ಬಳಿಕ ಇಶಾ ರಿಖಿ ಅವರೊಂದಿಗೆ ಪ್ರೀತಿಯಲ್ಲಿದ್ದ ಬಾದ್‌ಶಾ, ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ಅತ್ಯಂತ ಸರಳವಾಗಿ ಎರಡನೇ ವಿವಾಹವಾಗಿದ್ದರು.

View this post on Instagram

A post shared by Isha Rikhi (@isharikhi)

ಪೋಸ್ಟ್ ಹಾಕಿದ ಇಶಾ!

‘ಕಣ್ಣಿಗೆ ಕಾಣಿಸುವಂತಹ ಯಾವುದೇ ಗಾಯದ ಗುರುತುಗಳನ್ನು ಬಿಡದ ಕೆಲವು ಹೋರಾಟಗಳಿರುತ್ತವೆ. ದೀರ್ಘಕಾಲದವರೆಗೆ ನಾನು ಭಯದಿಂದಾಗಿ ಮೌನವಾಗಿದ್ದೆ. ನನ್ನ ಪತಿಗೆ ಇದೆ ಎಂದು ನಾನು ನಂಬಿದ್ದ ಪ್ರಭಾವ, ಅಧಿಕಾರ ಕಂಡು ನಾನು ಧೃತಿಗೆಟ್ಟಿದ್ದೆ, ಹಾಗೂ ಸುಮ್ಮನಿರುವುದೇ ಎಲ್ಲಕ್ಕಿಂತ ಸುರಕ್ಷಿತವಾದ ಮಾರ್ಗ ಎಂದು ನನ್ನ ಮನಸ್ಸಿಗೆ ನಾನೇ ಒಪ್ಪಿಸಿಕೊಂಡಿದ್ದೆ’ ಎಂದಿದ್ದಾರೆ ಇಶಾ.

ಇದನ್ನೂ ಓದಿ: ‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

‘ಮೌನ ಎನ್ನುವುದು ಎಂದಿಗೂ ಒಪ್ಪಿಗೆಯಾಗಿರಲಿಲ್ಲ. ಅದು ಕೇವಲ ಬದುಕಿ ಉಳಿಯುವ ಪ್ರಯತ್ನವಾಗಿತ್ತು. ಇಂದು, ನಾನು ಭಯದ ಬದಲು ಧೈರ್ಯವನ್ನು ಆರಿಸಿಕೊಳ್ಳುತ್ತಿದ್ದೇನೆ. ಸಂಪೂರ್ಣ ಕಥೆಯನ್ನು ಹೇಳಲು ನಾನು ಇನ್ನೂ ಸಿದ್ಧಳಾಗಿಲ್ಲದಿರಬಹುದು, ಆದರೆ ಎಲ್ಲವೂ ಸರಿಯಾಗಿದೆ ಎಂದು ನಟಿಸುವುದನ್ನು ನಿಲ್ಲಿಸಲು ಕೊನೆಗೂ ನಾನು ಸಿದ್ಧಳಾಗಿದ್ದೇನೆ’ ಎಂದು ಅವರು ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು