AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಚೆನ್ನೈನಲ್ಲಿ ಭಾನುವಾರ (ನವೆಂಬರ್ 24) ರಾತ್ರಿ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ವೈಯಕ್ತಿಕ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಈ ವೇದಿಕೆ ಮೇಲೆ ಹೋಸ್ಟ್ ಅವರು ರಶ್ಮಿಕಾ ಮಂದಣ್ಣ ಬಳಿ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ರಶ್ಮಿಕಾ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ ಮಂದಣ್ಣ
ವಿಜಯ್-ರಶ್ಮಿಕಾ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Nov 25, 2024 | 11:02 AM

Share

ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಅವರು ತಮ್ಮ ಡೇಟಿಂಗ್ ವಿಚಾರ ಸೈಲೆಂಟ್ ಆಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಇವರು ಪ್ರೀತಿ ಮಾಡುತ್ತಿದ್ದಾರೆ ಎನ್ನುವ ವಿಚಾರ ಈಗ ರಹಸ್ಯವಾಗಿ ಉಳಿದಿಲ್ಲ. ಇವರು ಶೀಘ್ರವೇ ವಿವಾಹ ಆಗುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ಅವರು ಮದುವೆ ವಿಚಾರ ಮಾತನಾಡಿದ್ದಾರೆ. ವಿಜಯ್​ನ ಮದುವೆ ಆಗುತ್ತಿರುವ ವಿಚಾರನ ಅವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಚೆನ್ನೈನಲ್ಲಿ ಭಾನುವಾರ (ನವೆಂಬರ್ 24) ರಾತ್ರಿ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ವೈಯಕ್ತಿಕ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಈ ವೇದಿಕೆ ಮೇಲೆ ಹೋಸ್ಟ್ ಅವರು ರಶ್ಮಿಕಾ ಮಂದಣ್ಣ ಬಳಿ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ರಶ್ಮಿಕಾ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

‘ನೀವು ಸಿನಿಮಾ ಇಂಡಸ್ಟ್ರಿಯನ್ನು ಮದುವೆ ಆಗ್ತೀರಾ ಅಥವಾ ಹೊರಗಿನವರನ್ನು ಮದುವೆ ಆಗ್ತೀರಾ? ನೀವು ಕ್ಲ್ಯಾರಿಟಿ ಕೊಟ್ಟರೆ ನಾವು ಹುಡುಗನ ಹುಡುಕುತ್ತೀರಿ’ ಎಂದು ಹೋಸ್ಟ್ ಹೇಳಿದರು. ‘ಎಲ್ಲರಿಗೂ ಆ ಬಗ್ಗೆ ಗೊತ್ತು’ ಎಂದು ರಶ್ಮಿಕಾ ಹೇಳಿದ್ದಾರೆ. ಈ ಮಾತನ್ನು ಕೇಳಿ ಎಲ್ಲರೂ ಚಿಯರ್ ಮಾಡಿದರು. ‘ನಿಮಗೆ ಯಾವ ಉತ್ತರ ಬೇಕು ಎಂಬುದು ನಂಗೆ ಗೊತ್ತು. ನನಗೆ ಚೆನ್ನಾಗಿ ಗೊತ್ತು’ ಎಂದು ರಶ್ಮಿಕಾ ಹೇಳಿದರು.

ಇದನ್ನೂ ಓದಿ: ಔಟಿಂಗ್ ಹೊರಟ ರಶ್ಮಿಕಾ-ವಿಜಯ್ ದೇವರಕೊಂಡ, ಫೋಟೊ ವೈರಲ್

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ. ‘ನಾನು ನನ್ನ ಕೋಸ್ಟಾರ್ ಜೊತೆ ಡೇಟಿಂಗ್ ಮಾಡಿದ್ದೇನೆ. ನಾವು ಒಂದಲ್ಲಾ ಒಂದು ಸಂದರ್ಭದಲ್ಲಿ ಮದುವೆ ಆಗೇ ಆಗುತ್ತೇವೆ’ ಎಂದು  ವಿಜಯ್ ಹೇಳಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾ ಹಾಗೂ ‘ಡಿಯರ್ ಕಾಮ್ರೇಡ್​’ ಸಿನಿಮಾದಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ