AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ಕರ್ನಾಟಕದಲ್ಲಿ ನಡೆಯಲಿದೆ ಕಥೆ

Rashmika Mandanna: ರಶ್ಮಿಕಾ ಮಂದಣ್ಣ ಕನ್ನಡದಿಂದ ದೂರವೇ ಆಗಿಬಿಟ್ಟಿದ್ದಾರೆ. ಈಗ ಅವರು ತೆಲುಗು, ಹಿಂದಿ, ತಮಿಳು ಚಿತ್ರರಂಗಗಳಲ್ಲಿ ಬ್ಯುಸಿ. ಇತ್ತೀಚೆಗೆ ನಟಿ ರಶ್ಮಿಕಾ ಹಾರರ್ ಸಿನಿಮಾ ಒಂದರಲ್ಲಿ ನಟಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಸಿನಿಮಾದ ಕತೆ ನಡೆಯುವುದು ಕರ್ನಾಟಕದಲ್ಲಿ.

ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ಕರ್ನಾಟಕದಲ್ಲಿ ನಡೆಯಲಿದೆ ಕಥೆ
ಮಂಜುನಾಥ ಸಿ.
|

Updated on: Aug 30, 2024 | 6:53 PM

Share

ಇತ್ತೀಚೆಗೆ ಹಾರರ್ ಸಿನಿಮಾಗಳು ಗೆಲುವು ಕಾಣುತ್ತಿವೆ. ಅಜಯ್ ದೇವಗನ್ ನಟನೆಯ ‘ಶೈತಾನ್’ ಚಿತ್ರ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಆ ಬಳಿಕ ರಿಲೀಸ್ ಆದ ‘ಮುಂಜ್ಯ’ ಚಿತ್ರ ಕೂಡ ಗೆಲುವು ಕಂಡಿತ್ತು. ಈಗ ‘ಸ್ತ್ರೀ 2’ ಸಿನಿಮಾ ಕೂಡ ರಿಲೀಸ್ ಆಗಿ ಗೆಲುವು ಕಂಡಿದೆ. ಈ ಸಿನಿಮಾ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹೀಗಾಗಿ ಅನೇಕರು ಬಾಲಿವುಡ್ನಲ್ಲಿ ಹಾರರ್ ಸಿನಿಮಾಗಳನ್ನು ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಕೂಡ ಹಾರರ್ ಸಿನಿಮಾ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಿಂದಿ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ವ್ಯಾಂಪೈರ್ಡ್ ಆಫರ್ ವಿಜಯನಗರ’ ಎಂದು ಟೈಟಲ್ ಇಡಲಾಗಿದೆ. ಅಂದರೆ ವಿಜಯನಗರದ ಪಿಶಾಚಿ ಎಂಬರ್ಥ ಇದೆ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬರುತ್ತಿದೆಯಂತೆ. ಆದಿತ್ಯ ಸರ್ಪೋತ್ದಾತ್ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಅವರೇ ‘ಮುಂಜ್ಯ’ ಚಿತ್ರವನ್ನು ಈ ಮೊದಲು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಶೂಟಿಂಗ್ ಅಕ್ಟೋಬರ್ನಿಂದ ಆರಂಭ ಆಗಲಿದೆಯಂತೆ. ಆಯುಷ್ಮಾನ್ ಖುರಾನಾ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಆಯುಷ್ಮಾನ್ ಖುರಾನಾ ಅವರು ಈ ಮೊದಲು ಹಲವು ಹಾಸ್ಯ ಪ್ರಧಾನ ಸಿನಿಮಾಗಳನ್ನು ಮಾಡಿದ್ದಾರೆ. ಇದರಲ್ಲಿ ‘ಡ್ರೀಮ ಗರ್ಲ್’ ರೀತಿಯ ಸಿನಿಮಾಗಳಿವೆ. ಅವರು ಕೂಡ ಹಾರರ್ ಜಾನರ್ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಾರರ್ ಸಿನಿಮಾದ ಕಥೆ ಕರ್ನಾಟಕದಲ್ಲಿ ನಡೆಯಲಿದೆ ಅನ್ನೋದು ವಿಶೇಷ.

ಇದನ್ನೂ ಓದಿ:Rashmika Mandanna: ಒಂದೇ ದಿನ ಬಿಡುಗಡೆ ಆಗುತ್ತಿದೆ ರಶ್ಮಿಕಾ ಮಂದಣ್ಣರ ಎರಡು ಸಿನಿಮಾ

ಎರಡು ಕಾಲಘಟ್ಟದಲ್ಲಿ ಸಿನಿಮಾದ ಕಥೆ ಸಾಗಲಿದೆ. ಒಂದು ಕಥೆ ಹಂಪಿಯ ವಿಜಯನಗರ ರಾಜ್ಯದಲ್ಲಿ ಸಾಗಲಿದೆ. ಮತ್ತೊಂದು ಕಥೆ ಉತ್ತರ ಭಾರತದ ಸಣ್ಣ ಹಳ್ಳಿಯಲ್ಲಿ ಸಾಗಲಿದೆ. ಈ ಸಿನಿಮಾ ದೊಡ್ಡ ಬಜೆಟ್ನಲ್ಲಿ ಮಾಡಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ಪಾತ್ರಕ್ಕೆ ತೂಕ ಇದೆ ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಸದ್ಯ ಹಲವು ಸಿನಿಮಾಗಳು ಇವೆ. ‘ಪುಷ್ಪ 2’ ಹಾಗೂ ‘ಛಾವ್ವಾ’ ಸಿನಿಮಾಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳು ಡಿಸೆಂಬರ್ 6ರಂದು ರಿಲೀಸ್ ಆಗಲಿದೆ. ಇದರ ಜೊತೆಗೆ ಸಲ್ಮಾನ್ ಖಾನ್ ನಟನೆಯ ‘ಸಿಖಂದರ್’ ಸಿನಿಮಾ ಮಾಡುತ್ತಿದ್ದಾರೆ. ಧನುಷ್ ಚಿತ್ರಕ್ಕೂ ಅವರು ನಾಯಕಿ. ಇವುಗಳ ಜೊತೆಗೆ ಅವರ ಕೈಯಲ್ಲಿ ಮತ್ತೊಂದು ಸಿನಿಮಾ ಸೇರಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ