Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​

Pushpa 2 Pooja Ceremony: ‘ಪುಷ್ಪ’ ಚಿತ್ರದ ಮೊದಲ ಪಾರ್ಟ್​ಗೆ ಹೋಲಿಸಿದರೆ ಎರಡನೇ ಪಾರ್ಟ್​ನ ಬಜೆಟ್​ ಹೆಚ್ಚಾಗುತ್ತಿದೆ. ಅದ್ದೂರಿಯಾಗಿ ಈ ಸಿನಿಮಾವನ್ನು ಕಟ್ಟಿಕೊಡಲು ತೀರ್ಮಾನಿಸಲಾಗಿದೆ.

Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Aug 22, 2022 | 8:15 AM

ಇಷ್ಟು ದಿನ ಅಲ್ಲು ಅರ್ಜುನ್ (Allu Arjun)​ ಅಭಿಮಾನಿಗಳು ಕೇಳುತ್ತಿದ್ದ ಪ್ರಶ್ನೆ ಒಂದೇ; ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ ಯಾವಾಗ ಶುರುವಾಗುತ್ತೆ? ಅದಕ್ಕೀಗ ಉತ್ತರ ಸಿಕ್ಕಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಮುಹೂರ್ತ ನೆರವೇರಿಸುವ ಸಮಯ ಬಂದಿದೆ. ಇಂದು (ಆಗಸ್ಟ್​ 22) ಮುಹೂರ್ತ ನಡೆಯಲಿದೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ (Rashmika Mandanna) ಸೇರಿದಂತೆ ಹಲವರು ಈ ಸಂದರ್ಭಕ್ಕೆ ಸಾಕ್ಷಿ ಆಗಲಿದ್ದಾರೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಅದರ ಸೀಕ್ವೆಲ್​ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಎರಡನೇ ಪಾರ್ಟ್​ ಹೇಗಿರಬಹುದು ಎಂದು ತಿಳಿದುಕೊಳ್ಳುವ ಕೌತುಕ ಎಲ್ಲರಲ್ಲೂ ಮನೆ ಮಾಡಿದೆ. ಸಾಕಷ್ಟು ತಯಾರಿ ಮಾಡಿಕೊಂಡು ನಿರ್ದೇಶಕ ಸುಕುಮಾರ್​ ಅವರು ಶೂಟಿಂಗ್​ ಆರಂಭಿಸುತ್ತಿದ್ದಾರೆ. ಅದರ ಮೊದಲ ಹಂತವಾಗಿ ಮುಹೂರ್ತ ನೆರವೇರಿಸಲಾಗುತ್ತಿದೆ.

‘ಪುಷ್ಪ’ ಟಾಲಿವುಡ್​ ಸಿನಿಮಾ ಆಗಿದ್ದರೂ ಕೂಡ ದೇಶದ ಎಲ್ಲ ರಾಜ್ಯಗಳಲ್ಲೂ ಧೂಳೆಬ್ಬಿಸಿತ್ತು. 2021ರ ಡಿಸೆಂಬರ್​ನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಹಿಂದಿ ಪ್ರೇಕ್ಷಕರು ಮುಗಿಬಿದ್ದು ನೋಡಿದರು. ಪರಿಣಾಮವಾಗಿ ಹಿಂದಿ ವರ್ಷನ್​ನಿಂದಲೇ ನೂರು ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಯಿತು. ಈಗ ಎರಡನೇ ಪಾರ್ಟ್​ ಶೂಟಿಂಗ್​ ಶುರುವಾಗುತ್ತಿದೆ. ಈ ಮಾಹಿತಿಯನ್ನು ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಖಚಿತ ಪಡಿಸಿದೆ.

ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಅವರು ಜೋಡಿಯಾಗಿ ‘ಪುಷ್ಪ 2’ ಚಿತ್ರದಲ್ಲಿ ನಟಿಸಲಿದ್ದಾರೆ. ಪಾತ್ರವರ್ಗಕ್ಕೆ ಹೊಸದಾಗಿ ಯಾರೆಲ್ಲ ಸೇರ್ಪಡೆ ಆಗುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮೊದಲ ಪಾರ್ಟ್​ನಲ್ಲಿ ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದವರು ಧೂಳೆಬ್ಬಿಸಿದ್ದರು. ಈಗ ಎರಡನೇ ಪಾರ್ಟ್​ನಲ್ಲಿ ಕೆಲವು ಘಟಾನುಘಟಿ ಕಲಾವಿದರು ಸೇರ್ಪಡೆ ಆಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಮೊದಲ ಪಾರ್ಟ್​ಗೆ ಹೋಲಿಸಿದರೆ ಎರಡನೇ ಪಾರ್ಟ್​ಗಾಗಿ ಬಜೆಟ್​ ಕೂಡ ಹೆಚ್ಚಾಗುತ್ತಿದೆ. ಅದ್ದೂರಿಯಾಗಿ ಈ ಚಿತ್ರವನ್ನು ಕಟ್ಟಿಕೊಡಲು ತೀರ್ಮಾನಿಸಲಾಗಿದೆ. ಮುಹೂರ್ತದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಚಿತ್ರತಂಡವು ‘ಭಾರತದ ಬಹುನಿರೀಕ್ಷಿತ ಸಿನಿಮಾ’ ಎಂದು ಕರೆದುಕೊಳ್ಳುವ ಮೂಲಕ ಸೆನ್ಸೇಷನ್​ ಸೃಷ್ಟಿ ಮಾಡಿದೆ.

‘ಪುಷ್ಪ’ ಸಿನಿಮಾದಿಂದ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶಸ್ಸು ಸಿಕ್ಕಿತು. ಈವರೆಗೂ ಪ್ರೇಕ್ಷಕರು ನೋಡಿರುವುದು ಅರ್ಧ ಕಥೆ ಮಾತ್ರ. ರಕ್ತಚಂದನ ಸಾಗಣೆಯ ದಂಧೆ ಮೇಲೆ ಹಿಡಿತ ಸಾಧಿಸಿದ ಕಥಾನಾಯಕ ಪುಷ್ಪರಾಜ್​ ಬದುಕಿನಲ್ಲಿ ಮುಂದೇನಾಯಿತು ಎಂಬುದನ್ನು ತಿಳಿಯುವ ಕುತೂಹಲ ಪ್ರೇಕ್ಷಕರಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:15 am, Mon, 22 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ