AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

Rashmika Mandanna | Allu Arjun: ಈಗಾಗಲೇ ಎಲ್ಲ ಕಡೆ ಪುಷ್ಪ ಎಂಬ ಹೆಸರು ಹೈಲೈಟ್​ ಆಗಿದೆ. ಆದರೆ ಈಗ ಶೀರ್ಷಿಕೆ ಬದಲಾವಣೆಯ ಬಗ್ಗೆ ಗುಸುಗುಸು ಕೇಳಿಬರುತ್ತದೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?
ರಶ್ಮಿಕಾ ಮಂದಣ್ಣ - ಅಲ್ಲು ಅರ್ಜುನ್
ಮದನ್​ ಕುಮಾರ್​
| Edited By: |

Updated on:May 18, 2021 | 12:57 PM

Share

ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಜೋಡಿಯಾಗಿ ನಟಿಸಿರುವ ‘ಪುಷ್ಪ’ ಸಿನಿಮಾದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸುಕುಮಾರ್​ ಅವರು ಇದಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ ನೋಡಿರುವ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರಲಿದೆ ಎಂಬ ಸುದ್ದಿ ಕೇಳಿ ಸಿನಿಪ್ರಿಯರು ಖುಷಿ ಆಗಿದ್ದಾರೆ. ಅಚ್ಚರಿ ಏನೆಂದರೆ, ಈ ಚಿತ್ರಕ್ಕೆ ಹೆಸರು ಬದಲಾವಣೆ ಮಾಡುವ ಬಗ್ಗೆ ಚಿತ್ರತಂಡದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.

ಈಗಾಗಲೇ ಎಲ್ಲ ಕಡೆ ಪುಷ್ಪ ಎಂಬ ಹೆಸರು ಹೈಲೈಟ್​ ಆಗಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿತ್ರಕ್ಕೆ ಪುಷ್ಪ ಎಂಬ ಟೈಟಲ್​ ಇಡಲಾಯಿತು. ಆದರೆ ಈಗ ಶೀರ್ಷಿಕೆ ಬದಲಾವಣೆಯ ಬಗ್ಗೆ ಗುಸುಗುಸು ಕೇಳಿಬರುತ್ತದೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿರುವುದರಿಂದ ಎರಡೂ ಪಾರ್ಟ್​ಗಳಿಗೆ ಬೇರೆ ಬೇರೆ ಹೆಸರು ಇದ್ದರೆ ಉತ್ತಮ ಎಂಬ ಅಭಿಪ್ರಾಯ ಚಿತ್ರತಂಡದವರಲ್ಲಿ ಮೂಡಿದೆ ಎನ್ನಲಾಗಿದೆ.

ಮೊದಲ ಪಾರ್ಟ್​ಗೆ ‘ಪುಷ್ಪ’ ಎಂಬ ಶೀರ್ಷಿಕೆಯೇ ಇರಲಿದೆ. ಆದರೆ ಎರಡನೇ ಪಾರ್ಟ್​ಗೆ ‘ಪುಷ್ಪ 2’ ಎಂದು ಟೈಟಲ್​ ಇಡುವ ಬದಲು ಬೇರೆ ಏನಾದರೂ ಶೀರ್ಷಿಕೆ ಇಟ್ಟರೆ ಒಳಿತು ಎಂದು ನಿರ್ದೇಶಕ ಸುಕುಮಾರ್​ ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಂತಿಮವಾಗಿ ಅವರು ಯಾವ ಹೆಸರು ಆಯ್ಕೆ ಮಾಡಲಿದ್ದಾರೆ ಎಂಬ ಕುತೂಹಲ ಈಗ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮೊದಲ ಪಾರ್ಟ್​ಗೆ ಇನ್ನೂ ಒಂದು ತಿಂಗಳು ಶೂಟಿಂಗ್​ ಬಾಕಿ ಇದ್ದು, ಕೊರೊನಾ ವೈರಸ್​ ಕಾರಣದಿಂದ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲಾಗಿದೆ. ಆದಷ್ಟು ಬೇಗ ಕೊರೊನಾ ಹಾವಳಿ ಕಡಿಮೆಯಾದರೆ ಈ ವರ್ಷವೇ ಪುಷ್ಪ ಬಿಡುಗಡೆ ಆಗಬಹುದು. ಇಲ್ಲದಿದ್ದರೆ ಮುಂದಿನ ವರ್ಷಕ್ಕೆ ಕಾಯಬೇಕಾಗುವುದು ಅನಿವಾರ್ಯ. ಈ ಸಿನಿಮಾ ಮೇಲೆ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ನೀಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ:

ತಮಿಳು ಹುಡುಗನನ್ನು ಮದುವೆ ಆಗ್ತಾರಾ ರಶ್ಮಿಕಾ ಮಂದಣ್ಣ? ಹರಿದಾಡುತ್ತಿದೆ ಹೊಸ ಗಾಸಿಪ್​

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Published On - 12:12 pm, Tue, 18 May 21

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು