ರಶ್ಮಿಕಾ ಮಂದಣ್ಣ (Rashmika Mandanna) ಅವರು ಬಾಲಿವುಡ್ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ದೊಡ್ಡ ಬೇಡಿಕೆ ಸೃಷ್ಟಿ ಆಗಿದೆ. ಹಾಗಂತ ಈವರೆಗೆ ಅವರ ಯಾವುದೇ ಬಾಲಿವುಡ್ ಸಿನಿಮಾ ರಿಲೀಸ್ ಆಗಿಲ್ಲ. ಆದರೂ ಅವರಿಗೆ ಇರುವ ಬೇಡಿಕೆ ಹೆಚ್ಚುತ್ತಲೇ ಇದೆ. ಇನ್ನು ಕಾರ್ತಿಕ್ ಆರ್ಯನ್ (Kartik Aryan) ಅವರು ಬಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಏನೆಂಬುದನ್ನು ಸಾಬೀತು ಮಾಡಿ ತೋರಿಸಿದ್ದಾರೆ. ಈಗ ಇವರಿಬ್ಬರೂ ಒಂದಾಗಿದ್ದಾರೆ. ಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಹಾಗಂತ ಇದು ಹೊಸ ಸಿನಿಮಾಗಾಗಿ ಅಲ್ಲ, ಬ್ರ್ಯಾಂಡ್ ಒಂದರ ಪ್ರಮೋಷನ್ಗಾಗಿ.
ಅನೇಕ ಸೆಲೆಬ್ರಿಟಿಗಳು ನಟನೆಯ ಜತೆಗೆ ಬ್ರ್ಯಾಂಡ್ ಪ್ರಚಾರದಲ್ಲಿ ಭಾಗಿ ಆಗುತ್ತಾರೆ. ನಟಿ ರಶ್ಮಿಕಾ ಮಂದಣ್ಣ ಅವರಿಗಂತೂ ಈ ರೀತಿಯ ಹಲವು ಆಫರ್ಗಳು ಬರುತ್ತಿವೆ. ಅವರ ಜನಪ್ರಿಯತೆ ಕಾರಣದಿಂದ ಸಾಕಷ್ಟು ಬ್ರ್ಯಾಂಡ್ಗಳು ರಶ್ಮಿಕಾ ಅವರನ್ನು ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳುತ್ತಿವೆ. ಇದು ರಶ್ಮಿಕಾಗೆ ಖುಷಿ ನೀಡಿದೆ. ಅಲ್ಲದೆ, ಸಾಕಷ್ಟು ಹಣ ಕೂಡ ಅವರಿಗೆ ಸಿಗುತ್ತಿದೆ.
ರಶ್ಮಿಕಾ ಹಾಗೂ ಕಾರ್ತಿಕ್ ಆರ್ಯನ್ ಅವರು ಕ್ರೀಮ್ ಒಂದರ ಪ್ರಮೋಷನ್ಗೆ ಒಂದಾಗಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರ ಜೋಡಿ ಅಭಿಮಾನಿಗಳಿಗೆ ಇಷ್ಟವಾಗಿದೆ. ಈ ಕಾರಣಕ್ಕೆ ‘ಆಶಿಕಿ 3’ ಸಿನಿಮಾದಲ್ಲಿ ಇವರು ಒಟ್ಟಾಗಿ ನಟಿಸುವಂತೆ ಫ್ಯಾನ್ಸ್ ಕೋರುತ್ತಿದ್ದಾರೆ.
‘ಆಶಿಕಿ 2’ ಸಿನಿಮಾ ಸೂಪರ್ ಹಿಟ್ ಆಯಿತು. ಆದಿತ್ಯ ರಾಯ್ ಕಪೂರ್ ಹಾಗೂ ಶ್ರದ್ಧಾ ಕಪೂರ್ ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಸ್ಯಾಡ್ ಎಂಡಿಂಗ್ ಇತ್ತು. ಅನೇಕರು ಕ್ಲೈಮ್ಯಾಕ್ಸ್ ಇಷ್ಟಪಟ್ಟಿದ್ದೂ ಇದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಹಿಟ್ ಆಗಿತ್ತು. ಈಗ ‘ಆಶಿಕಿ 3’ ಸಿನಿಮಾಗೆ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಈ ಕಾರಣಕ್ಕೆ ರಶ್ಮಿಕಾ-ಕಾರ್ತಿಕ್ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದರೆ ಉತ್ತಮ ಎಂಬುದು ಫ್ಯಾನ್ಸ್ ಕೋರಿಕೆ.
ಇದನ್ನೂ ಓದಿ: ಶೂಟಿಂಗ್ ಮುಗಿಯೋದಕ್ಕೂ ಮುನ್ನವೇ 120 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ರಶ್ಮಿಕಾ ಹೊಸ ಸಿನಿಮಾ
ರಶ್ಮಿಕಾ ಮಂದಣ್ಣ ನಟನೆಯ ‘ಗುಡ್ಬೈ’ ಚಿತ್ರ ರಿಲೀಸ್ಗೆ ರೆಡಿ ಇದೆ. ಅಮಿತಾಭ್ ಬಚ್ಚನ್ ಜತೆ ರಶ್ಮಿಕಾ ತೆರೆಹಂಚಿಕೊಂಡಿದ್ದಾರೆ. ಹೋದಲ್ಲಿ ಬಂದಲ್ಲಿ ಈ ಚಿತ್ರದ ಪ್ರಚಾರ ಮಾಡುತ್ತಿದ್ದಾರೆ ಅವರು. ಇದಲ್ಲದೆ, ‘ಮಿಷನ್ ಮಜ್ನು’, ‘ಅನಿಮಲ್’, ‘ಪುಷ್ಪ 2’, ‘ವಾರಿಸು’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.
Published On - 7:02 am, Fri, 16 September 22