ಮತ್ತೆ ಮುಂದುವರಿದ ಕಿಸ್ಸಿಂಗ್ ಸರಣಿ; ‘ಅನಿಮಲ್’ ಹೊಸ ಹಾಡಿನಲ್ಲಿ ರಣಬೀರ್-ರಶ್ಮಿಕಾ ಲಿಪ್ ಲಾಕ್
ರಶ್ಮಿಕಾ ಮಂದಣ್ಣ ಈ ರೀತಿಯ ಕಿಸ್ಸಿಂಗ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಲಿಪ್ ಲಾಕ್ ದೃಶ್ಯ ಇತ್ತು. ಈಗ ‘ಅನಿಮಲ್’ ಸಿನಿಮಾದಲ್ಲಿ ಅವರು ರಣಬೀರ್ ಕಪೂರ್ ಜೊತೆ ಲಿಪ್ ಲಾಕ್ ಮಾಡಿದ್ದಾರೆ.
ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಚಿತ್ರ ಡಿಸೆಂಬರ್ 1ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇತ್ತೀಚೆಗೆ ರಿಲೀಸ್ ಆದ ಈ ಸಿನಿಮಾದ ‘ಹುವಾ ಮೇ..’ ಹಾಡಿನಲ್ಲಿ ಲಿಪ್ ಲಾಕ್ ದೃಶ್ಯಗಳು ಹೇರಳವಾಗಿ ಇದ್ದವು. ಈಗ, ‘ಸತ್ರಂಗ..’ ಹೆಸರಿನ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲೂ ಲಿಪ್ ಲಾಕ್ ದೃಶ್ಯ ಇದೆ. ಈ ಸಾಂಗ್ ರಿಲೀಸ್ ಆದ 15 ಗಂಟೆಯಲ್ಲಿ ಒಂದೂವರೆ ಕೋಟಿ ವೀಕ್ಷಣೆ ಕಂಡಿದೆ.
ರಶ್ಮಿಕಾ ಮಂದಣ್ಣ ಈ ರೀತಿಯ ಕಿಸ್ಸಿಂಗ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಲಿಪ್ ಲಾಕ್ ದೃಶ್ಯ ಇತ್ತು. ಈಗ ‘ಅನಿಮಲ್’ ಸಿನಿಮಾದಲ್ಲಿ ಅವರು ರಣಬೀರ್ ಕಪೂರ್ ಜೊತೆ ಲಿಪ್ ಲಾಕ್ ಮಾಡಿದ್ದಾರೆ. ಈಗ ರಿಲೀಸ್ ಆಗಿರೋ ‘ಸತ್ರಂಗ..’ ಹಾಡು ಕೂಡ ಗಮನ ಸೆಳೆಯುತ್ತಿದೆ.
ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ನಿರ್ದೇಶನ ಮಾಡಿದ್ದ ‘ಅರ್ಜುನ್ ರೆಡ್ಡಿ’ ಚಿತ್ರದಲ್ಲೂ ಸಾಕಷ್ಟು ಬೋಲ್ಡ್ ದೃಶ್ಯಗಳು ಇದ್ದವು. ಅದು ‘ಅನಿಮಲ್’ ಸಿನಿಮಾದಲ್ಲೂ ಮುಂದುವರಿದಂತೆ ಇದೆ. ರಣಬೀರ್ ಕಪೂರ್ ಅವರ ಪತ್ನಿಯಾಗಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ನೀರಿನಲ್ಲಿ ಮುಳುಗುತ್ತಿರುವ ಗರ್ಲ್ಫ್ರೆಂಡ್ ರಶ್ಮಿಕಾ ಮಂದಣ್ಣ: ಕಾಪಾಡುವ ನಾಯಕ ಯಾರು?
ರಶ್ಮಿಕಾ ಮಂದಣ್ಣ ಅವರ ಲಿಪ್ ಲಾಕ್ ದೃಶ್ಯಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದೊಂದು ರೀತಿಯ ಚರ್ಚೆ ನಡೆಯುತ್ತಿದೆ. ಕೆಲವರು ನಟಿಯನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅವರನ್ನು ತೆಗಳಿದ್ದಾರೆ. ‘ಅನಿಮಲ್’ ಚಿತ್ರಕ್ಕೆ ಭೂಷಣ್ ಕುಮಾರ್, ಪ್ರಣಯ್ ರೆಡ್ಡಿ ವಂಗ ಮೊದಲಾದವರು ಬಂಡವಾಳ ಹೂಡಿದ್ದಾರೆ. ರಣಬೀರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:43 am, Sat, 28 October 23