Rashmika Mandanna: ಬ್ರೇಕಪ್​ ಸುಳಿವು ನೀಡಿದ ರಶ್ಮಿಕಾ ಮಂದಣ್ಣ: ನಟಿಯ ಜೀವನದಿಂದ ಈಗ ದೂರಾಗಿದ್ದು ಯಾರು?

ಸೆಲೆಬ್ರಿಟಿಗಳ ಜೀವನದಲ್ಲಿ ಲವ್​ ಮತ್ತು ಬ್ರೇಕಪ್​ ತುಂಬ ಕಾಮನ್​ ಎಂಬಂತೆ ಆಗಿದೆ. ಈಗ ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ವಿಚಾರದ ಬಗ್ಗೆ ಒಂದು ಅನುಮಾನ ಮೂಡಿದೆ.

Rashmika Mandanna: ಬ್ರೇಕಪ್​ ಸುಳಿವು ನೀಡಿದ ರಶ್ಮಿಕಾ ಮಂದಣ್ಣ: ನಟಿಯ ಜೀವನದಿಂದ ಈಗ ದೂರಾಗಿದ್ದು ಯಾರು?
ರಶ್ಮಿಕಾ ಮಂದಣ್ಣ

Updated on: Jul 06, 2023 | 6:22 PM

ರಿಲೇಷನ್​ಶಿಪ್ ವಿಚಾರದಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಾಧ್ಯವಾದಷ್ಟು ಗೌಪ್ಯತೆ ಕಾಯ್ದುಕೊಳ್ಳುತ್ತಾರೆ. ರಕ್ಷಿತ್​ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದುಕೊಂಡ ಬಳಿಕ ಅವರು ವೃತ್ತಿಜೀವನದ ಕಡೆಗೆ ಹೆಚ್ಚು ಗಮನ ಹರಿಸಿದರು. ಹಾಗಿದ್ದರೂ ಕೂಡ ಅವರು ವೈಯಕ್ತಿಕ ಕಾರಣಕ್ಕಾಗಿ ಆಗಾಗ ಸುದ್ದಿ ಆಗುತ್ತಲೇ ಇದ್ದರು. ಟಾಲಿವುಡ್​ ನಟ ವಿಜಯ್​ ದೇವರಕೊಂಡ (Vijay Devarakonda) ಜೊತೆ ರಶ್ಮಿಕಾ ಮಂದಣ್ಣ ಹೆಚ್ಚು ಆಪ್ತವಾಗಿದ್ದಾರೆ. ಆದರೆ ತಮ್ಮ ರಿಲೇಷನ್​ಶಿಪ್​ ಬಗ್ಗೆ ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿಲ್ಲ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ನಡುವೆ ಬಿರುಕು ಮೂಡಿರಬಹುದೇ ಎಂಬ ಅನುಮಾನ ಶುರುವಾಗಿದೆ. ಬ್ರೇಕಪ್​ (Breakup) ಸುದ್ದಿಗೆ ಪೂರಕವಾಗುವಂತಹ ವಿಡಿಯೋವನ್ನು ರಶ್ಮಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಜೀವನದಲ್ಲಿ ನಮ್ಮನ್ನು ಯಾರಾದರೂ ಬಿಟ್ಟು ಹೋದರೆ ಅದರ ಬಗ್ಗೆ ಜಾಸ್ತಿ ಚಿಂತೆ ಮಾಡಬಾರದು. ಆ ಬೆಳವಣಿಗೆಗೆ ಒಂದು ಅರ್ಥ ಇರುತ್ತದೆ. ಕಾಲ ಕಳೆದಂತೆ ಎಲ್ಲ ನೋವುಗಳು ಮಾಯವಾಗುತ್ತವೆ. ಹೊಸ ಜೀವನ ಸಿಗುತ್ತದೆ ಎಂಬರ್ಥ ಬರುವಂತಹ ಮೋಟಿವೇಷನಲ್​ ವಿಡಿಯೋವನ್ನು ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಎಲ್ಲರ ತಲೆಯಲ್ಲೂ ಅನುಮಾನದ ಪ್ರಶ್ನೆ ಹುಟ್ಟಿಕೊಂಡಿದೆ. ವಿಜಯ್​ ದೇವರಕೊಂಡ ಜೊತೆಗಿನ ಬ್ರೇಕಪ್​ಗೆ ಮುನ್ಸೂಚನೆಯಾಗಿ ಅವರು ಈ ವಿಡಿಯೋ ಹಂಚಿಕೊಂಡಿರಬಹುದೇ ಎಂದು ನೆಟ್ಟಿಗರು ಅನುಮಾನಪಟ್ಟಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ವೃತ್ತಿ ಏಳಿಗೆಗೆ ಕಾರಣವಾಗಿದ್ದ ಸ್ವಾಮೀಜಿಯಿಂದ ವಿಶೇಷ ಪೂಜೆ ಮಾಡಿಸಿದ ಮತ್ತೊಬ್ಬ ನಟಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ಮೊದಲ ಬಾರಿಗೆ ಜೊತೆಯಾಗಿ ನಟಿಸಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ. ಆ ಚಿತ್ರ ಸೂಪರ್​ ಹಿಟ್​ ಆಯಿತು. ಬಳಿಕ ಅವರು ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲಿ ತೆರೆ ಹಂಚಿಕೊಂಡರು. ಸಾರ್ವಜನಿಕವಾಗಿ ಅವರಿಬ್ಬರು ಅನೇಕ ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ಹಾಗಾಗಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಪ್ರೀತಿ ಚಿಗುರಿದೆ ಎಂದೇ ಜನರು ಭಾವಿಸಿದ್ದಾರೆ. ಈ ನಡುವೆ ಬ್ರೇಕಪ್​ ಬಗ್ಗೆ ಅಂತೆ-ಕಂತೆಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಪ್ರತಿಯೊಂದು ವಿಡಿಯೋ, ಫೋಟೋಗಳಿಗೂ ನೆಟ್ಟಿಗರು ಬೇರೆ ಬೇರೆ ಅರ್ಥ ಕಲ್ಪಿಸುತ್ತಾರೆ. ರಶ್ಮಿಕಾ ಮಂದಣ್ಣ ಅವರ ವಿಚಾರದಲ್ಲೂ ಹಾಗೆಯೇ ಆಗಿದೆ. ವ್ಯಕ್ತಿಗಳನ್ನು ಕಳೆದುಕೊಳ್ಳುವ ಬಗ್ಗೆ ರಶ್ಮಿಕಾ ಮಂದಣ್ಣ ಅವರು ಮೋಟಿವೇಷನಲ್​ ವಿಡಿಯೋ ಹಂಚಿಕೊಂಡಿರುವುದರಿಂದ ಇದು ಅವರ ಬ್ರೇಕಪ್​ಗೆ ಸಂಬಂಧಿಸಿದ್ದೇ ಇರಬಹುದು ಎಂದು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಸ್ಪಷ್ಟನೆ ನೀಡುವ ತನಕ ಚರ್ಚೆ ನಿಲ್ಲುವಂತೆ ಕಾಣುತ್ತಿಲ್ಲ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us